Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ – ಯುಪಿ ಮೂಲದ ಹೊಸ ಆಟಗಾರನಿಗೆ ಚಾನ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ – ಯುಪಿ ಮೂಲದ ಹೊಸ ಆಟಗಾರನಿಗೆ ಚಾನ್ಸ್

Cricket

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ – ಯುಪಿ ಮೂಲದ ಹೊಸ ಆಟಗಾರನಿಗೆ ಚಾನ್ಸ್

Public TV
Last updated: January 13, 2024 9:04 am
Public TV
Share
2 Min Read
Dhruv Jurel 1
SHARE

ನವದೆಹಲಿ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಭಾರತದ (Team India) 16 ಸದಸ್ಯರ ತಂಡವನ್ನು ಬಿಸಿಸಿಐ (BCCI) ಪ್ರಕಟಿಸಿದೆ. ಗಾಯದಿಂದ ಚೇತರಿಕೆ ಕಾಣುತ್ತಿರುವ ವೇಗಿ ಮೊಹಮ್ಮದ್ ಶಮಿ ಮತ್ತು ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಅವಕಾಶ ಪಡೆದಿಲ್ಲ. ಇಶಾನ್ ಕಿಶನ್ ಬದಲಿಗೆ ವಿಕೆಟ್ ಕೀಪರ್ ಆಗಿ ಹೊಸ ಆಟಗಾರನಿಗೆ ಸ್ಥಾನ ನೀಡಲಾಗಿದೆ.

ಇಶಾನ್ ಕಿಶನ್ ಅನುಪಸ್ಥಿತಿಯಲ್ಲಿ ಉತ್ತರ ಪ್ರದೇಶದ ಧ್ರುವ್ ಜುರೆಲ್‍ಗೆ (Dhruv Jurel) ಟೀಂ ಇಂಡಿಯಾದಲ್ಲಿ ಅವಕಾಶ ಸಿಕ್ಕಿದೆ. ಜುರೆಲ್ ಇದೇ ಮೊದಲ ಬಾರಿಗೆ ಭಾರತ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದು, ಟೀಂ ಇಂಡಿಯಾದ ಮೂವರು ವಿಕೆಟ್ ಕೀಪರ್‌ಗಳಲ್ಲಿ ಒಬ್ಬರಾಗಿದ್ದಾರೆ. ಕೆ.ಎಲ್ ರಾಹುಲ್, ಕೆಎಸ್ ಭರತ್ ದಕ್ಷಿಣ ಆಫ್ರಿಕಾ ಸರಣಿಗೂ ವಿಕೆಟ್ ಕೀಪರ್ ಆಗಿದ್ದರು. ಇದನ್ನೂ ಓದಿ: ಅಂಧ ಮಹಿಳೆಯರ ಕಣ್ಣಲ್ಲಿ ಗೆಲುವಿನ ಹೊಳಪು – ನ್ಯಾಷನಲ್‌ T20 ಕ್ರಿಕೆಟ್ ಟೂರ್ನಿಯಲ್ಲಿ ಒಡಿಶಾ ಚಾಂಪಿಯನ್

Dhruv Jurel

22 ವರ್ಷದ ಧ್ರುವ್ ಜುರೆಲ್ 2023ರ ಇಂಡಿಯನ್ ಪ್ರೀಮಿಯರ್ ಲೀಗ್ ಋತುವಿನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಪರ ಅಬ್ಬರದ ಇನ್ನಿಂಗ್ಸ್‌ಗಳನ್ನು ಆಡುವ ಮೂಲಕ ಕ್ರಿಕೆಟ್‍ನಲ್ಲಿ ಸಂಚಲನ ಸೃಷ್ಠಿಸಿದ್ದರು. ಭಾರತದ 2020ರ ಅಂಡರ್-19 ವಿಶ್ವಕಪ್ ತಂಡದ ಭಾಗವಾಗಿದ್ದರು. ಅಂದು ಭಾರತ ಫೈನಲ್ ತಲುಪಲು ಪ್ರಮುಖ ಪಾತ್ರವಹಿಸಿದ್ದರು. ಬಳಿಕ ತಂಡ ಫೈನಲ್‍ನಲ್ಲಿ ಬಾಂಗ್ಲಾದೇಶ ವಿರುದ್ಧ ಸೋತಿತ್ತು.

ಜುರೆಲ್ ಫೆಬ್ರವರಿ 2022ರಲ್ಲಿ ಉತ್ತರ ಪ್ರದೇಶ ತಂಡದಿಂದ ಪ್ರಥಮ ದರ್ಜೆ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ್ದರು. ಒಟ್ಟು 15 ಪಂದ್ಯಗಳಲ್ಲಿ 46.47ರ ಸರಾಸರಿಯಲ್ಲಿ 790 ರನ್ ಗಳಿಸಿದ್ದಾರೆ. ಒಂದು ಶತಕವನ್ನೂ ಸಿಡಿಸಿದ್ದಾರೆ. ಅವರು ಕಳೆದ ತಿಂಗಳು ದಕ್ಷಿಣ ಆಫ್ರಿಕಾಕ್ಕೆ ಪ್ರವಾಸ ಕೈಗೊಂಡಿದ್ದ ಭಾರತ-ಎ ತಂಡದ ಭಾಗವಾಗಿದ್ದರು.

ಇಶಾನ್ ಕಿಶನ್‍ರನ್ನು ಬಿಸಿಸಿಐ ಕೈಬಿಡಲು ಕಾರಣವೇನು?
ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೂ ಮುನ್ನ ಆಯಾಸವಾಗಿದೆ. ಕುಟುಂಬ ಸದಸ್ಯರೊಂದಿಗೆ ವಿಶ್ರಾಂತಿ ಪಡೆಯುವುದಾಗಿ ಹೇಳಿ ದುಬೈನಲ್ಲಿ ಪಾರ್ಟಿಗೆ ಹೋಗಿದ್ದ ಇಶಾನ್ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದೇ ಕಾರಣಕ್ಕೆ ಅಫ್ಘಾನಿಸ್ತಾನ ಟಿ20 ಸರಣಿಗೆ ಅವರನ್ನು ಆಯ್ಕೆ ಮಾಡಿರಲಿಲ್ಲ. ಇದೀಗ ಇಂಗ್ಲೆಂಡ್ ಟೆಸ್ಟ್ ಸರಣಿಯಿಂದಲೂ ಕೈಬಿಡಲಾಗಿದೆ. ಅವರು ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಗೆ ಬ್ಯಾಕಪ್ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದರು. ಬಳಿಕ ಭರತ್‍ಗೆ ಅವಕಾಶ ನೀಡಲಾಗಿತ್ತು.

ಮೊದಲ 2 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (ವಿಕೆಟ್ ಕೀಪರ್), ಕೆ.ಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್. ಇದನ್ನೂ ಓದಿ: ಅಫ್ಘಾನಿಸ್ತಾನ ವಿರುದ್ಧದ ಮೊದಲ ಟಿ20 – ಭಾರತಕ್ಕೆ ಗೆಲುವು!

Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Siddaramaiah Zameer Ahmed SS Mallikarjun
Bengaluru City

ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ!

Public TV
By Public TV
20 minutes ago
LPG Gas Shortage
Bagalkot

ಕೊಲ್ಲಿ ಕಾಳಗ ಎಫೆಕ್ಟ್ – ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

Public TV
By Public TV
40 minutes ago
AI War
Latest

ಯುದ್ಧ ಭೂಮಿಯಲ್ಲಿ AI – ಇರಾನ್‌ ಮೇಲಿನ ದಾಳಿಗೆ ʻಕ್ಲಾಡ್ʼ ಸಹಾಯ ಮಾಡಿದ್ದು ಹೇಗೆ?

Public TV
By Public TV
50 minutes ago
daily horoscope dina bhavishya
Astrology

ದಿನ ಭವಿಷ್ಯ 11-03-2026

Public TV
By Public TV
1 hour ago
supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
9 hours ago
dink couples
Latest

ಮಕ್ಕಳು ಬೇಡ, ಡಬಲ್‌ ಇನ್‌ಕಮ್‌ ಇರ್ಬೇಕು, ಲೈಫ್‌ ಎಂಜಾಯ್‌ ಮಾಡ್ಬೇಕು – ಭಾರತದಲ್ಲಿ ಹೆಚ್ಚಾಗ್ತಿದೆ ‘ಡಿಂಕ್‌ ಕಪಲ್ಸ್‌’ ಟ್ರೆಂಡ್‌

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?