55 ವರ್ಷಗಳ ಬಾಂಧವ್ಯ ಅಂತ್ಯಗೊಳಿಸಿದ್ದೇನೆ – ಕಾಂಗ್ರೆಸ್‌ಗೆ ಮಿಲಿಂದ್‌ ದಿಯೋರಾ ಗುಡ್‌ಬೈ

Public TV
1 Min Read
Milind Deora

ಮುಂಬೈ: ಕಾಂಗ್ರೆಸ್‌ ನಾಯಕ ಮಿಲಿಂದ್‌ ದಿಯೋರಾ (Milind Deora) ಅವರು, ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಶೀಘ್ರದಲ್ಲೇ ಸಿಎಂ ಏಕನಾಥ್‌ ಶಿಂದೆ (Eknath Shinde) ಬಣದ ಶಿವಸೇನೆ ಸೇರುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ದಿಯೋರಾ ಈ ಮಾಹಿತಿಯನ್ನು ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನನ್ನ ರಾಜಕೀಯ ಪ್ರಯಾಣದಲ್ಲಿ ಮಹತ್ವದ ಅಧ್ಯಾಯವೊಂದು ಮುಕ್ತಾಯಗೊಂಡಿದೆ. ಕಾಂಗ್ರೆಸ್‌ನ (Congress) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ಜೊತೆಗಿನ ನನ್ನ ಕುಟುಂಬದ 55 ವರ್ಷಗಳ ಬಾಂಧವ್ಯವನ್ನು ಕೊನೆಗೊಳಿಸಿದ್ದೇನೆ. ನಮ್ಮನ್ನು ಬೆಂಬಲಿಸಿದ ಎಲ್ಲ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ಕೃತಜ್ಞನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಆಹ್ವಾನ ಬಂದಿದ್ದು, ಜ.22 ರ ಬಳಿಕ ರಾಮಮಂದಿರಕ್ಕೆ ಭೇಟಿ ನೀಡುತ್ತೇನೆ: ಅಖಿಲೇಶ್‌ ಯಾದವ್‌

Milind Deora.jpg 2

ದಿಯೋರಾ ಅವರು ಏಕನಾಥ್‌ ಶಿಂದೆ ನೇತೃತ್ವದ ಶಿವಸೇನೆಗೆ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಮಮಂದಿರ ನಿರ್ಮಾಣವನ್ನು 74% ಮುಸ್ಲಿಮರು ಸಂಭ್ರಮಿಸ್ತಾರೆ: ಮುಸ್ಲಿಂ ರಾಷ್ಟ್ರೀಯ ಮಂಚ್

2004 ಮತ್ತು 2009ರಲ್ಲಿ ದಿಯೋರಾ ಮುಂಬೈ ದಕ್ಷಿಣ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್‌ನ ಹಿರಿಯ ನಾಯಕ, 7 ಬಾರಿಯ ಸಂಸದರಾಗಿದ್ದ ಮುರಳಿ ದಿಯೋರಾ ಅವರ ಮಗ. ಮಹಾರಾಷ್ಟ್ರದಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಪಕ್ಷದ ಜೊತೆಗೆ ಮುನಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಪಕ್ಷಕ್ಕೆ ಬರುವಂತೆ ಏಕನಾಥ ಶಿಂದೆ ನೇತೃತ್ವದ ಶಿವಸೇನೆ ಬಹಿರಂಗ ಆಹ್ವಾನ ನೀಡಿತ್ತು. ಇದನ್ನೂ ಓದಿ: ಲೋಕಸಭೆ ಗೆಲ್ಲಲು ಕಾಂಗ್ರೆಸ್‍ಗೆ ಮಹಿಳಾ ಅಭ್ಯರ್ಥಿಗಳೇ ಆಸರೆ- 3 ಕ್ಷೇತ್ರದಲ್ಲಿ ಆಯ್ಕೆ ಫೈನಲ್ 

Share This Article