Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡೇ ಬಂದ ವೃದ್ಧೆ; ಸರ್ಕಾರಕ್ಕೆ ಹೆಚ್‍ಡಿಕೆ ತರಾಟೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡೇ ಬಂದ ವೃದ್ಧೆ; ಸರ್ಕಾರಕ್ಕೆ ಹೆಚ್‍ಡಿಕೆ ತರಾಟೆ

Bengaluru City

ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡೇ ಬಂದ ವೃದ್ಧೆ; ಸರ್ಕಾರಕ್ಕೆ ಹೆಚ್‍ಡಿಕೆ ತರಾಟೆ

Public TV
Last updated: January 14, 2024 4:03 pm
Public TV
Share
2 Min Read
HDKumaraswamy
SHARE

ಬೆಂಗಳೂರು: ಮಾಸಾಶನಕ್ಕಾಗಿ (Pension) 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ದಾವಣಗೆರೆ (Davanagere) ಜಿಲ್ಲೆಯ ಅಜ್ಜಿಯೊಬ್ಬರು ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು (H.D.Kumaraswamy) ಆಘಾತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಇಂಥ ಅಶಕ್ತರನ್ನು ಸರ್ಕಾರ ನಿರ್ಲಕ್ಷ್ಯ ಮಾಡಬಾರದು. ನಿಯಮಿತವಾಗಿ ಮಾಸಾಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದ ಕಾಂಗ್ರೆಸ್ (Congress) ಸರ್ಕಾರ ಗ್ಯಾರಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ, ಆದರೆ ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಿಲಿಂದ್ ದಿಯೋರಾ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ: ಏಕನಾಥ್‌ ಶಿಂಧೆ

ರಾಜ್ಯ @INCKarnataka ಸರಕಾರದವರು ಗ್ಯಾರೆಂಟಿಗಳನ್ನು ಕೊಟ್ಟು ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಹಸನು ಮಾಡುವ ಮಾತು ಒಳ್ಳೆಯದೇ.. ಆದರೆ, ಜನಜೀವನ ಹೇಗೆ ಹಳಿ ತಪ್ಪುತ್ತಿದೆ ಎನ್ನುತ್ತಿರುವುದಕ್ಕೆ ಈ ದೃಶ್ಯವೇ ಜೀವಂತ ಸಾಕ್ಷಿ.
**
ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ… pic.twitter.com/cGqhQO6GMp

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 14, 2024

ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆ ತಗ್ಗಿಸುವಂತೆ ಮಾಡಿದೆ. ಈ ಘಟನೆ ಸರ್ಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದವರು. ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ದುಃಖವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದಾಗ ವೃದ್ಧರು, ವಿಕಲಚೇತನರು, ವಿಧವೆಯರು, ದೇವದಾಸಿಯರು ಸೇರಿ ಸಮಾಜದ ವಿವಿಧ ದುರ್ಬಲ ಜನರಿಗೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟಿದ್ದೇನೆ. ಅವರ ಆರ್ಥಿಕ ಸಬಲೀಕರಣಕ್ಕೆ ಕ್ರಮ ವಹಿಸಿದ್ದೆ. ವೃದ್ಧಾಪ್ಯ ವೇತನ ಹಾಗೂ ವಿಕಲಚೇತನರ ಮಾಸಾಶನವನ್ನು ಏರಿಕೆ ಮಾಡಿದ್ದೆ. ಕಷ್ಟದಲ್ಲಿರುವವರಿಗೆ ಆಸರೆ ಕೊಡುವುದು ಆಡಳಿತ ನಡೆಸುವವರ ಕರ್ತವ್ಯವಾಗಿದೆ. ಗೃಹಲಕ್ಷ್ಮಿಯರಿಗೆ 2000 ರೂ. ಕೊಡುತ್ತೀರಿ ಸರಿ. ಆದರೆ ಇಂತಹ ಅಸಂಖ್ಯಾತ ವೃದ್ಧ ಅಮ್ಮಂದಿರ ಪರಿಸ್ಥಿತಿ ಏನು? ಸರ್ಕಾರಕ್ಕೆ ಕನಿಕರ ಎನ್ನುವುದು ಇಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಸಂತೋಷ. ಆದರೆ ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಧಾಪ್ಯ ವೇತನ, ವಿಧವಾ ವೇತನವನ್ನು ಸಕಾಲಕ್ಕೆ ಮತ್ತು ನಿಯಮಿತವಾಗಿ ಬಿಡುಗಡೆ ಮಾಡಬೇಕು. ಮಾಸಾಶನಕ್ಕಾಗಿ ಈ ಅಜ್ಜಿ 5 ಕಿ.ಮೀ. ತೆವಳಿಕೊಂಡು ಬಂದ ದೃಶ್ಯಗಳು ಪುನರಾವರ್ತನೆ ಆಗಬಾರದು. ಕೂಡಲೇ ಆ ತಾಯಿಗೆ ಸರ್ಕಾರ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು. ಇಂತಹದ್ದನ್ನೂ ಕಾಂಗ್ರೆಸ್ ಸರ್ಕಾರ ಕಣ್ತೆರೆದು ನೋಡಲಿ ಎಂದು ಅವರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅನಂತ್‌ ಕುಮಾರ್‌, ಸಿದ್ದರಾಮಯ್ಯ ಕಾಲಿನ ಧೂಳಿಗೂ ಸಮನಲ್ಲ: ತಂಗಡಗಿ ವಾಗ್ದಾಳಿ

TAGGED:congressdavanagereh d kumaraswamyjdsPensionsiddaramaiahಕಾಂಗ್ರೆಸ್ಜೆಡಿಎಸ್ದಾವಣಗೆರೆಮಾಸಾಶನಹೆಚ್ ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

2nd PUC exam result ballari jail inmate pass
Bellary

2nd PUC ಪರೀಕ್ಷೆಯಲ್ಲಿ ಫಸ್ಟ್‌ ಕ್ಲಾಸ್‌ನಲ್ಲಿ ಪಾಸಾದ ಬಳ್ಳಾರಿ ಸೆಂಟ್ರಲ್‌ ಜೈಲಿನ ಕೈದಿ

Public TV
By Public TV
13 minutes ago
S Madhu Bangarappa
Bengaluru City

2nd PUC Result | 5,46,698 ವಿದ್ಯಾರ್ಥಿಗಳು ಪಾಸ್‌ – ಫಸ್ಟ್‌ ಟೈಮ್‌ ಶೇ.86.48 ಫಲಿತಾಂಶ: ಮಧು ಬಂಗಾರಪ್ಪ ಹರ್ಷ

Public TV
By Public TV
13 minutes ago
BENGALURU AIRPORT 8
Chikkaballapur

ದೇಶದಲ್ಲೇ ಫಸ್ಟ್‌| ಬೆಂಗ್ಳೂರು ಏರ್ಪೋರ್ಟ್‌ನಲ್ಲಿ ಇಂಡಿಗೋ ʻಡಿಜಿ ಯಾತ್ರಾʼ – ಸ್ಪರ್ಶರಹಿತ ಪ್ರಯಾಣಕ್ಕೆ ಯಶಸ್ವಿ ತಾಂತ್ರಿಕ ಪ್ರಯೋಗ

Public TV
By Public TV
40 minutes ago
Shehbaz Sharif
Latest

ಇರಾನ್‌-ಅಮೆರಿಕ ಕದನ ವಿರಾಮ; ಮಧ್ಯಸ್ಥಿಕೆ ವಹಿಸಿದ ಶೆಹಬಾಜ್‌ಗೆ ನೊಬೆಲ್‌ ಶಾಂತಿ ನೀಡುವಂತೆ ಪಾಕ್‌ನಲ್ಲಿ ಕೂಗು

Public TV
By Public TV
57 minutes ago
Bindu Student
Bengaluru Rural

2nd PUC Result | ಗ್ರಾಮೀಣ ಪ್ರತಿಭೆ ಬಿಂದು ಈಗ ಟಾಪರ್‌ – ವಿಜ್ಞಾನ ವಿಭಾಗದಲ್ಲಿ 597 ಅಂಕ

Public TV
By Public TV
1 hour ago
Weather
Bengaluru City

ಬೆಂಗಳೂರಿಗರೇ ಕೇರ್‌ಫುಲ್ – ಮುಂದಿನ ಮೂರು ದಿನ ನಗರದಲ್ಲಿ ಬಿಸಿ ಗಾಳಿ ಎಚ್ಚರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?