Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾವೇರಿ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸರ್ಕಾರದ ಉಡಾಫೆ, ತನಿಖೆಗೆ ಎಸ್‍ಐಟಿ ರಚಿಸಲಿ: ವಿಜಯೇಂದ್ರ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಾವೇರಿ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸರ್ಕಾರದ ಉಡಾಫೆ, ತನಿಖೆಗೆ ಎಸ್‍ಐಟಿ ರಚಿಸಲಿ: ವಿಜಯೇಂದ್ರ ಆಗ್ರಹ

Bengaluru City

ಹಾವೇರಿ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸರ್ಕಾರದ ಉಡಾಫೆ, ತನಿಖೆಗೆ ಎಸ್‍ಐಟಿ ರಚಿಸಲಿ: ವಿಜಯೇಂದ್ರ ಆಗ್ರಹ

Public TV
Last updated: January 15, 2024 6:36 pm
Public TV
Share
2 Min Read
VIJAYENDRA 1 1
SHARE

ಬೆಂಗಳೂರು: ಹಾವೇರಿಯಲ್ಲಿ (Haveri) ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದ ತನಿಖೆಗೆ ಸರ್ಕಾರ ಎಸ್‍ಐಟಿ ರಚನೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra )ಅವರು ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತಾಡಿದ ಅವರು, ಹಾವೇರಿ ಪ್ರಕರಣದಲ್ಲಿ ಬಿಜೆಪಿ (BJP) ರಾಜಕೀಯ ಮಾಡಲು ಬಯಸುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪದೇಪದೇ ಈ ರೀತಿಯ ಘಟನೆಗಳು ಆಗುತ್ತಿವೆ. ಬೆಳಗಾವಿ ಹಾಗೂ ಹಾವೇರಿಯ ಮಹಿಳೆಯರ ಮೇಲಿನ ದೌರ್ಜನ್ಯದಂತಹ ಘಟನೆಗಳು ನಾಚಿಕೆಗೇಡಿನ ಸಂಗತಿಯಾಗಿವೆ. ಈ ತಿಂಗಳ 7ರಂದು ಈ ಘಟನೆ ನಡೆದಿದೆ. ಈಗ ಒಂದು ವಾರ ಕಳೆದರೂ ಪೊಲೀಸರು ತಲೆ ಕೆಡಿಸಿಕೊಂಡಿಲ್ಲ. ಎಫ್‍ಐಆರ್ ಕೂಡ ದಾಖಲಿಸಿಲ್ಲ. ಮತ್ತೊಂದು ಕಡೆ ಈ ದುರ್ಘಟನೆಯನ್ನು ಮುಚ್ಚಿ ಹಾಕುವ ಪ್ರಯತ್ನ ಆಗುತ್ತಿದೆ. ಇದು ಬೇಸರದ ಮತ್ತು ಖಂಡನೀಯ ವಿಚಾರ ಎಂದಿದ್ದಾರೆ. ಇದನ್ನೂ ಓದಿ: ಪ್ರಕೃತಿಯ ವಿಸ್ಮಯಕ್ಕೆ ಸಾಕ್ಷಿಯಾದ ಸನ್ನಿಧಾನ- ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸಿದ ʼಭಾಸ್ಕರʼ

VIJAYENDRA 2

ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಇದು ಗಂಭೀರವಾದ ವಿಚಾರವಾಗಿದ್ದು, ಇದನ್ನು ರಾಜ್ಯ ಸರ್ಕಾರ ಹಗುರವಾಗಿ ಪರಿಗಣಿಸಿದೆ. ಪೊಲೀಸರು ರಾಜ್ಯ ಕಾಂಗ್ರೆಸ್ ಸರ್ಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ದುರ್ದೈವದ ಸಂಗತಿಯಾಗಿದೆ. ನಮ್ಮ ಪಕ್ಷದ ಹಿರಿಯರು ಅಲ್ಲಿಗೆ ಭೇಟಿ ಕೊಟ್ಟು ಸಾಂತ್ವನ ಹೇಳಿದ್ದಾರೆ. ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ವಿಶೇಷ ತನಿಖಾ ತಂಡ (SIT) ರಚಿಸಲು ಕೋರಿದ್ದೇವೆ. ಸರ್ಕಾರ ಇದನ್ನು ಮುಚ್ಚಿ ಹಾಕಬಾರದು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ರಾಜ್ಯ ಸರ್ಕಾರ ಮತ್ತು ಸಚಿವರು ಉಡಾಫೆ ಮಾತನಾಡುತ್ತಾರೆ. ಇದು ಹೆಣ್ಣಿನ ಮಾನದ, ಗೌರವದ ಪ್ರಶ್ನೆಯಾಗಿದೆ. ಎಸ್‍ಐಟಿ ರಚಿಸಲು ಆಗ್ರಹಿಸದೆ, ವಿಪಕ್ಷವಾಗಿ ನಾವು ಇನ್ನೇನು ಮಾಡಲು ಸಾಧ್ಯ ಎಂದು ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

2047ಕ್ಕೆ ವಿಕಸಿತ ಭಾರತದ ಸಂಕಲ್ಪವನ್ನು ಪ್ರಧಾನಿ ನರೇಂದ್ರ ಮೋದಿಯವರು ಹೊಂದಿದ್ದಾರೆ. ಅದನ್ನು ಈಡೇರಿಸಲು ಮತ್ತೊಮ್ಮೆ ಮೋದಿ ಸಂಕಲ್ಪಕ್ಕೆ ಜನತೆ ಭಾರೀ ಬೆಂಬಲ ನೀಡುತ್ತಿದ್ದಾರೆ. ಇವತ್ತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸೂಚನೆ ಮೇರೆಗೆ ಗೋಡೆ ಬರಹ ಆರಂಭಿಸಲಾಗಿದೆ. ಪ್ರತಿ ಬೂತ್‍ನಲ್ಲಿ 5 ಕಡೆ ಗೋಡೆ ಬರಹಕ್ಕೆ ಚಾಲನೆ ಕೊಡಲಾಗುತ್ತದೆ. 2024ಕ್ಕೆ ಮತ್ತೊಮ್ಮೆ ಮೋದಿ ಎಂಬುದು ದೇಶದ ಅಪೇಕ್ಷೆಯಾಗಿದೆ. ವಿಕಸಿತ ಭಾರತ ಸಂಕಲ್ಪದ ಮೂಲಕ ಮೋದಿಯವರ ಜನಪರ ಯೋಜನೆಗಳು ಜನರನ್ನು ತಲುಪುತ್ತಿವೆ. ರಾಜ್ಯದ ಜನತೆ ಕೂಡ ಬಿಜೆಪಿ ಹಾಗೂ ಮೋದಿಯವರ ಬಗ್ಗೆ ಬಹಳ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ನಾಳೆಯಿಂದ್ಲೇ ಪೂರ್ವಭಾವಿ ಪೂಜೆಗಳು ಆರಂಭ: ಚಂಪತ್‌ ರೈ

TAGGED:B.Y vijayendrabjpcongresshaveriಎಸ್‍ಐಟಿಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಹಾವೇರಿ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
15 minutes ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
23 minutes ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
51 minutes ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
1 hour ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
2 hours ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?