ಬೆಂಗಳೂರು: ಅಯೋಧ್ಯೆಯಲ್ಲಿ (Ayodhya) ರಾಮನ ಪ್ರಾಣಪ್ರತಿಷ್ಠಾಪನೆಗೆ (Prana Pratishtha) ರಾಜ್ಯದಿಂದ ಹೋಗುವ ಜನರಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸಬೇಕು. ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯದಂತೆ ಗೃಹಸಚಿವ ಜಿ. ಪರಮೇಶ್ವರ್ (G. Parameshwar) ಎಲ್ಲಾ ಎಸ್‍ಪಿಗಳಿಗೂ ಸೂಚನೆ ನೀಡಿದ್ದಾರೆ.
ರಾಜ್ಯದಿಂದ ಜನವರಿ 22 ರಂದು ಅಯೋಧ್ಯೆಯ ರಾಮಲಲ್ಲಾ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ರಾಜ್ಯದಿಂದ ಸಾಕಷ್ಟು ಜನ ಹೋಗುತ್ತಾರೆ. ರಾಮ ಭಕ್ತರಿಗೆ ಯಾವುದೇ ತೊಂದರೆಯಾಗಬಾರದು. ಯಾವುದೇ ಅಹಿತಕರ ಘಟನೆಗಳು ನಡೆಯಬಾರದು. ಹೀಗಾಗಿ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ಎಸ್‍ಪಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ- ಹುಬ್ಬಳ್ಳಿಯ ಕರಸೇವಕರ ಸಂಭ್ರಮ
ರಾಮಭಕ್ತರು ಅಯೋಧ್ಯೆಗೆ ಹೋಗುವ ವೇಳೆ ಹಾಗೂ ಈ ಕಾರ್ಯಕ್ರಮದ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಿ. ಎಲ್ಲರೂ ಅಲರ್ಟ್ ಆಗಿ ಇರಬೇಕು ಎಂದು ಅವರು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಅನ್ನೋದು ನಾಯಕರ ಕೆಲಸವಲ್ಲ: ಮೋದಿ ವಿರುದ್ಧ ದೀದಿ ವಾಗ್ದಾಳಿ