ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ? – ಬಿಜೆಪಿ ತಿರುಗೇಟು

Public TV
2 Min Read
KN Rajanna 1

ಬೆಂಗಳೂರು: ಶ್ರೀರಾಮನ ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ? ಎಂದು ಬಿಜೆಪಿ (BJP), ಸಚಿವ ರಾಜಣ್ಣ (KN Rajanna) ಅವರಿಗೆ ತಿರುಗೇಟು ನೀಡಿದೆ.

ʻಒಂದು ಟೆಂಟ್‌ನಲ್ಲಿ ಎರಡು ಗೊಂಬೆ ಇಟ್ಟು ಇದೇ ಶ್ರೀರಾಮ ಅಂತ ಹೇಳ್ತಿದ್ರುʼ ಎಂಬ ಸಚಿವ ಕೆ.ಎನ್‌ ರಾಜಣ್ಣ ಹೇಳಿಕೆ ಕುರಿತು ಸೋಶಿಯಲ್‌ ಮೀಡಿಯಾ X ಮೂಲಕ ಪ್ರತಿಕ್ರಿಯಿಸಿದ ಬಿಜೆಪಿ, ಶ್ರೀರಾಮನ (Shri Rama) ಶಕ್ತಿ, ಹನುಮನ ಭಕ್ತಿಯ ಕೆಣಕಿದ ರಾವಣನೇ ಉಳಿಯಲಿಲ್ಲ, ರಾಜಣ್ಣ ಯಾವ ಲೆಕ್ಕ? ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಮುದ್ದಹನುಮೇಗೌಡ ಕಾಂಗ್ರೆಸ್ ‌ಸೇರ್ಪಡೆ ದಿನಾಂಕ ಹೈಕಮಾಂಡ್ ತೀರ್ಮಾನ ಮಾಡುತ್ತೆ: ಸಚಿವ ಪರಮೇಶ್ವರ್

ಹಿಂದೂ ಧರ್ಮವನ್ನು ಅವಹೇಳನ ಮಾಡುವುದು, ಹಿಂದೂ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದು ಕಾಂಗ್ರೆಸ್‌ ಪಕ್ಷಕ್ಕೆ ಅಂಟಿದ ಕುಷ್ಠ ರೋಗವಿದ್ದಂತೆ. ಶತ ಶತಮಾನಗಳ ಕೋಟ್ಯಂತರ ರಾಮಭಕ್ತರ ಹೋರಾಟ, ಸಹಸ್ರಾರು ಕರಸೇವಕರ ಬಲಿದಾನಗಳಿಂದ ಭವ್ಯ ರಾಮಮಂದಿರದಲ್ಲಿ ಬಾಲರಾಮ ನೆಲೆಸುತ್ತಿರುವ ಸಮಯದಲ್ಲಿ, ಶ್ರೀರಾಮ ಸೀತೆಯರನ್ನು ಗೊಂಬೆಗೆ ಹೋಲಿಸುತ್ತಿರುವ ಸಹಕಾರ ಸಚಿವ ರಾಜಣ್ಣರವರೇ, ನಾಡಿನ ಜನರಷ್ಟೇ ಅಲ್ಲ, ನಿಮ್ಮನ್ನು ಕಾಂಗ್ರೆಸ್‌ ಕಾರ್ಯಕರ್ತರೂ ಕ್ಷಮಿಸಲಾರರು ಎಂದು ಅಸಮಾಧಾನ ಹೊರಹಾಕಿದೆ.

ಅಧಿಕಾರದ ಮದ, ಕಾಂಗ್ರೆಸ್ ಗುಲಾಮಿತನದಿಂದ ಹೊರಬಂದು, ನಿಮ್ಮ ಕ್ಷೇತ್ರದ ಮತದಾರರನ್ನಾದರೂ ಕೇಳಿ, ನಿಮ್ಮ ಕುಟುಂಬಸ್ಥರನ್ನಾದರೂ ಕೇಳಿ ತಿಳಿಯಿರಿ ಎಂದು ಕುಟುಕಿದೆ. ಇದನ್ನೂ ಓದಿ: ವಿಮಾನದ ಟಾಯ್ಲೆಟ್ ಡೋರ್ ಲಾಕ್ – ಮುಂಬೈನಿಂದ ಬೆಂಗಳೂರಿಗೆ ಟಾಯ್ಲೆಟಲ್ಲೇ ಕೂತು ಪ್ರಯಾಣ!

ಸಚಿವ ರಾಜಣ್ಣ ಟೀಕೆ ಏನು?
ತುಮಕೂರಿನಲ್ಲಿ ಮಂಗಳವಾರ ನಡೆದ ಹಿಂದುಳಿದ ವರ್ಗಗಳ ಒಕ್ಕೂಟ ಸಮಾವೇಶದಲ್ಲಿ ಮಾತನಾಡಿದ ಸಚಿವ ರಾಜಣ್ಣ, ನಾನು ಬಾಬ್ರಿ ಮಸೀದಿ ಬೀಳಿಸಿದ್ದಾಗ ಅಲ್ಲಿಗೆ ಹೋಗಿದ್ದೆ. ಒಂದು ಟೆಂಟ್ ಅಲ್ಲಿ ಎರಡು ಗೊಂಬೆ ಇಟ್ಟು ಇದೇ ಶ್ರೀರಾಮ ಅಂತಾ ಹೇಳ್ತಿದ್ರು. ಟೂರಿಂಗ್ ಟಾಕೀಸ್ ಅಲ್ಲಿ ಗೊಂಬೆ ಇಟ್ಟಿದ್ದಾರೆ ಅನಿಸ್ತು. ಇದನ್ನೂ ಓದಿ: ಮೈಸೂರಿನ ಶಿಲ್ಪಿ ಕೆತ್ತಿರುವ ರಾಮಲಲ್ಲಾ ಮೂರ್ತಿ ಇಂದು ರಾಮಮಂದಿರ ಪ್ರವೇಶ – ದೇವಾಲಯದ ಸುತ್ತ ಪ್ರದಕ್ಷಿಣೆ

ಈಗೆಲ್ಲಾ ಶ್ರೀರಾಮನ ದೇವಸ್ಥಾನ ಕಟ್ಟಿಸ್ತಿದ್ದಾರೆ ಅಲ್ಲಿ. ಇನ್ನೊಂದು ಐದಾರು ತಿಂಗಳು ಕಳೀಲಿ ಏನೇನ್ ಬರ್ತವೆ, ಏನೇನು ಅಂತೇಳಿ. ಯಾವತ್ತೂ ಕೂಡ ಶ್ರೀರಾಮ ಎಲ್ಲಾ ಜನರನ್ನ ಆಶೀರ್ವದಿಸುವ ದೇವರು. ಅದಕ್ಕೋಸ್ಕರ ರಾಮರಾಜ್ಯದ ಕಲ್ಪನೆ ಬಂದಿದ್ದು. ಈಗ ಅದು ಬಿಜೆಪಿ ಶ್ರೀರಾಮನೋ, ಮೋದಿ ಶ್ರೀರಾಮನೋ ನೋಡೋಣ. ಅದು ಏನಾಗುತ್ತೆ ಅಂತಾ. ನಮ್ಮೂರಲ್ಲಿ ನೂರಾರು ವರ್ಷ ಇತಿಹಾಸ ಇರುವಂತಹ, ಪಾವಿತ್ರ‍್ಯವಾಗಿರುವ ಶ್ರೀರಾಮನ ದೇವಸ್ಥಾನಗಳಿವೆ. ಈಗ ಅದನ್ನ ಬಿಟ್ಟು ಇವರು ಚುನಾವಣೆಗೋಸ್ಕರ ದೇವಸ್ಥಾನಗಳನ್ನ ಕಟ್ಟಿ, ಜನರಿಗೆ ಮೋಸ ಮಾಡೋ ಕೆಲಸ ಮಾಡ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

Share This Article