ಜ.18ರಂದು ಚಿಕ್ಕಬಳ್ಳಾಪುರದಲ್ಲಿ T20I ಲೀಗ್ – ಕಣದಲ್ಲಿ ಅಬ್ಬರಿಸಲಿದ್ದಾರೆ ಸಚಿನ್, ಯುವಿ, ಜಯಸೂರ್ಯ

Public TV
2 Min Read
Cricket Stadium Ckb

– 8 ದೇಶಗಳ 24 ಆಟಗಾರರು ಭಾಗಿ

ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೇನಹಳ್ಳಿಯ (Muddenahalli) ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಗುರುವಾರ ಅಂತಾರಾಷ್ಟ್ರೀಯ ಕ್ರಿಕೆಟ್  ದಿಗ್ಗಜರ ಸಮಾಗಮ ಆಗಲಿದೆ.

ಸತ್ಯಸಾಯಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಅಂತರಾಷ್ಟ್ರೀಯ ಮಟ್ಟದ ಸಾಯಿಕೃಷ್ಣನ್ ಕ್ರಿಕೆಟ್ ಸ್ಟೇಡಿಯಂನಲ್ಲಿ (Saikrishnan Cricket Stadium) ಗುರುವಾರ (ಜ.18) ಟಿ20 ಕ್ರಿಕೆಟ್ (T20 Cricket) ಟೂರ್ನಿಯನ್ನು ಆಯೋಜನೆ ಮಾಡಲಾಗಿದೆ. ಈ ಸೌಹಾರ್ದಯುತ ಪಂದ್ಯಾವಳಿಯಲ್ಲಿ 8 ದೇಶಗಳ 24 ದಿಗ್ಗಜ ಆಟಗಾರರು ಎರಡು ತಂಡಗಳಾಗಿ ಪಂದ್ಯವಾಡಲಿದ್ದಾರೆ. ಭಾರತದ ಮೂಲ ಧ್ಯೇಯ ವ್ಯಾಕ್ಯ ವಸುಧೈವ ಕುಟುಂಬಕಂ ಎಂಬ ಮಾತಿಗೆ ಪ್ರತಿರೂಪವೆಂಬಂತೆ ಒಂದು ಪ್ರಪಂಚ ಒಂದು ಕುಟುಂಬ ಕಪ್ ಎಂಬ ಹೆಸರಿನಡಿ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಕ್ಲೀನ್‌ ಸ್ವೀಪ್‌ ಉತ್ಸಾಹದಲ್ಲಿ ಭಾರತ – ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಪಂದ್ಯ ವೀಕ್ಷಿಸುವ ಕ್ರಿಕೆಟ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್

ನೂತನ ಹೊಸ ಸಾಯಿಕೃಷ್ಣನ್ ಸ್ಟೇಡಿಯಂ ಉದ್ಘಾಟನಾ ಅಂಗವಾಗಿ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿದೆ. ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ನೇತೃತ್ವದಲ್ಲಿ ಪಂದ್ಯಾವಳಿಗೆ ಬೇಕಾದ ಎಲ್ಲಾ ತಯಾರಿಗಳು ನಡೆದಿವೆ. ಇನ್ನೂ ಈ ಒಂದು ಪಂದ್ಯಾವಳಿಯಲ್ಲಿ ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್, ಮೊಹಮ್ಮದ್ ಕೈಫ್, ಇರ್ಫಾನ್ ಪಠಾಣ್, ಸನತ್ ಜಯಸೂರ್ಯ, ಮುತ್ತಯ್ಯ ಮುರಳೀಧರನ್, ಚಮಿಂಡಾ ವಾಸ್ ಸೇರಿದಂತೆ 24 ಮಂದಿ ಮಾಜಿ ಕ್ರಿಕೆಟ್ ಆಟಗಾರರು ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ vs ಅಫ್ಘಾನಿಸ್ತಾನ ಮೂರನೇ ಟಿ20 – ಧೋನಿ ದಾಖಲೆ ಮುರಿತಾರಾ ರೋಹಿತ್?

ಗುರುವಾರ ಬೆಳಗ್ಗೆ 09:00 ಗಂಟೆಗೆ ಸ್ಟೇಡಿಯಂನ ಉದ್ಘಾಟನೆಯಾಗಲಿದ್ದು, 10 ಗಂಟೆಗೆ ಟಾಸ್ ನಡೆಯಲಿದೆ. 10:30ರಿಂದ 12:30ರ ವರೆಗೆ ಮೊದಲ ಇನ್ನಿಂಗ್ಸ್ ಹಾಗೂ 1 ಗಂಟೆಯಿಂದ 3 ಗಂಟೆಯವೆರಗೆ ಸೆಕೆಂಡ್ ಇನ್ನಿಂಗ್ಸ್ ನಡೆಯಲಿದೆ. ತದನಂತರ 4 ಗಂಟೆಗೆ ಸಾಯಿ ಸಿಂಪೋನಿ ಆರ್ಕೆಸ್ಟ್ರಾ ತಂಡದಿಂದ ವಾದ್ಯಗೋಷ್ಠಿ ನಡೆಯಲಿದ್ದು, ಕಪ್ ಬಹುಮಾನ ವಿತರಣೆ ನಂತರ ಕಾರ್ಯಕ್ರಮ ಮುಕ್ತಾಯವಾಗಲಿದೆ. ಇದನ್ನೂ ಓದಿ: ಕೂಚ್ ಬೆಹಾರ್ ಟ್ರೋಫಿ ಫೈನಲ್‍ನಲ್ಲಿ ಯುವಿ ದಾಖಲೆ ಮುರಿದ ಕರ್ನಾಟಕದ ಓಪನರ್ ಪ್ರಖರ್ ಚತುರ್ವೇದಿ

ಇನ್ನೂ ಈ ಪಂದ್ಯಾವಳಿಗೆ ಕೇವಲ ಆಮಂತ್ರಿತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, 10 ಸಾವಿರ ಮಂದಿಗೆ ಅಮಂತ್ರಣ ನೀಡಲಾಗಿದೆ ಎನ್ನಲಾಗಿದೆ. ಉಳಿದಂತೆ ಸತ್ಯಸಾಯಿ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು, ಉದ್ಯೋಗಿಗಳು, ಭಕ್ತರು ಭಾಗಿಯಾಗಲಿದ್ದಾರೆ. ಇನ್ನೂ ಪಂದ್ಯಾವಳಿಯ ನೇರಪ್ರಸಾರವನ್ನು ಟಿವಿ ಮೂಲಕ ವೀಕ್ಷಣೆ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಇದನ್ನೂ ಓದಿ: ಯಶಸ್ಸಿನ ಶ್ರೇಯಸ್ಸು ಮಹಿ ಅಣ್ಣನಿಗೆ, CSKಗೆ ಸಲ್ಲಬೇಕು – ಚೆನ್ನೈಗೆ ಕ್ರೆಡಿಟ್‌ ಕೊಟ್ಟ ಶಿವಂ ದುಬೆ

Share This Article