Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗ್ಳೂರಲ್ಲಿ 2 ಸೂಪರ್ ಓವರ್ ಥ್ರಿಲ್ಲರ್ – ಟೀಂ ಇಂಡಿಯಾಗೆ ರೋಚಕ ಗೆಲುವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಬೆಂಗ್ಳೂರಲ್ಲಿ 2 ಸೂಪರ್ ಓವರ್ ಥ್ರಿಲ್ಲರ್ – ಟೀಂ ಇಂಡಿಯಾಗೆ ರೋಚಕ ಗೆಲುವು

Cricket

ಬೆಂಗ್ಳೂರಲ್ಲಿ 2 ಸೂಪರ್ ಓವರ್ ಥ್ರಿಲ್ಲರ್ – ಟೀಂ ಇಂಡಿಯಾಗೆ ರೋಚಕ ಗೆಲುವು

Public TV
Last updated: January 18, 2024 12:37 am
Public TV
Share
2 Min Read
TEAM INDIA 1
SHARE

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಅಭಿಮಾನಿಗಳಿಗೆ ಬುಧವಾರ ರಾತ್ರಿ ಹಬ್ಬವೋ ಹಬ್ಬ. ಎರಡು ಸೂಪರ್ ಓವರ್ ಗಳನ್ನು ಕಂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಅಫ್ಘಾನಿಸ್ತಾನ (IND Vs AFG) ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿ, ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿತು.

ಭಾರತ ನೀಡಿದ 213 ರನ್‍ಗಳ ಟಾರ್ಗೆಟ್ ಬೆನ್ನತ್ತಿದ ಅಫ್ಘಾನಿಸ್ತಾನ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿ ಮ್ಯಾಚ್ ಟೈ ಆಯ್ತು. ಇದರಿಂದಾಗಿ ಆಟ ಸೂಪರ್ ಓವರ್ ಹಂತಕ್ಕೆ ದಾಟಿತು.

TEAM INDIA 3

ಮೊದಲ ಸೂಪರ್ ಓವರ್ ನಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ 16 ರನ್ ಗಳಿಸಿದರೆ, ಟೀಂ ಇಂಡಿಯಾ ಕೂಡಾ 16 ರನ್ ಗಳಿಸಿ ಮ್ಯಾಚ್ ಟೈ ಆಯ್ತು. ಈ ಹಿನ್ನೆಲೆಯಲ್ಲಿ ಪಂದ್ಯ 2ನೇ ಸೂಪರ್ ಓವರ್ ಹಂತಕ್ಕೆ ದಾಟಿತು.

ಎರಡನೇ ಸೂಪರ್ ಓವರ್ ನಲ್ಲಿ ಟೀಂ ಇಂಡಿಯಾ 11 ರನ್ ಮಾತ್ರ ಗಳಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಅಫ್ಘಾನಿಸ್ತಾನ ತಂಡ 1 ರನ್ ಗಳಿಸಲು ಮಾತ್ರ ಸಾಧ್ಯವಾಯಿತು.

ಸೂಪರ್ ಓವರ್ ನಿಯಮವೇನು?:
* ಪ್ರತಿ ತಂಡವು 3 ಬ್ಯಾಟ್ಸ್ ಮೆನ್ ಹಾಗೂ ಓರ್ವ ಬೌಲರನ್ನು ಆಯ್ಕೆ ಮಾಡಬೇಕು.
* ಇಬ್ಬರು ಆಟಗಾರರು ಔಟ್ ಆದರೆ ತಂಡ ಆಲೌಟ್ ಆಗುತ್ತದೆ.
* ಸೂಪರ್ ಓವರ್ ನಲ್ಲಿ ಅತ್ಯಧಿಕ ರನ್ ಗಳಿಸಿದ ತಂಡ ವಿಜೇತ ಎಂದು ಘೋಷಣೆ
* ಪ್ರತಿ ತಂಡಕ್ಕೆ 1 ಓವರ್ ಆಡುವ ಅವಕಾಶ

ROHIT SHARMA

ಅಫ್ಘಾನಿಸ್ತಾನದ 20 ಓವರ್ ಹೇಗಿತ್ತು..?:
ಭಾರತ ನೀಡಿದ 213 ರನ್ ಟಾರ್ಗೆಟ್ ಬೆನ್ನತ್ತಿದ ಅಫ್ಘಾನಿಸ್ತಾನ ಆರಂಭಿಕ ಆಟಗಾರರು ಮೊದಲ ವಿಕೆಟ್‍ಗೆ 93 ರನ್ ಗಳ ಜೊತೆಯಾಟ ನೀಡಿದರು. ಆರಂಭಿಕ ಆಟಗಾರರಾದ ರಹ್ಮಾನುಲ್ಲಾ ಗುರ್ಬಾಝ್ ಹಾಗೂ ಇಬ್ರಾಹಿಂದ ಝದ್ರಾನ್ ತಲಾ 50 ರನ್ ಗಳಿಸಿ ಔಟಾದರು. ಒಂದು ಹಂತದಲ್ಲಿ ಮೊಹಮ್ಮದ್ ನಬಿ 16 ಎಸೆತೆಗಳಲ್ಲಿ 34 ರನ್‍ಗಳ ಸ್ಫೋಟಕ ಆಟ ಆಡಿದರು. 3 ಸಿಕ್ಸರ್ ಹಾಗೂ 2 ಬೌಂಡರಿಯನ್ನೊಳಗೊಂಡ ನಬಿ ಇನ್ನಿಂಗ್ಸ್ ವಾಷಿಂಗ್ಟನ್ ಸುಂದರ್ ಬೌಲಿಂಗಲ್ಲಿ ಆವೇಶ್ ಖಾನ್ ಕ್ಯಾಚ್ ಹಿಡಿಯುವುದರೊಂದಿಗೆ ಅಂತ್ಯವಾಯಿತು. ಗುಲ್ಬದೀನ್ ನಯೀಬ್ ಅರ್ಧ ಶತಕ ಬಾರಿಸಿ ಪಂದ್ಯವನ್ನು ಟೈ ಮಾಡುವಲ್ಲಿ ಯಶಸ್ವಿಯಾದರು.

ಭಾರತದ ಪರವಾಗಿ ವಾಷಿಂಗ್ಟನ್ ಸುಂದರ್ 3 ವಿಕೆಟ್ ಗಳಿಸಿದರೆ, ಆವೇಶ್ ಖಾನ್ 1, ಕುಲದೀಪ್ ಯಾದವ್ 1 ವಿಕೆಟ್ ಗಳಿಸಿದರು.

TEAM INDIA

ಭಾರತದ ಇನ್ನಿಂಗ್ಸ್:
ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಒಂದು ಹಂತದಲ್ಲಿ 4.3 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ 22 ರನ್ ಗಳಿಸಿತ್ತು. ಈ ವೇಳೆ ನಾಯಕ ರೋಹಿತ್ ಶರ್ಮಾ ಶತಕ (121 ರನ್) ಹಾಗೂ ರಿಂಕು ಸಿಂಗ್ ಆರ್ಧ ಶತಕ (69) ಜೊತೆಯಾಟ ಭಾರತ 212 ರನ್ ತಲುಪಿಸುವಲ್ಲಿ ಯಶಸ್ವಿಯಾಯಿತು.

ಮೊದಲ ವಿಕೆಟ್ ಪತನವಾಗುತ್ತಿದ್ದಂತೆ ಬ್ಯಾಟಿಂಗ್‍ಗೆ ಆಗಮಿಸಿದ ಕೊಹ್ಲಿ ಕೇವಲ 1 ಬಾಲ್ ಎದುರಿಸಿ ಕ್ಯಾಚ್ ಕೊಟ್ಟು ಔಟಾದರು. ಕೊಹ್ಲಿ ಬೆನ್ನಲ್ಲೇ ಆಗಮಿಸಿದ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಕೂಡಾ ಮೊದಲ ಎಸೆತದಲ್ಲೇ ಔಟಾಗಿ ಸೊನ್ನೆ ಸುತ್ತಿದರು. ಯಶಸ್ವಿ ಜೈಸ್ವಾಲ್ 4, ಶಿವಮ್ ದುಬೆ 1 ರನ್ ಗಳಿಸಿ ಔಟಾದರು.

ಆಫ್ಘಾನಿಸ್ತಾನ ಪರವಾಗಿ ಫರೀದ್ ಅಹ್ಮದ್ 3 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್ ಎನಿಸಿದರು. ಒಮರ್‍ಝೈ 1 ವಿಕೆಟ್ ಗಳಿಸಿದರು.

TAGGED:afghanistanbengaluruRohit SharmaTeam indiaಅಪ್ಘಾನಿಸ್ತಾನಕ್ರಿಕೆಟ್ಟೀಂ ಇಂಡಿಯಾಬೆಂಗಳೂರುರೋಹಿತ್ ಶರ್ಮಾ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
27 seconds ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
7 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
32 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
33 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
47 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?