ಶಿವಮೊಗ್ಗ: ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ತೀರ್ಥಹಳ್ಳಿ (Thirthahalli) ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ವಿದ್ಯುತ್ ಶಾಕ್ಗೆ 8ರ ಬಾಲಕ ಬಲಿ
ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶಮಿತಾ 2023ರ ಮಾರ್ಚ್ನಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್ ಜೊತೆ ವಿವಾಹವಾಗಿದ್ದರು. ವಿದ್ಯಾರ್ಥ್ ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ವಿಭಾಗದ ಅಮಾವಾಸ್ಯೆಬೈಲು ವಲಯ ಅರಣ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಪಾಳಿ ಕೆಲಸಕ್ಕೆ ಪತಿ ವಿದ್ಯಾರ್ಥ್ ತೆರಳಿದ್ದರು. ಮನೆಯಲ್ಲಿ ಪತಿಯ ತಂದೆ, ತಾಯಿ ಇದ್ದರು. ಕೊಠಡಿಯಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ ಗೆಳತಿಯನ್ನು ಕತ್ತುಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡ್ಕೊಂಡ!
ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ತಹಶೀಲ್ದಾರ್ ಜಕ್ಕನಗೌಡರ್ ಉಪಸ್ಥಿತಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಎಲ್ಲರಿಗೂ ಗುಡ್ ಬೈ ಎಂದು ಬರೆದಿಟ್ಟು ನೇಣಿಗೆ ಶರಣಾದ ಟೆಕ್ಕಿ