ಐಸಿಸ್‌ ಜೊತೆ ನಂಟು; 2014 ರಲ್ಲಿ ಬಂಧಿತನಾಗಿದ್ದ ಟೆಕ್ಕಿ ದೋಷಿ ಎಂದು ಕೋರ್ಟ್‌ ತೀರ್ಪು

Public TV
1 Min Read
FotoJet 5 8

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ನಿಷೇಧಿತ ಸಂಘಟನೆ ಐಸಿಸ್‌ ಪರ ಪ್ರಚಾರ ನಡೆಸುತ್ತಿದ್ದ ಟೆಕ್ಕಿಯೊಬ್ಬನನ್ನು ದೋಷಿ ಎಂದು ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಜಾಲಹಳ್ಳಿಯಲ್ಲಿ ಮೆಹದಿ ಮಸ್ರೂರ್ ಬಿಸ್ವಾಸ್ ಎಂಬಾತನನ್ನು ಬಂಧಿಸಲಾಗಿತ್ತು. ನಗರದಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ ಬಿಸ್ವಾಸ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸಾಮಾಜಿಕ ಜಾಲತಾಣದ ಮೂಲಕ ಐಸಿಸ್‌ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಬಂಧಿಸಲಾಗಿತ್ತು.

2014 ರ ಡಿಸೆಂಬರ್‌ನಲ್ಲಿ ಜಾಲಹಳ್ಳಿಯ ಮನೆಯಲ್ಲಿ ಮೆಹದಿ ಬಿಸ್ವಾಸ್‌ ಪೊಲೀಸರು ಬಂಧಿಸಿದ್ದರು. ನಂತರ ಪ್ರಕರಣ ಎನ್ಐಎಗೆ ವರ್ಗಾವಣೆ ಮಾಡಲಾಗಿತ್ತು. ಎನ್‌ಐಎ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿತ್ತು.

ಪ್ರಕರಣದ ವಿಚಾರಣೆ ನಡೆಸಿ ದೋಷಿ ಎಂದು ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಇಂದು (ಶುಕ್ರವಾರ) ಆರೋಪಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಬಂಧಿತ ವ್ಯಕ್ತಿ ಕೋಲ್ಕತ್ತಾ ಮೂಲದವನು ಎಂಬುದು ತಿಳಿದುಬಂದಿದೆ.

ಬಂಧಿತ ಬಿಸ್ವಾನ್‌, ಸಾಮಾಜಿಕ ಜಾಲತಾಣದ ಮೂಲಕ ಐಸಿಸ್ ಪರ 15,000 ಕ್ಕೂ ಹೆಚ್ಚು ಟ್ವೀಟ್ ಪ್ರಚಾರ ನಡೆಸಿದ್ದ. ಯುಎಪಿಎ 13, 18b, 39, ಐಪಿಸಿ 125, 153a, 505(1)(c), 505(2) ಅಡಿಯಲ್ಲಿ ತಪ್ಪಿತಸ್ಥ ಎಂದು ಕೋರ್ಟ್‌ ಆದೇಶ ಹೊರಡಿಸಿದೆ.

Share This Article