ರಾಮಲಲ್ಲಾ ಪ್ರಾಣಪ್ರತಿಷ್ಠೆ – ಜ.22ರಂದು ಅರ್ಧದಿನ ರಜೆ ಘೋಷಿಸಿದ AIIMS ಆಸ್ಪತ್ರೆ

Public TV
1 Min Read
AIIMS

ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ (Rama lalla Pran Pratishtha) ನೆರವೇರಲು ಕೌಂಟ್‌ಡೌನ್‌ ಶುರುವಾಗಿದೆ. ಅಯೋಧ್ಯೆಯ ಬೀದಿ ಬೀದಿಗಳು ತಳಿರು ತೋರಣಗಳಿಂದ ಕಂಗೊಳಿಸುತ್ತಿವೆ. ಇಡೀ ವಿಶ್ವದಾದ್ಯಂತ ಶ್ರೀರಾಮನ ಭಕ್ತರು ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ಇದಕ್ಕಾಗಿ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದ್ದರೆ, ಹಲವು ರಾಜ್ಯಗಳೂ ಶಾಲಾ-ಕಾಲೇಜುಗಳು ಸೇರಿದಂತೆ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಿವೆ.

AYODHYA 2

ಈ ಬೆನ್ನಲ್ಲೇ ದೆಹಲಿಯ ಏಮ್ಸ್ ಆಸ್ಪತ್ರೆ (AIIMS Hospital) ಅರ್ಧ ದಿನ ರಜೆ ಘೋಷಿಸಿದೆ. ಜನವರಿ 22ರಂದು ಮಧ್ಯಾಹ್ನ 2.30ರಿಂದ ದೆಹಲಿ ಏಮ್ಸ್ ಆಸ್ಪತ್ರೆ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಆದರೆ ಸೋಮವಾರ 2.30ರ ವರಗೆ ತುರ್ತು ಸೇವೆಗಳು ಮಾತ್ರ ಲಭ್ಯವಿರಲಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಎಲ್ಲೆಲ್ಲೂ ರಾಮಜಪ, ಜೈಶ್ರೀರಾಮ್ ಉದ್ಘೋಷ – ಇಟ್ಟಿಗೆಯಲ್ಲೇ ಸಾಕ್ಷಾತ್ ಶ್ರೀರಾಮನ ಕಂಡ ಕುಟುಂಬ!

AYODHYA RAM MANDIR 1

ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆ ಕಣ್ತುಂಬಿಕೊಳ್ಳಲು ಭಕ್ತರು ಸಜ್ಜಾಗಿದ್ದಾರೆ. ಆಸ್ಪತ್ರೆ ಸಿಬ್ಬಂದಿಗಳೂ ಪವಿತ್ರ ಕಾರ್ಯಕ್ರಮವನ್ನ ವೀಕ್ಷಿಸಲು ಹಾಗೂ ಪೂಜೆ, ಭಜನೆಯಲ್ಲಿ ತೊಡಗಿಸಿಕೊಳ್ಳಲು ಅರ್ಧ ದಿನ ರಜೆ ಘೋಷಿಸಲಾಗಿದೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗದಂತೆ ಸಿಬ್ಬಂದಿಗೆ ರಜೆ ನೀಡಲಾಗಿದೆ. ಒಪಿಡಿ ವಿಭಾಗ ಸೇರಿದಂತೆ ತುರ್ತು ಸೇವೆಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಏಮ್ಸ್ ಆಡಳಿತ ಮಂಡಳಿ ತಿಳಿಸಿದೆ.

ಉತ್ತರ ಪ್ರದೇಶ ಸರ್ಕಾರ ಆರಂಭದಲ್ಲಿ ಶಾಲಾ ಕಾಲೇಜುಗಳಿಗೆ ಮಾತ್ರ ರಜೆ ಘೋಷಿಸಿತ್ತು. ನಂತರ ಪ್ರಾಣಪ್ರತಿಷ್ಠೆ ದಿನ ಸಾರ್ವಜನಿಕ ರಜೆ ಘೋಷಿಸಿದೆ. ಸರ್ಕಾರಿ ಕಚೇರಿ, ಬ್ಯಾಂಕ್, ಶಾಲಾ ಕಾಲೇಜು, ಖಾಸಗಿ ಸಂಸ್ಥೆ, ಕೇಚರಿಗಳಿಗೂ ರಜೆ ನೀಡಲಾಗಿದೆ. ಇದನ್ನೂ ಓದಿ: ಪ್ರಾಣಪ್ರತಿಷ್ಠೆಗೆ ಕೌಂಟ್‌ಡೌನ್ – ಬೆಂಗ್ಳೂರಿನಿಂದ ಅಯೋಧ್ಯೆಗೆ ಹೆಚ್ಚುವರಿ ರೈಲು ಸೇವೆ, ಇಲ್ಲಿದೆ ಡಿಟೇಲ್ಸ್‌ 

Share This Article