ನನ್ನನ್ನು ಹಿಮ್ಮೆಟ್ಟಿಸಲು ಡಿಕೆಶಿ ಅಪ್ಪ ಬಂದ್ರೂ ಬಿಡಲ್ಲ: ರಮೇಶ್ ಜಾರಕಿಹೊಳಿ ಕಿಡಿ

Public TV
2 Min Read
RAMESH JARAKIHOLI

– ರಾಮಮಂದಿರಕ್ಕೆ ನಾನು 1 ಕೋಟಿ ರೂ. ದೇಣಿಗೆ ನೀಡಿದ್ದೇನೆ ಎಂದ ಶಾಸಕ

ಚಿಕ್ಕೋಡಿ: ನನ್ನನ್ನು ಹಿಮ್ಮೆಟ್ಟಿಸಲು ಡಿಕೆಶಿ ಅಪ್ಪ ಬಂದ್ರೂ ನಾನು ಬಿಡುವುದಿಲ್ಲ. ಸಿಡಿ ಪ್ರಕರಣದಲ್ಲಿ ಡಿ.ಕೆ ಶಿವಕುಮಾರ್ (D.K Shivakumar) ನನಗೆ ಶಿಕ್ಷೆ ವಿಧಿಸಲು ಪ್ಲ್ಯಾನ್ ಮಾಡಿದ್ದ. ಆದರೆ ಅದು ಸಾಧ್ಯವಾಗಲಿಲ್ಲ. ಈಗ ಬ್ಯಾಂಕ್‍ಗೆ ವಂಚನೆ ಹೆಸರಿನಲ್ಲಿ 420 ಕೇಸ್ ದಾಖಲಿಸಿದ್ದಾನೆ. ನನ್ನ ಹೆಸರು ಟಿವಿಯಲ್ಲಿ ಬರೋದನ್ನು ನೋಡಿ ಸಮಾಧಾನ ಮಾಡಿಕೊಳ್ಳುತ್ತಿದ್ದಾನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಏಕವಚನದಲ್ಲೇ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಗವಾಡ ಶಾಸಕ ರಾಜು ಕಾಗೆ ವಿರುದ್ಧ ಮಾಜಿ ಶಾಸಕ ಶ್ರೀಮಂತ ಪಾಟೀಲ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಈ ವೇಳೆ, ಕೇಸ್ ದಾಖಲಿಸಿ ಟಿವಿಯಲ್ಲಿ ನನ್ನ ಹೆಸರು ನೋಡಿ ಸಮಾಧಾನ ಮಾಡಿಕೊಳ್ಳುತ್ತಿದ್ದಾನೆ. ನಾನು ಗಟ್ಟಿಯಾಗೇ ಇದ್ದೇನೆ. ನನ್ನ ಹಿಮ್ಮೆಟ್ಟಿಸಲು ಡಿ.ಕೆ ಶಿವಕುಮಾರ್ ಅಪ್ಪ ಬಂದರೂ ನಾನು ಬಿಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದ ಸ್ಯಾಟಲೈಟ್ ಚಿತ್ರ ಬಿಡುಗಡೆ ಮಾಡಿದ ಇಸ್ರೋ

ramesh jarakiholi dk shivakumar

ರಾಮಮಂದಿರದ ಉದ್ಘಾಟನೆ ವಿಚಾರದಲ್ಲಿ ಕಾಂಗ್ರೆಸ್‍ನವರು (Congress) ಈ ರೀತಿ ಮಾಡುತ್ತಿರುವುದು ಏಕೆ ಎಂದು ತಿಳಿಯುತ್ತಿಲ್ಲ. ಮುಸ್ಲಿಂ ಸಮುದಾಯದ ಮತ ಓಲೈಕೆಗಾಗಿ ಕಾಂಗ್ರೆಸ್ ಈ ರೀತಿ ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಯಾರು ಸಲಹೆ ನೀಡುತ್ತಾರೆ ಎಂಬುದು ಗೊತ್ತಾಗುತ್ತಿಲ್ಲ. ರಾಮಮಂದಿರ ಉದ್ಘಾಟನೆಗೆ ದೇಶವೇ ಕಾತುರದಿಂದ ಕಾದಿದೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರನ್ನು ಫ್ರೀ ಹ್ಯಾಂಡ್ ಕೆಲಸ ಮಾಡಲು ಅಲ್ಲಿಯವರು ಬಿಡುತ್ತಿಲ್ಲ. ಅವರ ಮೇಲೆ ಒತ್ತಡ ತರುವ ಕೆಲಸವನ್ನು ಮಾಡುತ್ತಿದ್ದಾರೆ. ಡಿ.ಕೆ ಶಿವಕುಮಾರ್ ಹೈಕಮಾಂಡ್ ಮೇಲೆ ಒತ್ತಡ ತಂದು ಸಿಎಂ ಶಕ್ತಿ ಕುಂದಿಸುವ ಕೆಲಸ ಮಾಡುತ್ತಿದ್ದಾನೆ ಎಂದು ಆರೋಪಿಸಿದ್ದಾರೆ.

ಲಕ್ಷ್ಮಣ್ ಸವದಿ ರಾಮಮಂದಿರಕ್ಕೆ 10 ಲಕ್ಷ ರೂ. ದೇಣಿಗೆ ನೀಡಿರುವ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿದ ಅವರು, ನಾನು ಒಂದು ಕೋಟಿ ರೂ. ನೀಡಿದ್ದೇನೆ ಎಂದಿದ್ದಾರೆ.

ಬೆಳಗಾವಿಯ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ರಮೇಶ್ ಕತ್ತಿ ಮುಂದುವರಿಯುತ್ತಾರೆ. ಅದರಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಇನ್ನೂ ಸಿಡಿ ಕೇಸ್ ಬಗ್ಗೆ ನಾನು ಹೆಚ್ಚಿಗೆ ಏನೂ ಮಾತನಾಡುವುದಿಲ್ಲ. ಈ ಬಗ್ಗೆ ಮಾತನಾಡಬೇಡಿ ಎಂದು ವಕೀಲರು ಸಲಹೆ ನೀಡಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: 9,999 ವಜ್ರಗಳಿಂದ ರಾಮಮಂದಿರದ ಕಲಾಕೃತಿ ರಚಿಸಿದ ಕಲಾವಿದ!

Share This Article