ಕೊನೆಗೂ ನಮ್ಮ ರಾಮ ಬಂದಿದ್ದಾನೆ, ಇಂದಿನಿಂದ ಹೊಸ ಯುಗ ಉದಯವಾಗಿದೆ: ನರೇಂದ್ರ ಮೋದಿ

Public TV
1 Min Read
Modi 8

– ರಾಮ ಪ್ರತಿಯೊಬ್ಬ ಭಾರತೀಯನ ಅಂತರಂಗದಲ್ಲಿ ವಿರಾಜಮಾನನಾಗಿದ್ದಾನೆ

ಅಯೋಧ್ಯೆ (ಉತ್ತರಪ್ರದೇಶ): ಕೊನೆಗೂ ನಮ್ಮ ರಾಮ ಬಂದಿದ್ದಾನೆ. ಪ್ರತಿಯೊಬ್ಬ ಭಾರತೀಯನ ಅಂತರಂಗದಲ್ಲಿ ವಿರಾಜಮಾನನಾಗಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣಪ್ರತಿಷ್ಠೆ ನೆರವೇರಿಸಿದ ಬಳಿಕ ಬೃಹತ್‌ ವೇದಿಕೆ ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದ ಅವರು ಮಾತನಾಡಿದರು. ಕೊನೆಗೂ ನಮ್ಮ ರಾಮ ಬಂದಿದ್ದಾನೆ. ಪ್ರತಿಯೊಬ್ಬ ಭಾರತೀಯನ ಅಂತರಂಗದಲ್ಲಿ ನೆಲೆಸಿದ್ದಾನೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ಈ ಭೂಮಿ ಮೇಲಿನ ಅದೃಷ್ಟಶಾಲಿ ವ್ಯಕ್ತಿ ನಾನು: ಅಯೋಧ್ಯೆಯಲ್ಲಿ ಶಿಲ್ಪಿ ಅರುಣ್‌ ಯೋಗಿರಾಜ್‌ ಮಾತು

Modi Gift

‌ಈ ಶುಭ ಸಂದರ್ಭದಲ್ಲಿ ನಾನು ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಹೇಳಲು ತುಂಬಾ ವಿಷಯಗಳಿವೆ. ಆದ್ರೆ ಸಂತಸದಿಂದ ನನಗೆ ಮಾತೇ ಬರುತ್ತಿಲ್ಲ. ಇನ್ಮುಂದೆ ನಮ್ಮ ರಾಮ ಟೆಂಟ್‌ನಲ್ಲಿ ವಾಸಿಸುವುದಿಲ್ಲ, ಅದ್ಧೂರಿ ದೇವಾಲಯದಲ್ಲಿ ವಿರಾಜಮಾನನಾಗಿರುತ್ತಾನೆ. ಈ ಸಮರ್ಪಣೆಯ ಕ್ಷಣವು ಭಗವಾನ್ ರಾಮನ ಆಶೀರ್ವಾದ ಎಂದು ಹೊಗಳಿದರು. ಇದನ್ನೂ ಓದಿ: ಮಂದಸ್ಮಿತ, ಮುಗ್ಧಮುಖದ ಬಾಲರಾಮನ ಕಣ್ತುಂಬಿಕೊಂಡು ಪುನೀತರಾದ ರಾಮಭಕ್ತರು

AYODHYA 6

ಹೊಸ ಯುಗ ಉದಯ: ಮುಂದುವರಿದು, ಜನವರಿ 22, ಕ್ಯಾಲೆಂಡರ್‌ನಲ್ಲಿ ಬರುವ ದಿನಾಂಕವಲ್ಲ. ಇದು ಹೊಸ ಯುಗದ ಉದಯ ಎಂದು ಕೊಂಡಾಡಿದರು. ಜೊತೆಗೆ ಜನವರಿ 22ರಂದು ಸಂಜೆ ಪ್ರತಿಯೊಬ್ಬ ರಾಮಭಕ್ತರ ಮನೆಯಲ್ಲೂ ʻಶ್ರೀರಾಮಜ್ಯೋತಿʼ ಬೆಳಗಿಸುವಂತೆ ಕರೆ ನೀಡಿದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ

ಪ್ರಾಣಪ್ರತಿಷ್ಠೆ ಸಂಪನ್ನ: ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿತ್‌ ಮುಹೂರ್ತದಲ್ಲಿ (ಅಭಿಜಿತ್‌ʼ ಅಂದ್ರೆ ʼವಿಜಯಶಾಲಿʼ ಎಂದರ್ಥ) ಶಾಸ್ತ್ರೋಕ್ತವಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಯಿತು. ಅರ್ಚಕರು, ಪಂಡಿತರು ಹಾಗೂ ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನೆರವೇರಿತು. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಸಿಎಂ ಯೋಗಿ ಆದಿತ್ಯನಾಥ್‌, ಗುಜರಾತ್‌ ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌ ಮೊದಲಾದವರು ಉಪಸ್ಥಿತರಿದ್ದರು.

Share This Article