ಅಯೋಧ್ಯೆಯಿಂದ ಹಿಂದಿರುಗಿದ ನಂತರ ನನ್ನ ಮೊದಲ ನಿರ್ಧಾರ – ಹೊಸ ಯೋಜನೆ ಘೋಷಿಸಿದ ಮೋದಿ

Public TV
2 Min Read
Pradhanmantri Suryodaya Yojana Narendra Modi

– ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ ಜಾರಿಗೆ ನಿರ್ಧಾರ

ನವದೆಹಲಿ: ಅಯೋಧ್ಯೆಯಿಂದ (Ayodhya) ಹಿಂದಿರುಗಿದ ನಂತರ ನನ್ನ ಮೊದಲ ನಿರ್ಧಾರ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ಯೋಜನೆಯನ್ನು ಘೋಷಿಸಿದ್ದಾರೆ.

ಪ್ರಧಾನಿ ಮೋದಿ (Narendra Modi) ಅಯೋಧ್ಯೆಯಿಂದ ಹಿಂದಿರುಗಿದ ನಂತರ, ಜನರು ತಮ್ಮ ಮನೆಗಳಲ್ಲಿ ಸೋಲಾರ್‌ ಪ್ಯಾನೆಲ್ (ಸೌರ ಫಲಕ) ಅಳವಡಿಸಿಕೊಳ್ಳಲು ಸಹಾಯ ಮಾಡುವ ಹೊಸ ಯೋಜನೆಯನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ನಿರ್ಧಾರವು ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಶಕ್ತಿಯನ್ನು ಪಡೆಯುತ್ತಾರೆ ಎಂಬ ಅರಿವಿನಿಂದ ಪ್ರೇರಿತವಾಗಿದೆ ಎಂದು ಮೋದಿ ಹೇಳಿದ್ದಾರೆ. ಇದನ್ನೂ ಓದಿ: ಮನೆ-ಮನಗಳಲ್ಲಿ ದೀಪೋತ್ಸವ – ʻರಾಮ ಜ್ಯೋತಿʼ ಬೆಳಗಿಸಿದ ಪ್ರಧಾನಿ ಮೋದಿ

modi meeting

ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ, ನಮ್ಮ ಸರ್ಕಾರವು ‘ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ’ಯನ್ನು (Pradhanmantri Suryodaya Yojana) 1 ಕೋಟಿ ಮನೆಗಳಿಗೆ ಮೇಲ್ಛಾವಣಿ ಸೌರ ಅಳವಡಿಸುವ ಗುರಿಯೊಂದಿಗೆ ಪ್ರಾರಂಭಿಸಲಿದೆ ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದು ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆಯುವ ಸಮಯ ಗೊತ್ತಾ..?

ಪೋಸ್ಟ್‌ನಲ್ಲಿ ಏನಿದೆ?
ಪ್ರಪಂಚದ ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪಡೆಯುತ್ತಾರೆ. ಇಂದು ಅಯೋಧ್ಯೆಯಲ್ಲಿ ಜೀವನದ ಪವಿತ್ರೀಕರಣದ ಶುಭ ಸಂದರ್ಭದಲ್ಲಿ, ಭಾರತದ ಜನರು ತಮ್ಮ ಮನೆಗಳ ಛಾವಣಿಯ ಮೇಲೆ ತಮ್ಮದೇ ಆದ ಸೋಲಾರ್ ರೂಫ್ ಟಾಪ್ ವ್ಯವಸ್ಥೆಯನ್ನು ಹೊಂದಿರಬೇಕು ಎಂಬ ನನ್ನ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಲಾಗಿದೆ.

ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ, ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ಮೇಲ್ಛಾವಣಿಯ ಸೋಲಾರ್ ಪ್ಯಾನೆಲ್ ಅನ್ನು ಸ್ಥಾಪಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಅನ್ನು ಪ್ರಾರಂಭಿಸುತ್ತದೆ.‌ ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಯಾಗುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಲಿದೆ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: 35 ನಿಮಿಷದ ಭಾಷಣದಲ್ಲಿ 114 ಬಾರಿ ರಾಮ ನಾಮ ಸ್ಮರಿಸಿದ ಮೋದಿ!

ಸೋಮವಾರ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಇಂದು (ಸೋಮವಾರ) ನೆರವೇರಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಪ್ರಾಣ ಪ್ರತಿಷ್ಠಾಪನೆ ನಡೆಯಿತು.

Share This Article