Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೈಯಲ್ಲಿ ಮಂತ್ರಾಕ್ಷತೆ, ಬಗಲಲ್ಲಿ ದೊಣ್ಣೆ ಹಿಡಿದಿರುವವರಿಗೆ ಕಾಂಗ್ರೆಸ್ಸಿಗರು ಹೆದರಲ್ಲ: ಡಿಕೆಶಿ

Public TV
Last updated: January 23, 2024 8:32 pm
Public TV
Share
4 Min Read
dk shivakumar 2 2
SHARE

ಬೆಂಗಳೂರು: ಬಿಜೆಪಿಯವರು (BJP) ಕೈಯಲ್ಲಿ ಮಂತ್ರಾಕ್ಷತೆ ಹಿಡಿದಿದ್ದರೆ, ಬಗಲಲ್ಲಿ ದೊಣ್ಣೆ ಹಿಡಿದಿದ್ದಾರೆ. ಈ ಗೂಂಡಾಗಳ ಗೊಡ್ಡು ಬೆದರಿಕೆಗೆ ಯಾವುದೇ ಕಾಂಗ್ರೆಸಿಗ (Congress) ಹೆದರುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.

ಅಸ್ಸಾಂನಲ್ಲಿ (Assam) ರಾಹುಲ್ ಗಾಂಧಿ (Rahul Gandhi) ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಸ್ಸಾಂನಲ್ಲಿ ಕಳೆದೆರಡು ದಿನಗಳಿಂದ ಈ ಯಾತ್ರೆಯನ್ನು ತಡೆಯಲಾಗಿದೆ. ಇಂದು ಗುವಾಹಟಿಗೆ ಪ್ರವೇಶಿಸಲು ಅವಕಾಶ ನೀಡುತ್ತಿಲ್ಲ. ಆ ಮೂಲಕ ದೇಶದಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬದುಕಿದೆಯೋ ಸತ್ತಿದೆಯೋ ಎಂಬ ಪ್ರಶ್ನೆ ಉದ್ಭವಿಸಿದೆ. ಅಸ್ಸಾಂ ಸರ್ಕಾರದ ಈ ನಡೆಯನ್ನು ನಾವೆಲ್ಲರೂ ಖಂಡಿಸುತ್ತೇವೆ ಎಂದರು. ಇದನ್ನೂ ಓದಿ: ರಾಮಮಂದಿರದಲ್ಲಿರೋ ಮೂರ್ತಿಗೆ `ಬಾಲಕ ರಾಮ’ ಹೆಸರು: ಪ್ರತಿಷ್ಠಾಪನೆಯ ಅರ್ಚಕ ಅರುಣ್ ದೀಕ್ಷಿತ್ ಮಾಹಿತಿ

Rahul Gandhi

ರಾಹುಲ್ ಗಾಂಧಿ ದೇಶದ ಮನಸ್ಸುಗಳನ್ನು ಒಗ್ಗೂಡಿಸಲು, ಜನರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತಿ, ಅವರಿಗೆ ನ್ಯಾಯ ಒದಗಿಸಲು ಮಣಿಪುರದಿಂದ ಮುಂಬೈವರೆಗೂ ಎರಡನೇ ಹಂತದ ಭಾರತ ಜೋಡೋ ನ್ಯಾಯ ಯಾತ್ರೆ ಹಮ್ಮಿಕೊಂಡಿದ್ದಾರೆ. ಈ ಯಾತ್ರೆಯಿಂದ ಬಿಜೆಪಿ ನಾಯಕರಲ್ಲಿ ನಡುಕ ಹುಟ್ಟಿದೆ. ಹೀಗಾಗಿ ಅವರ ಯಾತ್ರೆಯನ್ನು ತಡೆಯುತ್ತಿದ್ದಾರೆ. ಭಾರತ ಜೋಡೋ ನ್ಯಾಯ ಯಾತ್ರೆ ಕುರಿತು ಪಕ್ಷದ ಮುಖಂಡರು ಚರ್ಚೆ ಮಾಡುವಾಗ ನಾನು, ಸಿದ್ದರಾಮಯ್ಯ ಅವರು ಇದ್ದೆವು. ಈ ಚಳಿ, ಬಿಸಿಲಿನಲ್ಲಿ ಹೆಜ್ಜೆ ಹಾಕಿ ಈ ದೇಶದ ಹೃದಯಗಳನ್ನು ಒಗ್ಗೂಡಿಸಬೇಕು. ಜನರ ಧ್ವನಿಯಾಗಿ, ಅವರ ಸಮಸ್ಯೆ ಬಗೆಹರಿಸಬೇಕು. ಆ ಮೂಲಕ ನ್ಯಾಯ ಒದಗಿಸಬೇಕು ಎಂಬ ನಿರ್ಣಯಕ್ಕೆ ರಾಹುಲ್ ಗಾಂಧಿ ಅವರು ಬದ್ಧರಾಗಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ಯಾವುದೇ ಅಕ್ರಮ, ಗೊಂದಲವಿಲ್ಲದೆ ಪಿಎಸ್‌ಐ ಪರೀಕ್ಷೆ ನಡೆಸಿದ ಕೆಇಎ

ಈ ಯಾತ್ರೆ ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ. ಎಲ್ಲಾ ವಿರೋಧ ಪಕ್ಷಗಳಿಗೆ ಮಾದರಿ. ದೇಶದ ಐಕ್ಯತೆ, ಸಮಗ್ರತೆ ಶಾಂತಿಗೆ ಸಾವಿರಾರು ಕಾಂಗ್ರೆಸ್ ನಾಯಕರು ಪ್ರಾಣತ್ಯಾಗ ಮಾಡಿದ್ದಾರೆ. ತನ್ನ ಅಜ್ಜಿಗೆ ಗುಂಡು ಹಾರಿಸಿ ಕೊಂದಿದ್ದನ್ನು, ಅವರ ಚಿಕ್ಕಪ್ಪ ಸಂಜಯ್ ಗಾಂಧಿ ಹತ್ಯೆಯನ್ನು, ತನ್ನ ತಂದೆ ರಾಜೀವ್ ಗಾಂಧಿ ಮೇಲೆ ಬಾಂಬ್ ದಾಳಿ ಮಾಡಿ, ಹತ್ಯೆ ಮಾಡಿದ್ದನ್ನು ರಾಹುಲ್ ಗಾಂಧಿ ಚಿಕ್ಕ ವಯಸ್ಸಿನಲ್ಲೇ ಕಂಡಿದ್ದಾರೆ. ಇಷ್ಟು ದುಃಖ ಅನುಭವಿಸಿದ್ದರೂ ಅವರು ದೇಶದ ಒಗ್ಗಟ್ಟಿಗಾಗಿ ಯಾತ್ರೆ ಮಾಡುತ್ತಿದ್ದಾರೆ. ಅದನ್ನು ನೋಡಿ ಬಿಜೆಪಿಯವರಿಂದ ಸಹಿಸಲು ಆಗುತ್ತಿಲ್ಲ. ಬಿಜೆಪಿಯ ಯಾವುದಾದರೂ ಒಬ್ಬ ನಾಯಕ ಇಂತಹ ತ್ಯಾಗ ಮಾಡಿದ್ದಾರಾ? ಕಾಂಗ್ರೆಸ್ ಪಕ್ಷ ಮಾತ್ರ ಇಂತಹ ಯಾತ್ರೆ ಮಾಡಲು ಸಾಧ್ಯ. ಬೇರೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಶ್ರೀರಾಮ ಅವರಪ್ಪನ ಮನೆ ಆಸ್ತಿನಾ? – ಬಿಜೆಪಿ ವಿರುದ್ಧ ರೊಚ್ಚಿಗೆದ್ದ ಡಿಕೆಶಿ

ಕೆಲವೇ ಗಂಟೆಗಳ ಸೂಚನೆಗೆ ಸ್ಪಂದಿಸಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಬಂದು ಭಾಗವಹಿಸಿದ್ದೀರಿ. ನೀವು ರಾಹುಲ್ ಗಾಂಧಿ ಅವರ ಬೆಂಬಲವಾಗಿ ನಿಂತಿರುವುದಕ್ಕೆ ಧನ್ಯವಾದಗಳು. ಯಾತ್ರೆ ನಿಲ್ಲಿಸಲು ಬಿಜೆಪಿ ಮಾಡುತ್ತಿರುವ ಯಾವುದೇ ಷಡ್ಯಂತ್ರಕ್ಕೂ ನಾವು ಜಗ್ಗುವುದಿಲ್ಲ. ದೇಶದ ಒಗ್ಗಟ್ಟು, ಐಕ್ಯತೆ, ಸಮಗ್ರತೆ, ಶಾಂತಿಗಾಗಿ ಹೋರಾಟ ಮುಂದುವರಿಸುತ್ತೇವೆ ಎಂದರು. ಇದನ್ನೂ ಓದಿ: 11 ದಿನಗಳ ಕಾಲ ಮೋದಿ ಉಪವಾಸ ಮಾಡಿದ್ದೇ ಅನುಮಾನ: ವೀರಪ್ಪ ಮೊಯ್ಲಿ

ಬಿಜೆಪಿಯವರು ಧರ್ಮದ ವಿಚಾರವಾಗಿ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಅವರು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ, ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಜನಪರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕಾರಣ ಇರಬಾರದು. ನೀವು ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದರೂ ನಾವು ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಿಲ್ಲ. ಸಿದ್ದರಾಮಯ್ಯ ಅವರ ಹೆಸರಲ್ಲಿ ರಾಮ, ಶಿವಕುಮಾರ ಹೆಸರಲ್ಲಿ ಶಿವ ಹಾಗೂ ಷಣ್ಮುಗ ಇದ್ದಾರೆ. ಹರಿಪ್ರಸಾದ್ ಅವರ ಹೆಸರಲ್ಲಿ ಹರಿ ಇದ್ದಾನೆ. ಕೃಷ್ಣ ಭೈರೇಗೌಡರ ಹೆಸರಲ್ಲಿ ಕೃಷ್ಣ ಇದ್ದಾನೆ. ಹಿಂದೂ ಧರ್ಮ ನಿಮ್ಮ ಮನೆ ಆಸ್ತಿಯೇ? ಧರ್ಮ ಯಾವುದಾದರೂ ತತ್ವವೊಂದೆ. ನಾಮ ನೂರಾದರೂ ದೈವವೊಂದೆ. ಪೂಜೆ ನೂರಾದರೂ ಭಕ್ತಿವೊಂದೆ. ಕರ್ಮ ಹಲವಾದರೂ ನಿಷ್ಠೆವೊಂದೆ. ದೇವನೊಬ್ಬ ನಾಮ ಹಲವು. ನಾವು ಕಲ್ಲು, ನೀರು, ಮರ, ಗಾಳಿಯಲ್ಲಿ ದೇವರನ್ನು ಕಾಣುತ್ತೇವೆ. ನಮ್ಮ ಸರ್ಕಾರದಲ್ಲಿ ಧಾರ್ಮಿಕ ದತ್ತಿ ಇಲಾಖೆ, ಹಜ್ ಸಮಿತಿ, ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಇದೆ. ಸಂವಿಧಾನದ ಪರವಾಗಿ ನಾವು ಎಲ್ಲಾ ಧರ್ಮಕ್ಕೂ ಆದ್ಯತೆ ನೀಡುತ್ತಾ ಬಂದಿದ್ದೇವೆ. ಎಲ್ಲರನ್ನೂ ಸಮಾನವಾಗಿ ಕಂಡು ಸರ್ವರಿಗೂ ಸಮಬಾಳು, ಸಮಪಾಲು ಎಂಬ ತತ್ವದ ಮೇಲೆ ಆಡಳಿತ ಮಾಡುತ್ತಿದ್ದೇವೆ. ನಿಮ್ಮ ಕೈಯಲ್ಲೂ ಅಧಿಕಾರ ಇತ್ತು. ಆಗ ಜನಪರ ಕಾರ್ಯಕ್ರಮ ಯಾಕೆ ಮಾಡಲಿಲ್ಲ? ಈಗ ಅಧಿಕಾರ ಹೋದ ನಂತರ ಸಂಕಟಪಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಜೆಪಿಯವರು ಬೀದಿ ಬೀದಿಯಲ್ಲಿ ರಾಮನನ್ನು ಆಟ ಆಡಿಸಿದ್ದಾರೆ: ಮಧು ಬಂಗಾರಪ್ಪ

ಈ ಸರ್ಕಾರ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು. ಐದು ಗ್ಯಾರಂಟಿ ಸೇರಿ ಕೈ ಬಲಿಷ್ಠವಾಯಿತು. ಇದನ್ನು ಬಿಜೆಪಿ ಸಹಿಸಲು ಆಗುತ್ತಿಲ್ಲ. ನಾವೆಲ್ಲರೂ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಡೆದ ಭಾರತ ಜೋಡೋ ಯಾತ್ರೆ ವೇಳೆ ರಾಜ್ಯದಲ್ಲಿ ಚಾಮರಾಜನಗರದಿಂದ ರಾಯಚೂರಿನವರೆಗೂ ಹೆಜ್ಜೆ ಹಾಕಲಾಯಿತು. ಇದರ ಯಶಸ್ಸಿನಿಂದಾಗಿ ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಬಲಿಷ್ಠವಾದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಿಮ್ಮ ಸೇವೆಗೆ ಅವಕಾಶ ಸಿಕ್ಕಿದೆ. ರಾಹುಲ್ ಗಾಂಧಿ ಅವರ ಯಾತ್ರೆಯಿಂದ ಬಿಜೆಪಿಯವರಿಗೆ ಭಯ ಹುಟ್ಟಿದೆ. ನಾವು ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ಮಾಡಿದ್ದೆವು. ಆ ಸರ್ಕಾರವನ್ನು ಬೀಳಿಸಿದವರ ಜೊತೆಗೆ ಇಂದು ಜೆಡಿಎಸ್ ಸಖ್ಯ ಬೆಳೆಸಿದೆ. ಅನ್ಯಾಯ ಮಾಡಿದವರ ಜೊತೆ ಸೇರಿ ರಾಜಕಾರಣ ಮಾಡುತ್ತಿದ್ದಾರೆ. ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮಿ, ಅನ್ನ ಭಾಗ್ಯ ಯೋಜನೆಗಳು ಜನರಿಗೆ ನೆರವಾಗಿವೆ. ಅನ್ನಭಾಗ್ಯ ಯೋಜನೆ ಅಕ್ಕಿಯೇ ನಾವು ಜನರಿಗೆ ನೀಡುವ ಮಂತ್ರಾಕ್ಷತೆ. ನಾವು ಈ ಯೋಜನೆಗಳನ್ನು ಒಂದು ಜಾತಿ, ಧರ್ಮ, ಸಮುದಾಯ, ಪಕ್ಷದವರಿಗೆ ಮಾತ್ರ ನೀಡುತ್ತಿದ್ದೇವಾ? ಇದೇ ಕಾಂಗ್ರೆಸ್ ಪಕ್ಷದ ಬದ್ಧತೆ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ನನಗೆ ರಾಮನ ಬಗ್ಗೆ ಭಕ್ತಿ ಇಲ್ಲ, ಅಯೋಧ್ಯೆಗೆ ಹೋಗಲ್ಲ: ಪ್ರಿಯಾಂಕ್ ಖರ್ಗೆ

TAGGED:bengalurubjpcongressDK Shivakumarಕಾಂಗ್ರೆಸ್ಡಿಕೆ ಶಿವಕುಮಾರ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema News

Is Dhanush Dating Mrunal Thakur
ಧನುಶ್ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?
Cinema Karnataka Latest
Actress Sumalatha condoles the death of Malayalam Actor Shanawas
ʼಕೇರಂ, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories

You Might Also Like

Uttarakhand Cloudburst
Districts

ಉತ್ತಾರಾಖಂಡದಲ್ಲಿ ಪ್ರವಾಹ – ಕಲಬುರಗಿ ಜಿಲ್ಲಾಡಳಿತದಿಂದ ಸಹಾಯವಾಣಿ ಕೇಂದ್ರ ಆರಂಭ

Public TV
By Public TV
2 hours ago
ARMY
Districts

ಗಡಿಯಲ್ಲಿ ಯಾವುದೇ ಕದನ ವಿರಾಮ ಉಲ್ಲಂಘನೆಯಾಗಿಲ್ಲ: ಭಾರತೀಯ ಸೇನೆ

Public TV
By Public TV
2 hours ago
IndianArmy
Latest

ಆಪರೇಷನ್‌ ಸಿಂಧೂರ ಬಳಿಕ ಮೊದಲ ಬಾರಿಗೆ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ

Public TV
By Public TV
2 hours ago
Uttarakashi Cloudburst army camp
Latest

ಉತ್ತರಕಾಶಿಯಲ್ಲಿ ಮೇಘಸ್ಫೋಟ – ಆರ್ಮಿ ಕ್ಯಾಂಪ್‌ನಲ್ಲಿದ್ದ 10ಕ್ಕೂ ಅಧಿಕ ಸೈನಿಕರು ನಾಪತ್ತೆ

Public TV
By Public TV
2 hours ago
Pankaj Chaudhary
Karnataka

ಕರ್ನಾಟಕಕ್ಕೆ 46,933 ಕೋಟಿ ತೆರಿಗೆ ಹಣ ಬಿಡುಗಡೆ – ಕೇಂದ್ರ ಹಣಕಾಸು ಸಚಿವಾಲಯ

Public TV
By Public TV
3 hours ago
JP Nadda Mallikarjun Kharge
Districts

ನನ್ನಿಂದ ಟ್ಯೂಷನ್‌ ತೆಗೆದುಕೊಳ್ಳಿ: ಖರ್ಗೆ vs ನಡ್ಡಾ ವಾಕ್ಸಮರ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?