ಬಿಜೆಪಿಯವರು ರಾಮನನ್ನು ಸೀತೆಯಿಂದ ಬೇರ್ಪಡಿಸಿದ್ದಾರೆ: ಸಿದ್ದರಾಮಯ್ಯ

Public TV
2 Min Read
Siddaramaiah 13

– ಮತ್ತೆ ಜೈ ಶ್ರೀರಾಮ್ ಎಂದ ಸಿಎಂ

ಮೈಸೂರು: ನಾವು ಪೂಜಿಸುವ ರಾಮನ ಜೊತೆಗೆ ಸೀತೆ, ಲಕ್ಷ್ಮಣ, ಹನುಮಂತ ಇರುತ್ತಾರೆ. ಅದಕ್ಕೆ ನಾವು ಸೀತಾರಾಮ ಎಂದು ಕರೆಯುತ್ತೇವೆ. ಬಿಜೆಪಿಯವರು (BJP) ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದ್ದರಿಂದಲೇ ಸೀತೆ, ಲಕ್ಷ್ಮ,ಣ, ಹನುಮಂತನನ್ನು ಬೇರ್ಪಡಿಸಿದ್ದಾರೆ. ರಾಮನನ್ನು ಮಾತ್ರ ಉಳಿಸಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಟೀಕಿಸಿದ್ದಾರೆ.

ಪಿರಿಯಾಪಟ್ಟಣ (Piriyapatna) ತಾಲೂಕಿನ ಕೊಪ್ಪ ಗ್ರಾಮದಲ್ಲಿ ಮಾತನಾಡಿದ ಅವರು, ಶ್ರೀರಾಮನನ್ನು ಬಿಜೆಪಿಯವರು ಗುತ್ತಿಗೆ ತೆಗೆದುಕೊಂಡಿದ್ದಾರಾ? ನಮ್ಮೂರಲ್ಲಿ, ನಿಮ್ಮೂರಲ್ಲಿ ರಾಮಮಂದಿರ ಇಲ್ವಾ? ನಾವೆಲ್ಲ ರಾಮನನ್ನ ಪೂಜೆ ಮಾಡಲ್ವಾ? ನಾವೆಲ್ಲಾ ಹಿಂದೂಗಳಲ್ವಾ? ನನ್ನ ಹೆಸರಿನಲ್ಲೇ ರಾಮ ಇದ್ದಾನೆ. ನಾವು ಮಹಾತ್ಮ ಗಾಂಧಿ ಹೇಳುವ ರಾಮನ ಮೇಲೆ ನಂಬಿಕೆ ಇಟ್ಟಿದ್ದೇವೆ. ರಘುಪತಿ ರಾಘವ ರಾಜಾರಾಮ್, ಪತೀತ ಪಾವನ ಸೀತಾರಾಮ್ ಎಂದು ಹೇಳಿದ್ದಾರೆ. ನಾವು ಪೂಜಿಸುವ ರಾಮನ ಜೊತೆಗೆ ಸೀತೆ, ಲಕ್ಷ್ಮಣ, ಹನುಮಂತ ಇರುತ್ತಾರೆ. ಅದಕ್ಕೆ ನಾವು ಸೀತಾರಾಮ ಎಂದು ಕರೆಯುತ್ತೇವೆ. ಬಿಜೆಪಿಯವರು ರಾಮನ ಹೆಸರಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದ್ದರಿಂದಲೇ ಸೀತೆ, ಲಕ್ಷ್ಮಣ, ಹನುಮಂತನನ್ನು ಬೇರ್ಪಡಿಸಿದ್ದಾರೆ. ರಾಮನನ್ನು ಮಾತ್ರ ಉಳಿಸಿಕೊಂಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ರಾಹುಲ್ ಗಾಂಧಿ ಪರ ರೋಡಿಗಿಳಿದ ಮೊಹಮ್ಮದ್ ನಲಪಾಡ್ ವಿರುದ್ಧ ಎಫ್‌ಐಆರ್

narendra modi ayodhya

ಬಿಜೆಪಿಯವರು ಜನರನ್ನು ಮರುಳು ಮಾಡುತ್ತಿದ್ದಾರೆ. ಹಿಂದುತ್ವದ ಹೆಸರಲ್ಲಿ ಅಧಿಕಾರ ಹಿಡಿದು ಕುಳಿತಿದ್ದಾರೆ. ರಾಮಮಂದಿರ ಉದ್ಘಾಟನೆ ಮಾಡಿದ್ದಾರೆ. ವ್ರತ ಮಾಡುತ್ತಾರಂತೆ. ನಾವು ರಾಮನ ಪೂಜೆ ಮಾಡಲ್ವ? ರಾಮನ ಭಜನೆ ಮಾಡಲ್ವ? ಧನುರ್ಮಾಸದಲ್ಲಿ ನಾನೂ ಬೆಳಗ್ಗೆ ಎದ್ದು ದೇವಸ್ಥಾನಕ್ಕೆ ಹೋಗಿ ರಾಮನ ಭಜನೆ ಹಾಡುತ್ತಿದ್ದೆ. ಮೊನ್ನೆ ಬೆಂಗಳೂರಿನಲ್ಲಿ ರಾಮಮಂದಿರ ಉದ್ಘಾಟನೆ ಮಾಡಿದೆ. ಜೈ ಶ್ರೀರಾಮ್ ಅಂತ ಘೋಷಣೆ ಕೂಗಿಸಿದೆ. ನನ್ನ ಹೆಸರು ಸಿದ್ದರಾಮಯ್ಯ. ನನ್ನ ಹೆಸರಲ್ಲೇ ರಾಮ ಇದ್ದಾನೆ. ನಮ್ಮಪ್ಪನ ಹೆಸರು ಸಿದ್ದರಾಮೇಗೌಡ. ತಮ್ಮಂದಿರ ಹೆಸರು ರಾಮೇಗೌಡ. ಸಿದ್ದೇಗೌಡ, ಸಿದ್ದರಾಮೇಗೌಡ. ನಾವ್ಯಾರೂ ಹಿಂದೂಗಳು ಅಲ್ವಾ? ಬಿಜೆಪಿಯವರು ಭಾವನೆಗಳ ಮೇಲೆ ಮತ ಕೇಳುತ್ತಾರೆ. ಅವರನ್ನು ನೀವು ನಂಬಬೇಡಿ ಎಂದು ಹರಿಹಾಯ್ದರು. ಇದನ್ನೂ ಓದಿ: ಮೇಲುಕೋಟೆ ಶಿಕ್ಷಕಿ ಕೊಲೆ ಪ್ರಕರಣ – ಆರೋಪಿ ಅರೆಸ್ಟ್

ಉದ್ಯೋಗ ಕೇಳಿದ್ರೆ ಪಕೋಡ ಮಾರಿ ಅಂತ ಮೋದಿ ಹೇಳಿದ್ರು. ಮೋದಿಯವರು ನುಡಿದಂತೆ ನಡೆಯಲು ಸಾಧ್ಯವಾಗಿಲ್ವಲ್ಲ. ಅದಕ್ಕೆ ರಾಮನನ್ನು ಮುಂದಿಟ್ಟುಕೊಂಡು ಬಂದಿದ್ದಾರೆ. ಜನ ಬುದ್ಧಿವಂತರಿದ್ದಾರೆ. ನೀವೆಷ್ಟೆ ದಾರಿ ತಪ್ಪಿಸಿದ್ರೂ ಜನ ಕೈ ಹಿಡಿಯಲ್ಲ. ನರೇಂದ್ರ ಮೋದಿ ಕೆಲಸ ಮಾಡಿಲ್ಲ. ಎರಡು ಕೋಟಿ ಉದ್ಯೋಗ ಕೊಡಲಿಲ್ಲ. ಪೆಟ್ರೋಲ್, ಡೀಸೆಲ್, ಗೊಬ್ಬರದ ಬೆಲೆ ಬಗ್ಗೆ ಮಾತನಾಡಲ್ಲ. ಈಗ ರಾಮ ರಾಮ ಅಂತಿದ್ದಾರೆ. ಜನ ಬುದ್ಧಿವಂತರು, ಎಲ್ಲವೂ ಅರ್ಥ ಆಗುತ್ತೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಲಬುರಗಿ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿದ ಕೇಸ್‍ನಲ್ಲಿ ನಾಲ್ವರ ಬಂಧನ: ಪರಮೇಶ್ವರ್

Share This Article