ಇಲ್ಲಿಯವರೆಗೆ ಸಹಕಾರ ಕೊಟ್ಟಿದ್ದಕ್ಕೆ ಡಿಕೆಶಿ, ಸಿಎಂಗೆ ಧನ್ಯವಾದ ಸಲ್ಲಿಸಿದ್ರು ಶೆಟ್ಟರ್

Public TV
1 Min Read
JAGADEESH SHETTAR

ನವದೆಹಲಿ: ಮಾಜಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಹಾಗೂ ಸಿಎಂ ಸಿದ್ದರಾಮಯ್ಯಗೆ (Siddaramaiah) ಧನ್ಯವಾದಗಳನ್ನು ತಿಳಿಸಿದ್ದಾರೆ.

ಕಾಂಗ್ರೆಸ್‌ (Congress) ಪಕ್ಷದಿಂದ ಮತ್ತೆ ಬಿಜೆಪಿ (BJP) ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ (Jagadeesh Shettar) ಅವರು ಮಾತನಾಡಿ, ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ಸಂದರ್ಭದಲ್ಲಿ ಅವರು ಕೂಡ ಒಳ್ಳೆಯ ರೀತಿಯಲ್ಲಿ ಗೌರವ ಸ್ಥಾನ-ಮಾನವನ್ನು ಕೊಟ್ಟಿದ್ದಾರೆ ಎಂದರು.

ಇಲ್ಲಿಯವರೆಗೆ ಸಹಕಾರ ಕೊಟ್ಟಿದಕ್ಕಾಗಿ ಡಿ.ಕೆ ಶಿವಕುಮಾರ್‌ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಈ ಸಂದರ್ಭದಲ್ಲಿ ಜಗದೀಶ್‌ ಶೆಟ್ಟರ್‌ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಬಿಗ್ ಶಾಕ್- ಮತ್ತೆ ‘ಕಮಲ’ ಹಿಡಿದ ಜಗದೀಶ್ ಶೆಟ್ಟರ್

Jagadish Shettar

ಬಿಜೆಪಿಯಿಂದ ಅಸಮಾಧಾನಗೊಂಡಿದ್ದ ಜಗದೀಶ್‌ ಶೆಟ್ಟರ್‌ ಅವರು ಕಾಂಗ್ರೆಸ್‌ಗೆ ಸೇರಿದ್ದರು. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಇದೀಗ ಮತ್ತೆ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇಂದು ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಸುದೀರ್ಘವಾದ ಚರ್ಚೆ ನಡೆಸಿದರು. ಈ ವೇಳೆ ಹಾವೇರಿ ಅಥವಾ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಒಂದು ಕ್ಷೇತ್ರಕ್ಕೆ ಟಿಕೆಟ್ ಕೊಡಿಸುವ ಭರವಸೆಯನ್ನು ಹೈಕಮಾಂಡ್‌ ನೀಡಿದೆ.

ಸದ್ಯ ಬಿಜೆಪಿ ಸೇರ್ಪಡೆಯ ಘೋಷಣೆಯ ಜೊತೆಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಮತ್ತು ಎಂಎಲ್​ಸಿ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಈ ಸಂಬಂಧ ಸ್ಪೀಕರ್‌ ಬಸವರಾಜ ಹೊರಟ್ಟಿಯವರಿಗೆ ಪತ್ರ ಬರೆದಿರುವ ಶೆಟ್ಟರ್‌, ಕರ್ನಾಟಕ ವಿಧಾನಪರಿಷತ್ತು ಸದಸ್ಯತ್ವಕ್ಕೆ ಈ ದಿನ ನಾನು ನನ್ನ ಸ್ವ-ಿಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿಬೇಕಾಗಿ ವಿನಂತಿ. ಇಲ್ಲಿಯವರೆಗೆ ತಾವು ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದಿದ್ದಾರೆ.

Share This Article