ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರ ಗುಂಡೇಟಿಗೆ ಹುತಾತ್ಮರಾಗಿದ್ದ ಕನ್ನಡಿಗ ಯೋಧ ಕ್ಯಾಪ್ಟನ್ ಎಂವಿ ಪ್ರಾಂಜಲ್‌ಗೆ (Captain MV Pranjal) ಶೌರ್ಯ ಚಕ್ರ ಪ್ರಶಸ್ತಿ ಘೋಷಿಸಲಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಘೋಷಣೆ ಮಾಡಿದ್ದಾರೆ. ಭಯೋತ್ಪಾದಕ ವಿರುದ್ಧ ಹೋರಾಡಿದ ಅವರಿಗೆ ಮರಣೋತ್ತರವಾಗಿ ಶೌರ್ಯ ಚಕ್ರ ಪ್ರಶಸ್ತಿ ಗೌರವ ದಕ್ಕಿದೆ. ಇದನ್ನೂ ಓದಿ: Padma Awards 2024: ಪದ್ಮ ಪ್ರಶಸ್ತಿ ಪ್ರಕಟ – ಕರ್ನಾಟಕದ ಇಬ್ಬರಿಗೆ ಪದ್ಮಶ್ರೀ
ಜಮ್ಮು ಕಾಶ್ಮೀರದ ರಜೌರಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಹಿತ ನಾಲ್ವರು ಯೋಧರು ಹುತಾತ್ಮರಾಗಿದ್ದರು. 28ರ ಹರೆಯದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ 63 ರಾಷ್ಟ್ರೀಯ ರೈಫಲ್ಸ್‌ನ ಕ್ಯಾಪ್ಟನ್ ಆಗಿದ್ದರು.
ಮಂಗಳೂರಿನಲ್ಲಿ ಎಂಆರ್ ಪಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ.ವೆಂಕಟೇಶ್-ಅನುರಾಧಾ ದಂಪತಿಯ ಏಕೈಕ ಪುತ್ರ. ಮಂಗಳೂರಿನಲ್ಲೇ (Mangaluru) ಹುಟ್ಟಿ ಬೆಳೆದ ಪ್ರಾಂಜಲ್, ಎಂಆರ್ಪಿಎಲ್ ಡೆಲ್ಲಿ ಸ್ಕೂಲ್‌ನಲ್ಲಿ ಹತ್ತನೇ ತರಗತಿವರೆಗೆ ವಿಧ್ಯಾಭ್ಯಾಸ ಮಾಡಿದ್ದರು. ನಂತರ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು. ಬಳಿಕ ಮಧ್ಯಪ್ರದೇಶದ ಮಿಲಿಟರಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಶಿಕ್ಷಣ ಪಡೆದುಕೊಂಡಿದ್ದರು. ಇದನ್ನೂ ಓದಿ: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯು ದೇಶಕ್ಕೆ ಐತಿಹಾಸಿಕ ಕ್ಷಣ: ದ್ರೌಪದಿ ಮುರ್ಮು