Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಮಾದೇವ’ನ ಮಾಸ್ ಟೀಸರ್- ಭರ್ಜರಿ ಆ್ಯಕ್ಷನ್ ಮೂಲಕ ಮರಿ ಟೈಗರ್ ಎಂಟ್ರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಮಾದೇವ’ನ ಮಾಸ್ ಟೀಸರ್- ಭರ್ಜರಿ ಆ್ಯಕ್ಷನ್ ಮೂಲಕ ಮರಿ ಟೈಗರ್ ಎಂಟ್ರಿ

Cinema

‘ಮಾದೇವ’ನ ಮಾಸ್ ಟೀಸರ್- ಭರ್ಜರಿ ಆ್ಯಕ್ಷನ್ ಮೂಲಕ ಮರಿ ಟೈಗರ್ ಎಂಟ್ರಿ

Public TV
Last updated: January 26, 2024 5:52 pm
Public TV
Share
3 Min Read
vinod prabhakar 1
SHARE

ಮರಿ ಟೈಗರ್ ವಿನೋದ್ ಪ್ರಭಾಕರ್ (Vinnod Prabhakar) ನಟನೆಯ ಬಹುನಿರೀಕ್ಷಿತ ಸಿನಿಮಾ ‘ಮಾದೇವ’. ಪೋಸ್ಟರ್‌ಗಳ ಮೂಲಕವೇ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ‘ಮಾದೇವ’ (Maadeva Film) ಟೀಸರ್ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಾಯಕ ವಿನೋದ್ ಪ್ರಭಾಕರ್, ನಾಯಕಿ ಸೋನಲ್, ಹಿರಿಯ ನಟಿ ಶೃತಿ, ನಿರ್ದೇಶಕ ನವೀನ್ ರೆಡ್ಡಿ ಸೇರಿದಂತೆ ಇಡೀ ಚಿತ್ರತಂಡಕ್ಕೆ ನಿರ್ದೇಶಕ ತರುಣ್ ಸುಧೀರ್, ನಟರಾದ ಅಭಿಷೇಕ್ ಅಂಬರೀಶ್, ಧನ್ವೀರ್ ಗೌಡ, ಝೈದ್ ಖಾನ್ ಸಾಥ್ ಕೊಟ್ಟರು.

vinod prabhakar 2

ಟೀಸರ್ ಬಿಡುಗಡೆ ಬಳಿಕ ಮಾತನಾಡಿದ ನಿರ್ದೇಶಕ ತರುಣ್ ಸುಧೀರ್, ವಿನೋದ್ ಜೊತೆ ನನಗೆ ಒಳ್ಳೆಯ ಬಾಂಧವ್ಯ ಇದೆ. ರಿಯಲ್ ಲೈಫ್ ಫೈಟರ್ ವಿನೋದ್. ಮಾದೇವ ಪ್ರಸೆಂಟೇಷನ್, ಅವರ ಲುಕ್ ಬಹಳ ಚೆನ್ನಾಗಿದೆ. ಬಿಯರ್ಡ್ ಲುಕ್‌ನಲ್ಲಿ ಅವರು ಚೆನ್ನಾಗಿ ಕಾಣಿಸುತ್ತಾರೆ. ಕೆಲಸದ ವಿಚಾರದಲ್ಲಿ ಪ್ರಾಮಾಣಿಕ, ಹಾರ್ಡ್ ವರ್ಕರ್. ಸಿನಿಮಾಗೆ ತುಂಬಾ ಎಫರ್ಟ್ ಹಾಕಿ ಕೆಲಸ ಮಾಡುತ್ತಾರೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು. ಇದನ್ನೂ ಓದಿ:ಡ್ರೋನ್ ದೋಖಾ ಆರೋಪ: ಸದ್ಯಕ್ಕೆ ದೂರು ನೀಡಲ್ಲ ಎಂದ ಸಾರಂಗ್

Vinod Prabhakar

ನಟ ಅಭಿಷೇಕ್ ಅಂಬರೀಶ್ (Abhishek Ambareesh) ಮಾತನಾಡಿ, ಟೈಗರ್ ಅವರ ನಟನೆ, ಫೈಟ್ ಬಗ್ಗೆ ಅಥವಾ ಸ್ಕ್ರೀನ್ ಪ್ರೆಸೆನ್ಸ್ ಬಗ್ಗೆ ಮಾತನಾಡುವ ಬಗ್ಗೆ ದೊಡ್ಡವನಲ್ಲ ನಾನು. ನಮ್ಮೆಲ್ಲರಿಗಿಂತ ಅವರು ಹಿರಿಯರು. ಆದರೆ ಯುವಕರಾಗಿ ಕಾಣಿಸಿಕೊಳ್ಳುತ್ತಾರೆ. ವಿಷ್ಯುವಲ್ಸ್, ಕ್ಯಾಮೆರಾ ವರ್ಕ್, ಮ್ಯೂಸಿಕ್ ಚೆನ್ನಾಗಿದೆ. ಸಬ್ಜೆಕ್ಟ್ ಬೇರೆ ತರ ಇದೆ. ಇತ್ತೀಚಿಗಿನ ದಿನ 70ರ ಕಥೆ ಸಕ್ಸಸ್ ಆಗಿದೆ. ಈಗ 80ರ ಕಥೆಗೆ ಬಂದಿದ್ದೇನೆ. 2023 ಹಿಟ್ ಕಾಟೇರ ಸಿನಿಮಾ. 2024ರ ಹಿಟ್ ನಿಮ್ಮದಾಗಲಿ ಎಂದು ವಿನೋದ್ ಪ್ರಭಾಕರ್ ಚಿತ್ರಕ್ಕೆ ಶುಭ ಹಾರೈಸಿದರು.

vinod prabhakar

ನಾಯಕ ವಿನೋದ್ ಪ್ರಭಾಕರ್ (Vinod Prabhakar) ಮಾತನಾಡಿ, ನಾವು ಏನ್ ಅನ್ನೋದನ್ನು ಕೆಲಸದಲ್ಲಿ ತೋರಿಸುತ್ತೇವೆ. ಇದು ಬೇರೆ ರೀತಿಯ ಜಾನರ್ ಸಿನಿಮಾ. ಬಹಳಷ್ಟು ಜನ ಟಚ್ ಮಾಡಲು ಆಗದ ಕಥೆ. ನನ್ನ ಗೆಟಪ್ ನಿಮಗೆ ಇಷ್ಟ ಆಗಿದೆ ಅಂದುಕೊಳ್ಳುತ್ತೇನೆ. ಬೆಸ್ಟ್ ಲುಕ್ ಮಾದೇವ ಅಂತಾ ನನಗೆ ಅನಿಸುತ್ತದೆ. ನಿರ್ಮಾಪಕ ಕೇಶವಣ್ಣ ಬಹಳಷ್ಟು ಕಷ್ಟ ಎದುರಿಸಿ ಸಿನಿಮಾ ಮಾಡಿದ್ದೀರಾ? ನಿಮಗೆ ಒಳ್ಳೆಯದಾಗಲಿ. ಸಿನಿಮಾ ಬಗ್ಗೆ ಮಾತಾನಾಡುವುದು ತುಂಬಾ ಇದೆ. ಟ್ರೈಲರ್ ಇವೆಂಟ್‌ನಲ್ಲಿ ಮಾತನಾಡುತ್ತೇನೆ ಎಂದರು.

vinod prabhakarನಾಯಕಿ ಸೋನಲ್ (Sonal Monteiro) ಮಾತನಾಡಿ, ರಾಬರ್ಟ್ (Robert) ಆದ್ಮೇಲೆ ನನಗೆ ವಿನೋದ್‌ಗೆ ಜೋಡಿಯಾಗಿ ನಟಿಸಲು ತುಂಬಾ ಸಿನಿಮಾಗಳು ಬಂದವು. ಆದರೆ ಯಾವುದು ಸೆಟ್ ಆಗಲಿಲ್ಲ. ಮಾದೇವ ಸಿನಿಮಾ ವಿನೋದ್‌ಗೆ ಬಂದಿದ್ದು, ಅವರು ನನ್ನ ಕಾಸ್ಟ್ ಮಾಡಿದರೆ ಚೆನ್ನಾಗಿ ಇರುತ್ತದೆ ಎಂದಾಗ ನನ್ನ ಜರ್ನಿ ಶುರುವಾಯ್ತು. ಹಳ್ಳಿ ಹುಡುಗಿ ಪಾತ್ರ ನನ್ನದು. ನಾನು ತುಂಬಾ ಎಂಜಾಯ್ ಮಾಡಿ ನನ್ನ ಪಾತ್ರ ಮಾಡಿದ್ದೇನೆ ಎಂದು ತಿಳಿಸಿದರು.

Sonal 2

ನಿರ್ದೇಶಕ ನವೀನ್ ರೆಡ್ಡಿ ಮಾತನಾಡಿ, ಶೃತಿ ಮೇಡಂ ಪಾತ್ರ ಚಾಲೆಂಜಿಂಗ್ ಆಗಿದೆ. ಇಡೀ ಸಿನಿಮಾವನ್ನು ವಿನೋದ್ ಸರ್ ಭುಜದ ಮೇಲೆ ಹಾಕಿ ತೆಗೆದುಕೊಂಡು ಹೋಗುತ್ತಾರೆ. ಅಚ್ಯುತ್ ಸರ್ ಗೆಸ್ಟ್ ಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಲನ್ ಆಗಿ ಕಿಟ್ಟಿ ಸರ್ ನಟಿಸಿದ್ದಾರೆ. ಇಡೀ ತಂಡದ ಶ್ರಮ ಇದು ಎಂದರು. ಇದನ್ನೂ ಓದಿ:ಹೊಸ ಪಕ್ಷ ಕಟ್ಟಲು ಹೊರಟ ದಳಪತಿ ಖ್ಯಾತ ನಟ ವಿಜಯ್

Sonal 1

‘ಮಾದೇವ’ ಟೀಸರ್ ಮಾಸ್ ಅಂಶಗಳಿಂದ ಕೂಡಿದೆ. ವಿನೋದ್ ಪ್ರಭಾಕರ್ ರಗಡ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಹಿಂದೆಂದೂ ಕಂಡಿರದಂತಹ ಗೆಟಪ್‌ನಲ್ಲಿ ಮರಿ ಟೈಗರ್ ಮಿಂಚಿದ್ದಾರೆ. ಖಳನಾಯಕನಾಗಿ ಶ್ರೀನಗರ ಕಿಟ್ಟಿ, ಶ್ರುತಿ ಮತ್ತು ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ‘ರಾಬರ್ಟ್’ ಸಿನಿಮಾದಲ್ಲಿ ರಾಘವ್ ಮತ್ತು ತನು ಪಾತ್ರಗಳ ಮೂಲಕ ಪ್ರೇಕ್ಷಕರಿಗೆ ಸಖತ್ ಇಷ್ಟವಾಗಿದ್ದ ವಿನೋದ್ ಪ್ರಭಾಕರ್ ಮತ್ತು ಸೋನಲ್ ಮೊಂಥೆರೋ ಮಾದೇವ’ ಚಿತ್ರದಲ್ಲೂ ಜೋಡಿಯಾಗಿ ಅಭಿನಯಿಸಿದ್ದಾರೆ.

ನೈಜ ಘಟನೆಗಳಿಂದ ಸ್ಪೂರ್ತಿ ಪಡೆದ ಈ ಸಿನಿಮಾದ ಕಥೆಯು 1965, 1980 ಮತ್ತು 1999ರ ಕಾಲಘಟ್ಟದಲ್ಲಿ ನಡೆಯಲಿದೆ. ಕನಕಪುರ, ಚನ್ನಪಟ್ಟಣ, ಶಿವಮೊಗ್ಗ, ರಾಮೋಜಿ ಫಿಲ್ಮಂಸಿಟಿ, ಹೆಸರಘಟ್ಟ ಭಾಗಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಬಾಹುಬಲಿ, ಆರ್‌ಆರ್‌ಆರ್ ಸಿನಿಮಾಗಳ ಛಾಯಾಗ್ರಾಹಕ ಸೆಂಥಿಲ್ ಕುಮಾರ್ ಬಳಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಬಾಲಕೃಷ್ಣ ತೋಟ ‘ಮಾದೇವ’ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ರಾಧಾಕೃಷ್ಣ ಬ್ಯಾನರ್ ನಡಿ ಆರ್ ಆರ್ ಕೇಶವ ದೇವಸಂದ್ರ ಚಿತ್ರಕ್ಕೆ ಹಣ ಹಾಕಿದ್ದಾರೆ. ಮಾರ್ಚ್ ತಿಂಗಳಲ್ಲಿ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ.

TAGGED:maadeva filmsandalwoodsonalvinnod prabhakarಮಾದೇವ ಸಿನಿಮಾವಿನೋದ್ ಪ್ರಭಾಕರ್ಸೋನಲ್ ಮೊಂಥೆರೋಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Sharanprakash Patil 1
Kalaburagi

ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ದ್ವಿಗುಣ: ಶರಣಪ್ರಕಾಶ ಪಾಟೀಲ್

Public TV
By Public TV
7 hours ago
Rehan Ahmed Will Jacks
Cricket

16 ಎಸೆತಗಳಲ್ಲಿ 44 ರನ್‌ – ಇಂಗ್ಲೆಂಡಿಗೆ ರೋಚಕ ಜಯ, ಸೋತರೂ ನ್ಯೂಜಿಲೆಂಡಿಗಿದೆ ಸೆಮಿ ಅವಕಾಶ

Public TV
By Public TV
7 hours ago
temple theft
Chamarajanagar

ಗುಂಡ್ಲುಪೇಟೆ ತಾಲೂಕಿನ 6 ದೇವಸ್ಥಾನಗಳಲ್ಲಿ ಕಳವು

Public TV
By Public TV
7 hours ago
Hindu activist fatally attacked by Muslim youths in Napoklu Madikeri
Districts

ನಾಪೋಕ್ಲಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಅನ್ಯಕೋಮಿನ ಯುವಕರಿಂದ ಮಾರಣಾಂತಿಕ ಹಲ್ಲೆ

Public TV
By Public TV
8 hours ago
Bagalkot stone pelting case Women protest against police arrest of Hindu youth
Bagalkot

ಬಾಗಲಕೋಟೆ ಕಲ್ಲು ತೂರಾಟ ಕೇಸ್‌ | ಹಿಂದೂ ಯುವಕರ ಬಂಧನ ವೇಳೆ ಪೊಲೀಸರ ಅಡ್ಡಗಟ್ಟಿ ಪ್ರತಿಭಟಿಸಿದ ಮಹಿಳೆಯರು

Public TV
By Public TV
9 hours ago
surat suicide
Crime

3 ಪುಟಗಳ ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?