ಅಂತೂ ಇಂತೂ ಬಿಗ್ ಬಾಸ್ ಕನ್ನಡ ಸೀಸನ್ 10ಕ್ಕೆ (Bigg Boss Kannada 10) ತೆರೆ ಬೀಳುವ ಸಮಯ ಬಂದಿದೆ. ದೊಡ್ಮನೆಯ ವಿನ್ನರ್ ಯಾರಾಗಬಹುದು ಎಂದು ಕನ್ನಡಿಗರು ಎದುರು ನೋಡ್ತಿದ್ದಾರೆ. ಅದಕ್ಕೆ ಉತ್ತರ, ಇಂದು (ಜ.28) ರಾತ್ರಿ ಬಿಗ್ ಬಾಸ್ ಫಿನಾಲೆ ಎಪಿಸೋಡ್‌ನಲ್ಲಿ ಸಿಗಲಿದೆ. ತುಕಾಲಿ ಸಂತು ನಂತರ ಇನ್ನೂಳಿದ 5 ಫೈನಲಿಸ್ಟ್‌ಗಳ ನಡುವೆ ಗೆಲುವಿಗಾಗಿ ಟಫ್ ಫೈಟ್ ಶುರುವಾಗಿದೆ.
ಈ ಬಾರಿ 6 ಜನ ಸ್ಪರ್ಧಿಗಳು ಫೈನಲಿಸ್ಟ್‌ಗಳಾಗಿ ಫಿನಾಲೆಗೆ ಎಂಟ್ರಿ ಪಡೆದುಕೊಂಡಿದ್ದರು. ಇದು ಸುದೀಪ್ ಅವರು ಸ್ಪರ್ಧಿಗಳಿಗೆ ನೀಡಿದ ಉಡುಗೊರೆಯಾಗಿತ್ತು. ನಿನ್ನೆ ಎಪಿಸೋಡ್‌ನಲ್ಲಿ (ಜ.27) 6ನೇ ರನ್ನರ್ ಅಪ್ ಆಗಿ ತುಕಾಲಿ ಸಂತೋಷ್ ಹೊರಬಂದಿದ್ದಾರೆ. ಇದನ್ನೂ ಓದಿ:ಇಂದು ಹಾಸ್ಯನಟ ನಾಗಭೂಷಣ್ ಮದುವೆ


ಈ ಸೀಸನ್‌ನಲ್ಲಿರೋ ಎಕೈಕ ಮಹಿಳಾ ಸ್ಪರ್ಧಿ ಎಂದರೆ ಅದು ಸಂಗೀತಾ ಶೃಂಗೇರಿ. ಮೊದಲ ದಿನದಿಂದಲೂ ಟಫ್ ಫೈಟ್ ನೀಡುತ್ತಲೇ ಬಂದಿದ್ದಾರೆ. ವಿನಯ್, ಕಾರ್ತಿಕ್ ಏನು ಕಮ್ಮಿಯಿಲ್ಲ. ಎದುರಾಳಿಗಳಿಗೆ ಠಕ್ಕರ್ ಕೊಟ್ಟು ಬರುವ ಸ್ಪರ್ಧಿಗಳು. ವರ್ತೂರು ಸಂತೋಷ್, ಪ್ರತಾಪ್ ಸೈಲೆಂಟ್ ಆಗಿದ್ರು ಕೂಡ ಸಮಯ ಬಂದಾಗ ವೈಲೆಂಟ್ ಆಗಿ ಆಟ ಆಡಿದ್ದು ಇದೆ. ಹಾಗಾಗಿ ವಿನ್ನರ್ ಘೋಷಣೆಗೆ ಬಿಗ್ ಬಾಸ್ ಫಿನಾಲೆ ಎಪಿಸೋಡ್ ಪ್ರಸಾರ ಆಗುವವರೆಗೂ ಕಾಯಬೇಕಿದೆ.


