ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರದೇಶದಲ್ಲಿ ಮಂಗಳವಾರ ನಡೆದ ಬಾಂಬ್ ಸ್ಫೋಟದಲ್ಲಿ (Pakistan Bomb Blast) ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ನ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (PTI) ಪಕ್ಷದ ಮೂವರು ದುರ್ಮರಣ ಹೊಂದಿದ್ದಾರೆ.
???????????? BOMB BLAST IN IMRAN KHAN PARTY RALLY
A bomb blast in Pakistan Former PM Imran Khan election rally in Quetta…
Reports of injured & still no casualty…
Earlier today Court sentenced Imran Khan 10 years prison alon with former FM Shah Mehmood Qureshi…#Gaza #Hamas… pic.twitter.com/Vp9v0AZA2C
— GeoPolitics (@GeoPolitics52) January 30, 2024
ಇಮ್ರಾನ್ ಖಾನ್‌ಗೆ (Imran Khan) 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಕೆಲವೇ ಗಂಟೆಗಳ ನಂತರ ಪಕ್ಷದ ಬೆಂಬಲಿತ ಅಭ್ಯರ್ಥಿ ಸದ್ದಾಂ ತರೀನ್ ಆಯೋಜಿಸಿದ್ದ ರ‍್ಯಾಲಿಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಪಿಟಿಐನ ಮೂವರು ಕಾರ್ಯಕರ್ತರು ಸಾವನ್ನಪ್ಪಿದ್ದು, ಬಾಂಬ್ ಬ್ಲಾಸ್ಟ್‌ನಲ್ಲಿ 7 ಮಂದಿ ಗಾಯಗೊಂಡಿದ್ದಾರೆ ಎಂದು ಪಿಟಿಐನ ಪ್ರಾಂತೀಯ ಪ್ರಧಾನ ಕಾರ್ಯದರ್ಶಿ ಸಲಾರ್ ಖಾನ್ ಕಾಕರ್ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಡ್ರೋನ್ ದಾಳಿಗೆ ಅಮೆರಿಕದ ಮೂವರು ಸೈನಿಕರು ಬಲಿ – ತಕ್ಕ ಉತ್ತರ ಕೊಡುತ್ತೇವೆ: ಬೈಡನ್ ಎಚ್ಚರಿಕೆ
ಬಲೂಚಿಸ್ತಾನದ ಸಿಬಿ ಪ್ರದೇಶದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಇದನ್ನೂ ಓದಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಖುರೇಷಿಗೆ 10 ವರ್ಷ ಜೈಲು
ಸದ್ಯ ಘಟನೆಯಲ್ಲಿ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. 8 ಜನರಲ್ಲಿ ಮೂವರು ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿ 8ರಂದು ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಸಂಬಂಧ ಚುನಾವಣಾ ರ‍್ಯಾಲಿ ಆಯೋಜಿಸಲಾಗಿತ್ತು. ಎಂದು ಹೇಳಲಾಗಿದೆ. ಸೈಫರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಖಾನ್‌ಗೆ ಪಾಕಿಸ್ತಾನ ನ್ಯಾಯಾಲಯ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.