ಬಿಜೆಪಿಯಿಂದ ಕೋಟಿ ಕೋಟಿ ಆಫರ್‌ – ಆರೋಪ ಮಾಡಿದ್ದ ಕೇಜ್ರಿವಾಲ್‌ಗೆ ಕಂಟಕ – ದೆಹಲಿ ಕ್ರೈಂಬ್ರ್ಯಾಂಚ್‌ ನೋಟಿಸ್‌

Public TV
2 Min Read
Arvind Kejriwal

ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಆಪ್‌ ಸರ್ಕಾರವನ್ನು ಕೆಡವಲು ಸಂಚು ರೂಪಿಸಿರುವ ಬಿಜೆಪಿ 7 ಆಮ್ ಆದ್ಮಿ ಪಕ್ಷದ ಶಾಸಕರನ್ನ (AAP MLAs) ಖರೀದಿಸಲು ಪ್ರಯತ್ನಿಸುತ್ತಿದೆ. 7 ಶಾಸಕರಿಗೆ ಬಿಜೆಪಿ ತಲಾ 25 ಕೋಟಿ ರೂ. ಆಫರ್‌ ನೀಡಿದೆ ಎಂದು ಆರೋಪಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ದೆಹಲಿ ಪೊಲೀಸರ ಅಪರಾಧ ವಿಭಾಗದ ನೋಟಿಸ್‌ ನೀಡಿದೆ ಎಂದು ಮೂಲಗಳು ತಿಳಿಸಿವೆ.

aap bjp

ಶುಕ್ರವಾರ ಸಂಜೆ ಮುಖ್ಯಮಂತ್ರಿ ಅವರ ನಿವಾಸಕ್ಕೆ ಭೇಟಿ ನೀಡಿದ ದೆಹಲಿ ಪೊಲೀಸರ ಕ್ರೈಂ ಬ್ರ್ಯಾಂಚ್‌ ತಂಡ ನೋಟಿಸ್‌ ನೀಡಿದೆ ಎಂದು ಹೇಳಲಾಗಿದೆ. ಆದ್ರೆ ದೆಹಲಿ ಮುಖ್ಯಮಂತ್ರಿಗಳ ಕಚೇರಿ, ಅಪರಾಧ ವಿಭಾಗದ ಅಧಿಕಾರಿಗಳು ಯಾವುದೇ ರೀತಿಯ ನೋಟಿಸ್‌ ನೀಡಿಲ್ಲ ಎಂದು ಹೇಳಿಕೊಂಡಿದೆ. ಇದನ್ನೂ ಓದಿ: 7 ಶಾಸಕರನ್ನ ಖರೀದಿಸಲು ಬಿಜೆಪಿಯಿಂದ ತಲಾ 25 ಕೋಟಿ ರೂ. ಆಫರ್‌ – ಕೇಜ್ರಿವಾಲ್‌ ಹೊಸ ಬಾಂಬ್‌

7 ಆಮ್ ಆದ್ಮಿ ಪಕ್ಷದ ಶಾಸಕರನ್ನ ಖರೀದಿಸಲು ಬಿಜೆಪಿ ತಲಾ 25 ಕೋಟಿ ರೂ. ಆಫರ್‌ ನೀಡಿದೆ ಎಂದು ಕಳೆದವಾರ ಕೇಜ್ರಿವಾಲ್‌ ಆರೋಪಿಸಿದ್ದರು. ಇದರ ವಿರುದ್ಧ ದೆಹಲಿ ಬಿಜೆಪಿ ನಿಯೋಗವು ಅಪರಾಧ ವಿಭಾಗಕ್ಕೆ ದೂರು ನೀಡಿತ್ತು. ಅಲ್ಲದೇ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸುವಂತೆ ಬಿಜೆಪಿ ನಿಯೋಗ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರ ಕ್ರೈಂ ಬ್ರ್ಯಾಂಚ್‌ ತಂಡವು ಇಂದು ಕೇಜ್ರಿವಾಲ್‌ ಅವರ ನಿವಾದಕ್ಕೆ ಭೇಟಿ ನೀಡಿ ನೋಟಿಸ್‌ ನೀಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.

aap bjp

ಕೇಜ್ರಿವಾಲ್‌ ಆರೋಪ ಏನು?
ರಾಷ್ಟ್ರರಾಜಧಾನಿಯಲ್ಲಿ ಆಪ್‌ ಸರ್ಕಾರವನ್ನು ಕೆಡವಲು ಸಂಚು ರೂಪಿಸಿರುವ ಬಿಜೆಪಿ 7 ಆಮ್ ಆದ್ಮಿ ಪಕ್ಷದ ಶಾಸಕರನ್ನ ಖರೀದಿಸಲು ಪ್ರಯತ್ನಿಸುತ್ತಿದೆ. 7 ಶಾಸಕರಿಗೆ ಬಿಜೆಪಿ ತಲಾ 25 ಕೋಟಿ ರೂ. ಆಫರ್‌ ನೀಡಿದೆ. ಬಿಜೆಪಿ ಆಪ್‌ ಶಾಸಕರೊಂದಿಗೆ ಮಾತುಕತೆಯಲ್ಲಿ ತೊಡಗಿದೆ. ಆಪ್‌ ಸರ್ಕಾರವನ್ನು ಸಂಪೂರ್ಣವಾಗಿ ಮುಗಿಸಲು ಪ್ಲ್ಯಾನ್‌ ಮಾಡಿದೆ. ಆದ್ದರಿಂದ ದೆಹಲಿ ಮದ್ಯ ನೀತಿ ಪ್ರಕರಣಕ್ಕೆ (Delhi liquor Policy Case) ಸಂಬಂಧಿಸಿದಂತೆ ಮುಖ್ಯಮಂತ್ರಿಗಳನ್ನು ಬಂಧಿಸುವುದಾಗಿ ಬೆದರಿಕೆ ಹಾಕಿದೆ. ಇದನ್ನೂ ಓದಿ: 5ನೇ ಬಾರಿಯೂ ಇಡಿ ವಿಚಾರಣೆಗೆ ಕೇಜ್ರಿವಾಲ್‌ ಗೈರು

ದೆಹಲಿಯ ಆಪ್‌ ಸರ್ಕಾರವನ್ನ ಸಂಪೂರ್ಣವಾಗಿ ಉರುಳಿಸುತ್ತೇವೆ. ಈಗಾಗಲೇ 21 ಶಾಸಕರೊಟ್ಟಿಗೆ ಮಾತುಕತೆ ನಡೆಸಿದ್ದೇವೆ. ನೀವೂ ಬಂದುಬಿಡಿ, ಪ್ರತಿಯೊಬ್ಬರಿಗೆ ತಲಾ 25 ಕೋಟಿ ರೂ. ಕೊಡುತ್ತೇವೆ. ಜೊತೆಗೆ ಬಿಜೆಪಿಯಿಂದ ಟಿಕೆಟ್‌ ನೀಡುತ್ತೇವೆ ಎಂದು ಆಮಿಷ ತೋರಿಸಿದ್ದಾರೆ ಎಂದು ಆರೋಪಿಸಿದ್ದರು. ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ನಾನು ಪ್ರಚಾರ ಮಾಡೋದನ್ನು ತಡೆಯಲು ಸಮನ್ಸ್‌: ಕೇಜ್ರಿವಾಲ್‌ ಕಿಡಿ

Share This Article