Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧನ್ವೀರ್ ನಟನೆಯ ‘ಹಯಗ್ರೀವ’ ಸಿನಿಮಾಗೆ ಮೈಸೂರಿನಲ್ಲಿ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಧನ್ವೀರ್ ನಟನೆಯ ‘ಹಯಗ್ರೀವ’ ಸಿನಿಮಾಗೆ ಮೈಸೂರಿನಲ್ಲಿ ಚಾಲನೆ

Cinema

ಧನ್ವೀರ್ ನಟನೆಯ ‘ಹಯಗ್ರೀವ’ ಸಿನಿಮಾಗೆ ಮೈಸೂರಿನಲ್ಲಿ ಚಾಲನೆ

Public TV
Last updated: February 3, 2024 6:44 pm
Public TV
Share
3 Min Read
Hayagriva 1
SHARE

ಸಮೃದ್ಧಿ ಮಂಜುನಾಥ್ ಅವರು ತಮ್ಮ ಕೆ.ವೆ.ಸಿ ಪ್ರೊಡಕ್ಷನ್ಸ್  ಲಾಂಛನದಲ್ಲಿ ನಿರ್ಮಿಸುತ್ತಿರುವ, ರಘುಕುಮಾರ್ ಓ.ಆರ್ ನಿರ್ದೇಶನದಲ್ಲಿ ಧನ್ವೀರ್ (Dhanveer) ನಾಯಕರಾಗಿ ನಟಿಸುತ್ತಿರುವ ಹಯಗ್ರೀವ (Hayagriva) ಚಿತ್ರದ ಮುಹೂರ್ತ (Muhurta) ಸಮಾರಂಭ ಇತ್ತೀಚೆಗೆ ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಹಲವಾರು ಗಣ್ಯರು ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು. ಮುಹೂರ್ತ ಸಮಾರಂಭದ ನಂತರ ಮೈಸೂರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.

Hayagriva 2

ಹಯಗ್ರೀವ, ನಮ್ಮ ಕೆವಿಸಿ ಪ್ರೊಡಕ್ಷನ್ಸ್‌ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ  ಮೂರನೆಯ ಚಿತ್ರ ಎಂದು ಮಾತನಾಡಿದ ನಿರ್ಮಾಪಕ ಸಮೃದ್ದಿ ಮಂಜುನಾಥ್, ನಾನು ಯೂಟ್ಯೂಬ್‍ನಲ್ಲಿ ‘ದಿ ಬೆಲ್‍’ ಎಂಬ ಕಿರುಚಿತ್ರ ನೋಡಿದೆ. ಆ ಕಿರುಚಿತ್ರ ಬಹಳ ಖುಷಿ ನೀಡಿತು. ಆ ಕಿರುಚಿತ್ರದ  ನಿರ್ದೇಶಕ ರಘುಕುಮಾರ್ ಅವರನ್ನು ಎಂಟು ತಿಂಗಳ ಹಿಂದೆ ಕರೆಸಿ ಮಾತನಾಡಿದೆ. ಒಂದು ಚಿತ್ರ ಮಾಡಿಕೊಡಿ ಎಂದು ಹೇಳಿದೆ. ಅವರು ತಮ್ಮ ತಂಡದೊಂದಿಗೆ ಒಂದೊಳ್ಳೆಯ ಕಥೆ ಮಾಡಿದ್ದಾರೆ. ಇದೊಂದು ಪಕ್ಕಾ ಕಮರ್ಷಿಯಲ್‍ ಚಿತ್ರ. ಕನ್ನಡದಲ್ಲಿ ಇಲ್ಲಿಯವರೆಗೂ ಈ ತರಹದ ಚಿತ್ರ ಬಂದಿಲ್ಲ ಎಂದು ಹೇಳಬಹುದು. ಧನ್ವೀರ್ ಹಾಗೂ ಸಂಜನಾ ಆನಂದ್ ನಾಯಕ-ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮತ್ತೊಬ್ಬ ನಾಯಕ ನಟಿಸುತ್ತಿದ್ದು, ಅವರು ಯಾರು ಎಂದು ಚಿತ್ರ ಬಿಡುಗಡೆಯವರೆಗೂ ಗೌಪ್ಯವಾಗಿಡಲಾಗುವುದು. ಒಂದೊಳ್ಳೆಯ ಕಥೆಗೆ ಪೂರಕವಾಗಿ ಶೀರ್ಷಿಕೆ ಸಿಕ್ಕಿದೆ. ಈ ಚಿತ್ರವನ್ನು ಎಲ್ಲರೂ ಒಪ್ಪುತ್ತಾರೆ ಎಂಬ ನಂಬಿಕೆ ಇದೆ ಎಂದರು.

Hayagriva 4

ನಿರ್ಮಾಪಕರು ಫೋನ್‍ ಮಾಡಿ ಸಿನಿಮಾ ಮಾಡಿಕೊಡಿ ಎಂದರು. ನನ್ನ ಹತ್ತಿರ ಒಂದು ಕಥೆ ಇತ್ತು. ಅದನ್ನು ಅವರಿಗೆ ಹೇಳಿದಾಗ, ಇಷ್ಟಪಟ್ಟು ಈ ಚಿತ್ರ ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಈ ಚಿತ್ರದಲ್ಲಿ ಮುಖ್ಯವಾಗಿ ಪೌರಾಣಿಕ ಅಂಶಗಳ ಜೊತೆಗೆ ಕ್ರೈಮ್‍ ಇದೆ. ಲವ್, ಸೆಂಟಿಮೆಂಟ್, ಸಸ್ಪೆನ್ಸ್ ಸೇರಿದಂತೆ ಕಮರ್ಷಿಯಲ್ ಚಿತ್ರಕ್ಕೆ ಬೇಕಾದ ಎಲ್ಲಾ ಅಂಶಗಳು ಹಯಗ್ರೀವ ಚಿತ್ರದಲ್ಲಿದೆ. ಕನ್ನಡದಲ್ಲಿ ಇದುವರೆಗೂ ಯಾರೂ ಈ ತರಹದ ಪ್ರಯತ್ನವನ್ನು ಮಾಡಿಲ್ಲ ಎಂಬುದು ನನ್ನ ಅನಿಸಿಕೆ. ಇಲ್ಲಿ ಹಯಗ್ರೀವ ಎಂಬ ಪೌರಾಣಿಕ ಪಾತ್ರದ ಸುತ್ತ ಚಿತ್ರ ಸುತ್ತುತ್ತದೆ.  ಬೆಂಗಳೂರಿನಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಯಲಿದೆ.  ರಂಗಾಯಣ ರಘು, ತಾರಾ, ಸಾಧು ಕೋಕಿಲ, ರವಿಶಂಕರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ‍್ಳುತ್ತಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸುತ್ತಿದ್ದಾರೆ.‌ ಕಾರ್ತಿಕ್, ಛಾಯಾಗ್ರಹಣ ಹಾಗೂ ಉಮೇಶ್ ಅವರ ಸಂಕಲನವಿರುವ ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಸಂಭಾಷಣೆಯನ್ನು ಶೈಲೇಶ್ ರಾಜ್ ಹಾಗೂ ಚೇತನ್ ಸಿದ್ ಬರೆದಿದ್ದಾರೆ ಎಂದು ನಿರ್ದೇಶಕ ರಘುಕುಮಾರ್ ಓ ಆರ್ ತಿಳಿಸಿದರು.

Hayagriva 3

ಇದು ನನ್ನ ಐದನೇ ಚಿತ್ರ ಎಂದು ಮಾತು ಆರಂಭಿಸಿದ ನಾಯಕ ಧನ್ವೀರ್, ಒಳ್ಳೆಯ ತಂಡ ಮತ್ತು ಒಳ್ಳೆಯ ಶೀರ್ಷಿಕೆ ಸಿಕ್ಕಿದೆ. ಬಹಳ ದಿನಗಳಿಂದ ಪ್ಲಾನ್‍ ಮಾಡಿ, ಒಂದೊಳ್ಳೆಯ ಕಥೆ ಮಾಡಿ ಈ ಚಿತ್ರ ಮಾಡುತ್ತಿದ್ದೇವೆ. ಅಭಿಮಾನಿಗಳಿಗೆ ಖುಷಿಯಾಗುವಂತಹ ಕಥೆ ಇದೆ. ಈ ಚಿತ್ರದಲ್ಲಿ ನೀಗ್ರೋಗಳ ಜೊತೆಗೆ ಫೈಟ್‍ ಇದೆ. ‘ಬಜಾರ್’ ನಂತರ ಸಿಕ್ಸ್ ಪ್ಯಾಕ್ ‍ಮಾಡಿಕೊಳ್ಳುತ್ತಿದ್ದೇನೆ. ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಕಥೆ ಮತ್ತು ಪಾತ್ರ ವಿಭಿನ್ನವಾಗಿದೆ ಎಂದರು.

ತಮ್ಮ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕಿ ಸಂಜನಾ ಆನಂದ್ ತಿಳಿಸಿದರು. ಛಾಯಾಗ್ರಾಹಕ ಕಾರ್ತಿಕ್, ಸಂಗೀತ ನಿರ್ದೇಶಕ ಜೂಡಾ ಸ್ಯಾಂಡಿ ಹಾಗೂ ಸಾಹಸ ನಿರ್ದೇಶಕ ಅರ್ಜುನ್ ಮಾಸ್ಟರ್ ಸೇರಿದಂತೆ ಅನೇಕ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು. ನಿರ್ದೇಶಕ, ನಿರ್ಮಾಪಕ ಹಾಗೂ ವಿತರಕ ಗುರು ದೇಶಪಾಂಡೆ, ಯೋಗಾನಂದ್ ಮುಂತಾದವರು ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

TAGGED:DhanveerHayagrivaMuhurtamysoreಧನ್ವೀರ್ಮುಹೂರ್ತಮೈಸೂರುಹಯಗ್ರೀವ
Share This Article
Facebook Whatsapp Whatsapp Telegram

Cinema news

mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories
Rashmika Mandanna Vijay Deverakonda Wedding
ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ
Cinema Latest Sandalwood South cinema Top Stories

You Might Also Like

daily horoscope dina bhavishya
Astrology

ದಿನ ಭವಿಷ್ಯ: 04-03-2026

Public TV
By Public TV
36 minutes ago
abu dhabi
Bengaluru City

ಮಗಳ ಹುಟ್ಟುಹಬ್ಬ ಆಚರಣೆಗೆ ದುಬೈ ಪ್ರವಾಸ – ಬೆಂಗಳೂರಿನ ದಂಪತಿ ಅಬುಧಾಬಿಯಲ್ಲಿ ಲಾಕ್

Public TV
By Public TV
6 hours ago
Passenger Plane In Irans Bushehr Airport Destroyed In US Israeli Strikes
Latest

ಇರಾನಿನ ಬುಶೆಹರ್ ವಿಮಾನ ನಿಲ್ದಾಣದ ಮೇಲೆ ಏರ್‌ಸ್ಟ್ರೈಕ್‌ – ನಾಶವಾಯ್ತು ಪ್ರಯಾಣಿಕ ವಿಮಾನ

Public TV
By Public TV
7 hours ago
Chinnaswamy RCB Stampede 1
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಘಟನೆಗೆ ನಾವು ಹೊಣೆಯಲ್ಲ – ಆರ್‌ಸಿಬಿ

Public TV
By Public TV
8 hours ago
modi putin
Latest

Iran War| ಭಾರತಕ್ಕೆ ಕಚ್ಚಾ ತೈಲ ಪೂರೈಸಲು ನಾವು ಸಿದ್ಧ: ರಷ್ಯಾ

Public TV
By Public TV
8 hours ago
KN Rajanna
Districts

ಅಟ್ರಾಸಿಟಿ ಕಾನೂನಿನ ದುರುಪಯೋಗ ಬೇಡ, ತೊಂದರೆ ಕೊಡಲು ಬಳಸಬೇಡಿ : ಕೆಎನ್‌ ರಾಜಣ್ಣ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?