Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಯುಪಿಎ Vs ಎನ್‌ಡಿಎ – ಯಾರ ಅವಧಿಯಲ್ಲಿ ಎಷ್ಟು ಹಣ ಕರ್ನಾಟಕಕ್ಕೆ ಬಂದಿದೆ? – ಬಿಜೆಪಿಯಿಂದ ದಾಖಲೆ ರಿಲೀಸ್‌

Public TV
Last updated: February 5, 2024 3:33 pm
Public TV
Share
4 Min Read
manmohan singh and modi
SHARE

ಬೆಂಗಳೂರು: ತೆರಿಗೆ ರೂಪದಲ್ಲಿ ಕರ್ನಾಟಕದಿಂದ (Karnataka) ಹಣ ಸಂಗ್ರಹವಾದರೂ ಮೋದಿ ಸರ್ಕಾರ (Narendra Modi Government) ರಾಜ್ಯಕ್ಕೆ ಹಣ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡಸಿದ ಬೆನ್ನಲ್ಲೇ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.

ಯುಪಿಎ (UPA) ಮತ್ತು ಎನ್‌ಡಿಎ (NDA) ಸರ್ಕಾರದ ಅವಧಿಯಲ್ಲಿ ಕರ್ನಾಟಕ್ಕೆ ಎಷ್ಟು ಹಣ ಬಂದಿದೆ? ಎಷ್ಟು ರಸ್ತೆ ಅಭಿವೃದ್ಧಿಯಾಗಿದೆ? ರೈಲ್ವೆ ಯೋಜನೆಗಳಿಗೆ ಎಷ್ಟು ಹಣ ನೀಡಿದೆ ಎಂಬುದರ ಬಗ್ಗೆ ಸಂಖ್ಯಾ ಮಾಹಿತಿಗಳಿರುವ ಪೋಸ್ಟ್‌ ಬಿಡುಗಡೆ ಮಾಡಿ ಕಿಡಿಕಾರಿದೆ.

ತಮ್ಮ ಆಡಳಿತದ ದಯನೀಯ ವೈಫಲ್ಯವನ್ನು ಮರೆಮಾಚಿಕೊಳ್ಳಲು ಸಿಎಂ @siddaramaiah ಅವರು ಸದಾ ಆರೋಪಿಸುವುದು ಕೇಂದ್ರ ಸರ್ಕಾರವನ್ನು. ಕರ್ನಾಟಕದ ಇತಿಹಾಸದಲ್ಲಿಯೇ ಹಿಂದೆಂದೂ ಕಂಡು ಕೇಳರಿಯದಂತಹ ಆಡಳಿತ ವಿರೋಧಿ ಅಲೆ ಸದ್ಯ ಕಾಂಗ್ರೆಸ್ ಸರ್ಕಾರಕ್ಕಿದೆ. ಆಡಳಿತ ವಿರೋಧಿ ಅಲೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಮತ್ತು ಸಿಎಂ… https://t.co/FTCD5NK1EY

— BJP Karnataka (@BJP4Karnataka) February 5, 2024

ಬಿಜೆಪಿ ಪೋಸ್ಟ್‌ನಲ್ಲಿ ಏನಿದೆ?
ತಮ್ಮ ಆಡಳಿತದ ದಯನೀಯ ವೈಫಲ್ಯವನ್ನು ಮರೆಮಾಚಿಕೊಳ್ಳಲು ಸಿಎಂ ಸಿದ್ದರಾಮಯ್ಯ (Siddaramaiah) ಅವರು ಸದಾ ಆರೋಪಿಸುವುದು ಕೇಂದ್ರ ಸರ್ಕಾರವನ್ನು. ಕರ್ನಾಟಕದ ಇತಿಹಾಸದಲ್ಲಿಯೇ ಹಿಂದೆಂದೂ ಕಂಡು ಕೇಳರಿಯದಂತಹ ಆಡಳಿತ ವಿರೋಧಿ ಅಲೆ ಸದ್ಯ ಕಾಂಗ್ರೆಸ್ ಸರ್ಕಾರಕ್ಕಿದೆ. ಆಡಳಿತ ವಿರೋಧಿ ಅಲೆಯಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನೂ ಓದಿ: ಆನ್‌ಲೈನ್‌ಲೂ ಸಿಗಲಿದೆ ಭಾರತ್ ಬ್ರ್ಯಾಂಡ್ ಅಕ್ಕಿ – ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಿಗುತ್ತೆ?

ಜೀವನ ಪೂರ್ತಿ ಪರರನ್ನು ಬೊಟ್ಟು ಮಾಡಿ ಜಾರಿಕೊಳ್ಳಲು ಯತ್ನಿಸುತ್ತಿರುವ ಸಿದ್ದರಾಮಯ್ಯ ನವರೇ, ಈ ಕೆಳಗಿನ ಮಾಹಿತಿ ನಿಮ್ಮ ಸರ್ಕಾರದ ಬಳಿ ಇಲ್ಲದಿರುವುದು ನಿಮ್ಮ ಆಡಳಿತದ ಅಸಾಮರ್ಥ್ಯ ತೋರಿಸುತ್ತದಷ್ಟೆ. ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ನೀಡಿದ್ದಕ್ಕಿಂತ ಮೂರುಪಟ್ಟು ಅಧಿಕ ತೆರಿಗೆಪಾಲು ಮತ್ತು ಅನುದಾನಗಳನ್ನು ನೀಡಿದ್ದು ನರೇಂದ್ರ ಮೋದಿ ಸರ್ಕಾರ.

Bengaluru Mysuru Expressway 1

2004-2014ರ ವರೆಗೆ ಯುಪಿಎ ಅಧಿಕಾರದಲ್ಲಿದ್ದಾಗ ಕಲ್ಲಿದ್ದಲು ಹಗರಣ, 2ಜಿ ಹಗರಣ, ಕಾಮನ್‌ವೆಲ್ತ್‌ ಹಗರಣಗಳಂಥ ಭಾನಗಡಿಗಳ ನಡುವೆ ಕರ್ನಾಟಕಕ್ಕೆ ನೀಡಲು ಅಂದಿನ ಕೇಂದ್ರ ಸರ್ಕಾರದ ಬಳಿ ಇದ್ದದ್ದೇ 81,795 ಕೋಟಿ ರೂ. ಇದಕ್ಕೆ ಹೋಲಿಸಿದರೆ ಮೋದಿ ಸರ್ಕಾರ ನೀಡಿರುವ 2,82,791 ಕೋಟಿ ರೂ. ಶೇ.245 ರಷ್ಟು ಹೆಚ್ಚು ಎಂಬುದನ್ನು ಕಾಂಗ್ರೆಸ್‌ ಯಾವತ್ತೂ ಮರೆಮಾಚಲು ಸಾಧ್ಯವಿಲ್ಲ. ಕರ್ನಾಟಕದ ಅಭಿವೃದ್ಧಿಗೆ ಈಗ ಹಿಂದೆಂದಿಗಿಂತಲೂ ಹೆಚ್ಚು ಸಿಕ್ಕಿದೆ ಎಂಬುದನ್ನು ತಿರುಚಲು ನೀವು ಎಷ್ಟೇ ಪ್ರಯತ್ನಿಸಿದರೂ ಅಸಾಧ್ಯ.

ಇದಲ್ಲದೆ ನಿರ್ದಿಷ್ಟ ಯೋಜನೆಗಳಿಗಾಗಿ ನೀಡಲಾದ ಅಭಿವೃದ್ಧಿ ಹಣ ಅದೆಷ್ಟು ಪಾಲು ಅಧಿಕ ಎಂಬುದನ್ನು ಲೆಕ್ಕ ಹಾಕಲು ಸ್ವಯಂಘೋಷಿತ ಆರ್ಥಿಕ ತಜ್ಞರಾದ ತಮಗೆ ಅಸಾಧ್ಯವಲ್ಲ. ಯುಪಿಎ ಅವಧಿಯಲ್ಲಿ ರಾಜ್ಯಕ್ಕೆ ಬಂದ 60,779 ಕೋಟಿ ರೂ.ಗಿಂತಲೂ ಮೋದಿ ಸರ್ಕಾರ ನೀಡಿದ 2,08,882 ಕೋಟಿ ರೂ. ಹೆಚ್ಚು ಎಂಬುದನ್ನು ಅರಿಯಲು ಅರ್ಥಶಾಸ್ತ್ರ ಗೊತ್ತಿರಲೇಬೇಕೆಂದು ಇಲ್ಲ, ಲೆಕ್ಕ ಗೊತ್ತಿದ್ದರೂ ಸಾಕು.

ನಮ್ಮ ರಾಜ್ಯದಲ್ಲಿ ನಿಮ್ಮ ಪಕ್ಷದವರು 1947 ರಿಂದ 2014ರ ವರೆಗೆ ನಿರ್ಮಾಣ ಮಾಡಿದ ರಸ್ತೆ ಕೇವಲ 6,750 ಕಿಲೋಮೀಟರ್. ಮೋದಿ ಸರ್ಕಾರ 2014ರ ನಂತರ ಕರ್ನಾಟಕದಲ್ಲಿ ಮಾಡಿದ ರಸ್ತೆ ನಿರ್ಮಾಣ ಒಟ್ಟು 13,500 ಕಿಲೋಮೀಟರ್. ಸಿದ್ದರಾಮಯ್ಯನವರೇ, ಮೊದಲು ನಾಲ್ಕು ಗಂಟೆಗೂ ಹೆಚ್ಚು ಸಮಯ ತಗಲುತ್ತಿದ್ದ ನಿಮ್ಮ ತವರೂರಿಗೆ ಕೇವಲ ಒಂದೂವರೆ ಗಂಟೆಯಲ್ಲೇ ನೀವಿಂದು ಹೋಗುತ್ತಿರುವ ಆ ರಸ್ತೆಯನ್ನು ಮಾಡಿಸಿದ್ದೂ ಸಹ ಮೋದಿ ಸರ್ಕಾರವೇ. ಇದನ್ನೂ ಓದಿ: ತೆರಿಗೆಯಿಂದ 100 ರೂ. ಸಂಗ್ರಹವಾದರೆ ರಾಜ್ಯಕ್ಕೆ ಸಿಗುವುದು ಕೇವಲ 13 ರೂ.- ಕೇಂದ್ರದಿಂದ ಪದೇ ಪದೇ ಅನ್ಯಾಯ: ಸಿದ್ದರಾಮಯ್ಯ ಕಿಡಿ

indian railways southern railway 2

2009 ರಿಂದ 2014ರ ವರೆಗೆ ರಾಜ್ಯದ ರೈಲ್ವೆ ಯೋಜನೆಗಳಿಗೆ ನಿಮ್ಮ ಸರ್ಕಾರ ನೀಡಿದ್ದ 835 ಕೋಟಿ ರೂ.ಗಿಂತ ಮೋದಿ ಸರ್ಕಾರ ನೀಡಿರುವ 11,000 ಕೋಟಿ ರೂ. ಎಷ್ಟು ಪಟ್ಟು ಹೆಚ್ಚು ಎಂಬುದನ್ನು ನೀವೇ ಸ್ವಲ್ಪ ಲೆಕ್ಕ ಹಾಕಿ ಹೇಳಿಬಿಡಿ.

ಬ್ರಿಟೀಷರು ಭಾರತವನ್ನು ಬಿಟ್ಟು ಹೋದಲ್ಲಿಂದ ಹಿಡಿದು 2014 ರಲ್ಲಿ ಕಾಂಗ್ರೆಸ್‌ ಅಧಿಕಾರ ಬಿಟ್ಟು ತೊಲಗುವವರೆಗೆ 67 ವರ್ಷಗಳಲ್ಲಿ ಕರ್ನಾಟಕದಲ್ಲಿ ಆದ ರೈಲ್ವೇ ವಿದ್ಯುದೀಕರಣ ಕೇವಲ 16 ಕಿಲೋಮೀಟರ್. ಆದರೆ ಕಾಂಗ್ರೆಸ್ಸನ್ನು ಉಚ್ಛಾಟಿಸಿ ಬಂದ ಮೋದಿ ಸರ್ಕಾರ ಮಾಡಿದ ರೈಲ್ವೆ ವಿದ್ಯುದೀಕರಣ ಬರೋಬ್ಬರಿ 3265 ಕಿಮೀ.

ರೈಲ್ವೆ ಇಲಾಖೆ ಸಾಧನೆಯೇ ಕಾಂಗ್ರೆಸ್‌ ಅವಧಿಯಲ್ಲಿ ಇಷ್ಟು ಅತ್ಯಲ್ಪವಾಗಿರುವಾಗ ನಿಮ್ಮ ಪಕ್ಷದವರು ಅಧಿಕಾರ ನಡೆಸುವಾಗ ಮೆಟ್ರೋಗೋಸ್ಕರ ಯಶಸ್ವಿಯಾಗಿ ಅಳವಡಿಸಿದ ಹಳಿಯ ಉದ್ದ ಕೇವಲ 7 ಕಿಮೀ. 2014 ರಿಂದ 2023 ನಡುವೆ ಬರೋಬ್ಬರಿ 73 ಕಿಲೋಮೀಟರ್ ಮೆಟ್ರೋ ಹಳಿ ಅಳವಡಿಸಲಾಗಿದೆ. ಅಂದರೆ ಇದು ನಿಮ್ಮ ಪಕ್ಷದವರು ನಿರ್ಮಿಸಿದ್ದಕ್ಕಿಂತ 10 ಪಟ್ಟಿಗೂ ಹೆಚ್ಚು ಅಧಿಕ.

NAMMA METRO 5

ಕಾಂಗ್ರೆಸ್‌ನ 67 ವರ್ಷಗಳ ಆಡಳಿತದಲ್ಲಿ ಕರ್ನಾಟಕದಲ್ಲಿ ನಿರ್ಮಾಣವಾದ ವಿಮಾನ ನಿಲ್ದಾಣಗಳು ಕೇವಲ 7. ಆದರೆ 2014ರಲ್ಲಿ ದೇಶದ ಜನ ಕಾಂಗ್ರೆಸ್‌ ಪಕ್ಷವನ್ನು ಕಿತ್ತೊಗೆದ ನಂತರ ಕರ್ನಾಟಕವೊಂದರಲ್ಲೇ 14 ವಿಮಾನ ನಿಲ್ದಾಣಗಳನ್ನು ನಿರ್ಮಿಸಿರುವುದು ಮೋದಿ ಸರ್ಕಾರ.

ಕಳೆದ 5 ವರ್ಷಗಳಲ್ಲಿ ಮೋದಿ ಸರ್ಕಾರ ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳಿಗೆ ನೀಡಿರುವುದು 30,000 ಕೋಟಿ ರೂ. ಕರ್ನಾಟಕದ ರೈತರ ಜೇಬಿಗೆ ಬಂದ ಕಿಸಾನ್‌ ಸಮ್ಮಾನದ ಮೌಲ್ಯ 10,990 ಕೋಟಿ ರೂ.

ಕಾಂಗ್ರೆಸ್‌ ಸರ್ಕಾರಗಳಿಗೆ 67 ವರ್ಷಗಳಲ್ಲಿ ಯೋಚಿಸಲೂ ಸಾಧ್ಯವಾಗದಿದ್ದ ಆಯುಷ್ಮಾನ್‌ ಭಾರತ ಯೋಜನೆಯ ಲಾಭವನ್ನು ಪಡೆದ ಕನ್ನಡಿಗರು 62,00,000 ಕ್ಕೂ ಅಧಿಕ.

ಕರ್ನಾಟಕಕ್ಕೆ ಮೊದಲ ಐಐಟಿ ನೀಡಿದ್ದು ಸಹ ಮೋದಿ ಸರ್ಕಾರ ಎಂಬುದು ನಿಮಗೆ ತಿಳಿದಿತ್ತೇ ಮುಖ್ಯಮಂತ್ರಿ ಸಾಹೇಬರೇ?

Farmers

ಕೊರೊನಾದ ಪ್ರಕ್ಷುಬ್ಧ ಪರಿಸ್ಥಿತಿಯಲ್ಲಿ ಮೋದಿ ಸರ್ಕಾರ ಕರ್ನಾಟಕಕ್ಕೆ ಉಚಿತವಾಗಿ ನೀಡಿದ ಲಸಿಕೆಯೇ 10 ಕೋಟಿಗೂ ಹೆಚ್ಚು. ಆ ಪ್ರಮಾಣದಲ್ಲಿ ನಿಮ್ಮ ಪಕ್ಷದ ಸರ್ಕಾರಗಳು ಪೋಲಿಯೋ ಲಸಿಕೆಗಳನ್ನೂ ನೀಡಿಲ್ಲ ಎಂಬ ಅಂಶ ನಿಮ್ಮ ತಲೆಯಲ್ಲಿರಲಿ.

ಮೇಲೆ ಹೇಳಿದ ಇವಿಷ್ಟೂ ಅಲ್ಲದೆ ಪಿಎಂ ಗತಿ ಶಕ್ತಿ ಯೋಜನೆ, ಸಾಗರಮಾಲಾ ಯೋಜನೆ, ಬಡವರಿಗೆ ಸ್ವಂತ ಮನೆ ಖಾತರಿಪಡಿಸುವ ಪಿಎಂ ಆವಾಸ್ ಯೋಜನೆಯಡಿ ರಾಜ್ಯಕ್ಕೆ 1 ಲಕ್ಷ ಕೋಟಿ ರೂಪಾಯಿಗೂ ಅಧಿಕ ನೆರವು 2014ರ ನಂತರ ಹರಿದುಬಂದಿದೆ.

ಅಷ್ಟಕ್ಕೂ ಕೇಂದ್ರ ಸರ್ಕಾರ ಅನುದಾನ ನೀಡುತ್ತಿಲ್ಲ ಎಂದು ಪಟಾಲಂ ಕಟ್ಟಿಕೊಂಡು ಬೊಬ್ಬೆ ಹೊಡೆಯುತ್ತಿರುವ ಸಿದ್ದರಾಮಯ್ಯನವರೇ, ಜಲ ಜೀವನ್‌ ಮಿಷನ್‌, ಅಮೃತ್‌ ಯೋಜನೆ, ಸ್ಮಾರ್ಟ್‌ ಸಿಟಿ, ಪಿಎಂ ಆವಾಸ್‌ ಯೋಜನೆ ಸೇರಿದಂತೆ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಇದುವರೆಗೆ ನೀಡಿದ ಅನುದಾನವನ್ನು ಎಷ್ಟರ ಮಟ್ಟಿಗೆ ಬಳಸಿಕೊಂಡಿದ್ದೀರಾ ಎಂಬ ಶ್ವೇತಪತ್ರವನ್ನು ಹೊರಡಿಸುವ ತಾಕತ್ತು, ದಮ್ಮು ನಿಮ್ಮಲ್ಲಿದೆಯೇ?

ಕನ್ನಡಿಗರ ಶ್ರಮದ ತೆರಿಗೆ ಹಣವನ್ನು ವಾಮಮಾರ್ಗದಲ್ಲಿ ಸಂಗ್ರಹಿಸಿ, ತೆಲಂಗಾಣ, ಛತ್ತಿಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನದ ಚುನಾವಣೆಗೆ ನೀಡಿದ ನಿಮಗೆ ಈ ವಿಚಾರದ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ.

TAGGED:electionkarnatakapoliticssiddaramaiahಕರ್ನಾಟಕಚುನಾವಣೆರಾಜಕೀಯಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema News

the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood
CHOWKIDAR
ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್
Cinema Latest Sandalwood Top Stories
Siri Ravikumar
`ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್
Cinema Latest

You Might Also Like

Rahul Gandhi
Bengaluru City

ಮತಗಳ್ಳತನ ಆರೋಪ: ದಾಖಲೆ ಕೊಡುವಂತೆ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

Public TV
By Public TV
16 minutes ago
Dasara Gajapade
Districts

ಅರಣ್ಯ ಭವನದಲ್ಲಿ ದಸರಾ ಗಜಪಡೆಗೆ ಪೂಜೆ – ಅರಮನೆಗೆ ಎಂಟ್ರಿ ಕೊಟ್ಟ ಅಭಿಮನ್ಯು ಟೀಂ

Public TV
By Public TV
20 minutes ago
Vidhya Mandira 5 1
Bengaluru City

ಪಬ್ಲಿಕ್ ಟಿವಿ `ವಿದ್ಯಾಮಂದಿರ’ಕ್ಕೆ ಭರ್ಜರಿ ರೆಸ್ಪಾನ್ಸ್ – 4ನೇ ಆವೃತ್ತಿಯ ಶೈಕ್ಷಣಿಕ ಮೇಳಕ್ಕೆ ಅದ್ಧೂರಿ ತೆರೆ

Public TV
By Public TV
31 minutes ago
mumbai traffic jam 1
Latest

ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್‌ ಜಾಮ್‌ – ಆಸ್ಪತ್ರೆಗೆ ಸಾಗಿಸಲಾಗದೇ ಅಂಬುಲೆನ್ಸ್‌ನಲ್ಲೇ ಮಹಿಳೆ ಸಾವು

Public TV
By Public TV
34 minutes ago
Rohit Sharma Virat Kohli
Cricket

ಈ ವರ್ಷವೇ ಏಕದಿನ ಕ್ರಿಕೆಟ್‌ಗೆ ಗುಡ್‌ಬೈ ಹೇಳ್ತಾರಾ ರೋ-ಕೊ?

Public TV
By Public TV
55 minutes ago
Janardhana Poojary
Dakshina Kannada

ಮಸೀದಿ, ಚರ್ಚ್‌ನಲ್ಲಿ ಶವ ಹೂತಿಡಲಿಲ್ವಾ.. ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ: ಜನಾರ್ದನ ಪೂಜಾರಿ ಪ್ರಶ್ನೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?