‘ಅನಿಮಲ್’ ನಿರ್ದೇಶಕನ ಸಿನಿಮಾ ಆಫರ್‌ಗೆ ನೋ ಎಂದ ಕಂಗನಾ

Public TV
2 Min Read
kangana

ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ನಿರ್ದೇಶನದ ‘ಅರ್ಜುನ್ ರೆಡ್ಡಿ’, ಇತ್ತೀಚಿನ ‘ಅನಿಮಲ್’ (Animal) ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡಿದೆ. 900 ಕೋಟಿ ರೂ.ಗಿಂತ ಅಧಿಕ ಕಲೆಕ್ಷನ್ ಮಾಡಿ ಸೆನ್ಸೇಷನ್ ಕ್ರಿಯೆಟ್ ಮಾಡಿದೆ. ಸಂದೀಪ್ ನಿರ್ದೇಶನದ ವೈಖರಿ ನೋಡಿ ನಮ್ಮಗೂ ಅವರ ಸಿನಿಮಾದಲ್ಲಿ ನಟಿಸಲು ಚಾನ್ಸ್ ಸಿಗಲಿ ಎಂದು ಕೆಲವು ನಟ-ನಟಿಯರು ಕಾಯ್ತಿದ್ದಾರೆ. ಇದರ ನಡುವೆ ಸಂದೀಪ್ ಕಡೆಯಿಂದ ಸಿಕ್ಕ ಆಫರ್‌ನ್ನು ಕಂಗನಾ ರಣಾವತ್ (Kangana Ranaut) ರಿಜೆಕ್ಟ್ ಮಾಡಿದ್ದಾರೆ.

sandeep reddy vanga

ಇತ್ತೀಚೆಗೆ ‘ಅನಿಮಲ್’ ಚಿತ್ರವನ್ನು ನೋಡಿದ ಬಳಿಕ ಕಂಗನಾ ಅವರು ತಮ್ಮ ಅನಿಸಿಕೆ ತಿಳಿಸಿದ್ದರು. ಈ ಸಿನಿಮಾ ಸ್ತ್ರಿ ವಿರೋಧಿಯಾಗಿದೆ ಎಂದು ಅವರು ಹೇಳಿದ್ದರು. ಕಂಗನಾ ಹೇಳಿಕೆಯನ್ನು ಸಂದೀಪ್ ಅವರು ಪಾಸಿಟಿವ್ ಆಗಿ ತೆಗೆದುಕೊಂಡಿದ್ದಾರೆ. ಕಂಗನಾ ಅವರ ಪ್ರತಿಭೆಯ ಬಗ್ಗೆ ಸಂದೀಪ್‌ಗೆ ಅಭಿಮಾನ ಇದೆ. ಇದನ್ನೂ ಓದಿ:‘ರಿಚರ್ಡ್ ಆಂಟನಿ’ ಕುರಿತು ಅಪ್ ಡೇಟ್ ನೀಡಿದ ರಕ್ಷಿತ್ ಶೆಟ್ಟಿ

Kangana Ranaut

ಅವಕಾಶ ಸಿಕ್ಕರೆ, ಪಾತ್ರಕ್ಕೆ ಕಂಗನಾ ಸೂಕ್ತ ಎನಿಸಿದರೆ ಅವರ ಬಳಿ ಹೋಗಿ ಕಥೆ ಹೇಳುತ್ತೇನೆ. ‘ಕ್ವೀನ್’ ಮತ್ತು ಇತರೆ ಸಿನಿಮಾಗಳಲ್ಲಿ ಅವರ ನಟನೆಯನ್ನು ನಾನು ಇಷ್ಟಪಟ್ಟಿದ್ದೇನೆ. ನನ್ನ ಚಿತ್ರದ ಬಗ್ಗೆ ಅವರು ನೆಗೆಟಿವ್ ಕಾಮೆಂಟ್ ಮಾಡಿದ್ದರೂ ನನಗೆ ಕೋಪ ಬರುವುದಿಲ್ಲ. ಒಟ್ಟಿನಲ್ಲಿ ಅವರ ಪರ್ಫಾರ್ಮೆನ್ಸ್ ನನಗೆ ನಿಜಕ್ಕೂ ಇಷ್ಟವಾಗಿದೆ ಎಂದು ಸಂದೀಪ್ ರೆಡ್ಡಿ ವಂಗಾ ಹೇಳಿದ್ದಾರೆ.

ಅನಿಸಿಕೆ ಮತ್ತು ಟೀಕೆ ಎರಡು ಬೇರೆ ಬೇರೆ ಆಗಿರುತ್ತವೆ. ಎಲ್ಲ ಬಗೆಯ ಕಲೆ ಕೂಡ ವಿಮರ್ಶೆಗೆ ಮತ್ತು ಚರ್ಚೆಗೆ ಒಳಪಡಬೇಕು. ಅದು ಸಹಜವಾದ ವಿಷಯ. ಸಂದೀಪ್ ಅವರು ನನ್ನ ವಿಮರ್ಶೆಗೆ ಗೌರವ ನೀಡಿದ್ದು ನೋಡಿದರೆ ತಿಳಿಯುತ್ತದೆ. ಅವರು ಕೇವಲ ಗಂಡಸುತನದ ಸಿನಿಮಾ ಮಾಡುವುದಷ್ಟೇ ಅಲ್ಲ, ಅವರ ಆ್ಯಟಿಟ್ಯೂಡ್ ಕೂಡ ಹಾಗೆಯೇ ಇದೆ. ಧನ್ಯವಾದಗಳು ಸರ್. ಆದರೆ ನೀವು ನನಗೆ ಯಾವುದೇ ಪಾತ್ರ ನೀಡಬೇಡಿ. ನೀಡಿದರೆ ನಿಮ್ಮ ಆಲ್ಫಾ ಮೇಲ್ ಪಾತ್ರಗಳು ಸ್ತ್ರಿವಾದಿ ಆಗಿಬಿಡುತ್ತವೆ. ಆಗ ನಿಮ್ಮ ಸಿನಿಮಾಗಳು ಸೋಲುತ್ತವೆ. ನೀವು ಉತ್ತಮ ಸಿನಿಮಾ ಮಾಡುವವರು. ಇಂಡಸ್ಟ್ರಿಗೆ ನಿಮ್ಮ ಅಗತ್ಯ ಇದೆ ಎಂದು ಕಂಗನಾ ರಣಾವತ್ ಹೇಳಿದ್ದಾರೆ.

ಸಂದೀಪ್ ರೆಡ್ಡಿ ವಂಗಾ ‘ಅನಿಮಲ್’ ಪಾರ್ಟ್ 2 ಸಿನಿಮಾ ಮಾಡುವ ತಯಾರಿಯಲ್ಲಿದ್ದಾರೆ. ಅನಿಮಲ್ ಚಿತ್ರದಂತೆ ಪಾರ್ಟ್ 2 ಕೂಡ ಗೆಲ್ಲಲೇಬೇಕು ಎಂದು ಪಣ ತೊಟ್ಟಿದ್ದಾರೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಶುರುವಾಗಲಿದೆ.

Share This Article