ಕಟೀಲ್ ಮನೆಗೆ ಮುತ್ತಿಗೆ ಹಾಕಲು ಯತ್ನ- NSUI ಕಾರ್ಯಕರ್ತರ ಬಂಧನ

Public TV
1 Min Read
MANGALURU NSUI

ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಎನ್‍ಎಸ್‍ಯುಐ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆಯಲ್ಲಿ ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಕಾರ್ಯಕರ್ತರು ನಳಿನ್ ಕುಮಾರ್ ಕಟೀಲ್ (Nalin Kumar Kateel) ಮನೆಗೆ ನುಗ್ಗಲು ಯತ್ನಿಸಿದ್ದಾರೆ. ಕೇಂದ್ರ ಸರ್ಕಾರ ಹಾಗೂ ನಳಿನ್ ಕುಮಾರ್ ಕಟೀಲ್ ವಿರುದ್ಧ ಘೋಷಣೆ ಕೂಗಿದ ಎನ್‍ಎಸ್‍ಯುಐ ಕಾರ್ಯಕರ್ತರು ಕಟೀಲ್ ಮನೆ ಮುಂದೆ ಭಾರೀ ಹೈಡ್ರಾಮಾ ಮಾಡಿದರು.

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೂ ಕಟೀಲ್ ಮನೆಗೆ ನುಗ್ಗಲು ಕಾರ್ಯಕರ್ತರು ಯತ್ನಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಎನ್‍ಎಸ್‍ಯುಐ ಕಾರ್ಯಕರ್ತರನ್ನು ತಡೆದು ಬಂಧಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸರ್ಕಾರ ಇಲ್ಲದ ರಾಜ್ಯಕ್ಕೆ ಅನುದಾನ ಇಲ್ಲ: ಸರ್ಕಾರದ ವಿರುದ್ಧ ಖರ್ಗೆಯಿಂದ ಕಪ್ಪು ಪತ್ರ ಬಿಡುಗಡೆ

ಮಂಗಳೂರಿನ ಉರ್ವದಲ್ಲಿರುವ ಅಶೋಕಾ ಅಪಾರ್ಟ್‌ ಮೆಂಟ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Share This Article