ರಾಹುಲ್ ಗಾಂಧಿ ಬಾಯಿ ಬಿಟ್ಟರೆ ಬರೀ ಸುಳ್ಳು – ಸಚಿವ ಪ್ರಹ್ಲಾದ್‌ ಜೋಶಿ ಕಿಡಿ

Public TV
2 Min Read
Modi 1

­- 1999ರಲ್ಲೇ ಮೋದಿ ಜೀಗೆ OBC ಸ್ಥಾನಮಾನ ನೀಡಲಾಗಿದೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ನಾಚಿಕೆಯೇ ಆಗುವುದಿಲ್ಲವೇ? ಬರೀ ಸುಳ್ಳು ಸುಳ್ಳು ಸುದ್ದಿಗಳನ್ನು ಹರಿ ಬಿಡುತ್ತಿದ್ದಾರೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು OBC ಜಾತಿಯಲ್ಲಿ ಹುಟ್ಟಿಲ್ಲ ಮತ್ತು ಅವರು ಗುಜರಾತ್‌ ಸಿಎಂ ಆದ ಮೇಲೆ OBC ಜಾತಿಯನ್ನು ಸೂಚಿಸಿದ್ದಾರೆ ಎಂದಿರುವ ರಾಹುಲ್ ಗಾಂಧಿ ಆರೋಪಕ್ಕೆ ಸಚಿವ ಜೋಶಿ ಅವರು ತಿರುಗೇಟು ನೀಡಿದ್ದು, ತಮ್ಮ X ಖಾತೆಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಸಚಿವೆ ನಿರ್ಮಲಾ ಸೀತಾರಾಮನ್ ಕಚೇರಿಗೆ ಮಸಿ ಬಳಿದ ಕಾಂಗ್ರೆಸ್ ಕಾರ್ಯಕರ್ತರು

ಕಾಂಗ್ರೆಸ್‌ನ (Congress) ಸುಳ್ಳಿನ ಬುತ್ತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವ ಸಮಯ ಬಂದಿದೆ. ವಾಸ್ತವ ಬೇರೆಯೇ ಇರುವಾಗ ಕಾಂಗ್ರೆಸ್ ಬರೀ ಸುಳ್ಳುಗಳನ್ನೇ ಹೆಣೆದು ಜನರ ಕಿವಿಗೆ ಹೂವಿನ ಗೊಂಚಲೇ ಇಡುತ್ತಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮಂಗಳ ಗ್ರಹಕ್ಕೆ ಸೋಲಾರ್‌ ಚಾಲಿತ ವಿಮಾನ ಕಳಿಸಲು ನಾಸಾ ಚಿಂತನೆ – ಏನಿದರ ವಿಶೇಷ?

ಇಲ್ಲಿದೆ ಸತ್ಯ:
ಮೋದಿಯವರು ಗುಜರಾತ್ (Gujarat) ಮುಖ್ಯಮಂತ್ರಿಯಾಗುವ ಎರಡು ವರ್ಷಗಳ ಮೊದಲು 1999ರ ಅಕ್ಟೋಬರ್ 27ರಂದು ಅವರ OBC ಸ್ಥಾನಮಾನವನ್ನು ಗುರುತಿಸಲಾಗಿದೆ ಎಂದು ಜೋಶಿ ದಾಖಲೆ ಸಮೇತ ಸ್ಪಷ್ಟಪಡಿಸಿದ್ದಾರೆ.

rahul gandhi

ಪ್ರಧಾನಿ ಮೋದಿ ಅವರನ್ನು OBC ಅಲ್ಲ ಎನ್ನುವ ಮೂಲಕ ಕಾಂಗ್ರೆಸ್ ಮತ್ತೊಮ್ಮೆ ಇಡೀ OBC ಸಮುದಾಯವನ್ನೇ ಅವಮಾನಿಸಿದೆ. ಒಬಿಸಿ ವರ್ಗದವರೆಲ್ಲ ಲೋಕಸಭೆ ಚುನಾವಣೆಯಲ್ಲಿ ಪ್ರತಿಧ್ವನಿಸುವ ಮೂಲಕ ರಾಹುಲ್ ಗಾಂಧಿ ಆರೋಪಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೋಶಿ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಸಮಯ ಸಿಕ್ಕಾಗ ವಿದ್ಯಾರ್ಥಿ ಮನೆಗೇ ಹೋಗಿ ಸೆಕ್ಸ್‌ ಮಾಡ್ತಿದ್ದೆ – ತಪ್ಪೊಪ್ಪಿಕೊಂಡ ಶಿಕ್ಷಕಿಗೆ 50 ವರ್ಷ ಜೈಲು

ರಾಹುಲ್‌ ಗಾಂಧಿ ಹೇಳಿದ್ದೇನು?
ಒಡಿಶಾದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯ ವೇಳೆ ಮಾತನಾಡಿದ ರಾಹುಲ್‌ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಮೂಲತಃ ಹಿಂದುಳಿದ ವರ್ಗದಲ್ಲಿ ಜನಿಸಿಲ್ಲ, ಆದ್ರೆ ತಮ್ಮನ್ನು ಒಬಿಸಿ ಎಂದು ಹೇಳಿಕೊಳ್ಳುವ ಮೂಲಕ ಇತರೇ ವರ್ಗದ ಜನರನ್ನ ದಾರಿ ತಪ್ಪಿಸುತ್ತಿದ್ದಾರೆ. ಮೋದಿ ಜೀ ಅವರು `ತೇಲಿ’ ಜಾತಿಯ ಕುಟುಂಬದಲ್ಲಿ ಜನಿಸಿದ್ದಾರೆ. 2000ನೇ ಇಸವಿಯಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ತಮ್ಮನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದರು. ಆದ್ದರಿಂದ ಮೋದಿ ಜಿ ಹುಟ್ಟಿನಿಂದ ಒಬಿಸಿ ಅಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪ್ರತಿಪಾದಿಸಿದ್ದರು.

Share This Article