Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪ್ರಧಾನಿಯನ್ನು ಭೇಟಿಯಾದ ಸುಮಲತಾ – ಮಂಡ್ಯ ದೋಸ್ತಿ ರಾಜಕೀಯದಲ್ಲಿ ಢವಢವ!

Public TV
Last updated: February 9, 2024 3:20 pm
Public TV
Share
3 Min Read
sumalatha narendra modi
SHARE

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆ (Mandya LokSabha Election) ರಂಗೇರಿದ್ದು ಹಾಲಿ ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ಅವರು ಗುರುವಾರ ಪ್ರಧಾನಿ  ನರೇಂದ್ರ ಮೋದಿ (Narendra Modi) ಅವರನ್ನು ಭೇಟಿಯಾಗಿದ್ದಾರೆ.

ಈ ಭೇಟಿಯ ಸಮಯದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್‌ (BJP-JDS) ಮಧ್ಯೆ ಯಾರಿಗೆ ಟಿಕೆಟ್‌ ಸಿಗಲಿದೆ ಎನ್ನುವುದು ಇನ್ನೂ ಫೈನಲ್‌ ಆಗಿಲ್ಲ. ಈ ಹಿಂದೆ ಸುಮಲತಾ ಅಂಬರೀಶ್‌ ಅವರು ನಾನು ಈ ಬಾರಿ ಕಣಕ್ಕೆ ಇಳಿಯುತ್ತೇನೆ ಎಂದು ಹೇಳಿದ್ದರು. ಮೋದಿ ಭೇಟಿಗೂ ಮೊದಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಅವರನ್ನು ಭೇಟಿಯಾಗಿದ್ದರು.  ಇದನ್ನೂ ಓದಿ: NDA ಒಕ್ಕೂಟ ಸೇರಲಿರುವ ಆರ್‌ಎಲ್‌ಡಿ- INDIA ಒಕ್ಕೂಟಕ್ಕೆ ಮತ್ತೊಂದು ಶಾಕ್

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ @PMOIndia ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರಿಗೆ ನನ್ನ ಧನ್ಯವಾದಗಳು. @narendramodi ಶ್ರೀ ನರೇಂದ್ರ ಮೋದಿರವರು ವಿಶ್ವದ ಮಹಾನ್… pic.twitter.com/60y9sX7H53

— Sumalatha Ambareesh ???????? ಸುಮಲತಾ ಅಂಬರೀಶ್ (@sumalathaA) February 9, 2024

ಸುಮಲತಾ ಪೋಸ್ಟ್‌ನಲ್ಲಿ ಏನಿದೆ?
ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು, ತಮ್ಮ ನಿರಂತರ ಕಾರ್ಯದೊತ್ತಡದ ನಡುವೆಯೂ ನನಗೆ ಸಮಯ ನೀಡಿದ್ದಕ್ಕಾಗಿ, ಭಾರತ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿರವರಿಗೆ ನನ್ನ ಧನ್ಯವಾದಗಳು.

ನರೇಂದ್ರ ಮೋದಿರವರು ವಿಶ್ವದ ಮಹಾನ್ ನಾಯಕರಾಗಿದ್ದು, ಭಾರತದಂತಹ ಬೃಹತ್ ದೇಶವನ್ನು ಕಳೆದ ಹತ್ತು ವರ್ಷಗಳಿಂದ ಯಶಸ್ವಿಯಾಗಿ ಮುನ್ನಡೆಸುತ್ತಾ, ಭಾರತವನ್ನು ಮುಂದುವರೆದ ರಾಷ್ಟ್ರಗಳ ಸಾಲಿಗೆ ಸೇರಿಸಲು ಪಡುತ್ತಿರುವ ಶ್ರಮ ನಿಜಕ್ಕೂ ಶ್ಲಾಘನೀಯ. ದೇಶದ ಅಭಿವೃದ್ಧಿ ಹಾಗೂ ದೇಶದ ಭವಿಷ್ಯದ ಬಗ್ಗೆ ನಿಮಗಿರುವ ದೂರದೃಷ್ಟಿಯನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ. ಭಾರತ ದೇಶವು ಇಂದು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲು ಸನ್ಮಾನ್ಯ ಪ್ರಧಾನ ಮಂತ್ರಿಗಳ ಸಮರ್ಥ ನಾಯಕತ್ವವೇ ಕಾರಣ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಈ ಕಾರಣದಿಂದಲೇ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳನ್ನು ಇಡೀ ವಿಶ್ವವೇ ಕೊಂಡಾಡುತ್ತಿದೆ.  ಇದನ್ನೂ ಓದಿ: ಚೌಧರಿ ಚರಣ್ ಸಿಂಗ್, ಪಿವಿ ನರಸಿಂಹ ರಾವ್‌, ಸ್ವಾಮಿನಾಥನ್‌ಗೆ ಭಾರತ ರತ್ನ

ತಮ್ಮನ್ನು ಭೇಟಿ ಮಾಡಿದ ಸಂಧರ್ಭದಲ್ಲಿ, ತಾವು ನೀಡಿದ ಪ್ರೋತ್ಸಾಹದಾಯಕ ಮಾತುಗಳು, ನಮ್ರತೆ, ಮತ್ತು ಗೌರವಕ್ಕೆ ನಾನು ಕೃತಜ್ಞಳಾಗಿದ್ದೇನೆ. ತಮ್ಮನ್ನು ಭೇಟಿ ಮಾಡಿದ ಆ ಕ್ಷಣಗಳು ನನ್ನನ್ನು ಸಾರ್ವಜನಿಕರ ಸೇವೆಯಲ್ಲಿ ಇನ್ನಷ್ಟು ಉತ್ಸಾಹದಿಂದ ತೊಡಗಿಸಿಕೊಳ್ಳಲು ಸ್ಫೂರ್ತಿಯಾಗಿದ್ದು, ನಿಮ್ಮ ಸಹಕಾರ ಮತ್ತು ಮಾರ್ಗದರ್ಶನಕ್ಕೆ ನಾನು ಹೃದಯಪೂರ್ವಕವಾಗಿ ಆಭಾರಿಯಾಗಿದ್ದೇನೆ.

ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿರುವ ನಿಮಗೆ, ನಮ್ಮ ದೇಶದ ಭವಿಷ್ಯದ ಬಗ್ಗೆ ಇರುವ ಪರಿಕಲ್ಪನೆ ಹಾಗೂ ದೂರದೃಷ್ಟಿ ನಮ್ಮ ದೇಶದ ಎಲ್ಲಾ ಭವಿಷ್ಯದ ಮಹತ್ವಾಕಾಂಕ್ಷಿ ನಾಯಕರಿಗೆ ಮಾದರಿಯಾಗಿದೆ. ಪ್ರಧಾನ ಮಂತ್ರಿಗಳಾಗಿ ಅಚಲವಾದ ಧೃಢತೆಯಿಂದ ಅದ್ಭುತವಾದ ನಾಯಕತ್ವದ ಗುಣಗಳೊಂದಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆ ಮತ್ತು ದೇಶಕ್ಕೆ ನೀಡಿದ ಆಡಳಿತವು ಭಾರತ ದೇಶದ ಇತಿಹಾಸದಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ.

17ನೇ ಲೋಕಸಭೆಯ ಕೊನೆಯ ಅಧಿವೇಶನವು ಮುಕ್ತಾಯದ ಹಂತದಲ್ಲಿದ್ದು, ನಿಮ್ಮ ಅಧಿಕಾರಾವಧಿಯಲ್ಲಿ ಸಂಸತ್ ಸದಸ್ಯೆಯಾಗಿ ಸೇವೆ ಸಲ್ಲಿಸಿರುವುದು ನಿಜಕ್ಕೂ ನನ್ನ ಸೌಭಾಗ್ಯವಾಗಿದೆ.

ಈ ಬಾರಿಯ ತಮ್ಮ ಭೇಟಿ ಸಂದರ್ಭದಲ್ಲಿ “ಮುಂದಿನ ದಿನಗಳಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರೆಸೋಣ” ಎಂಬ ನಿಮ್ಮ ಮಾತುಗಳು ನನಗೆ ಸ್ಪೂರ್ತಿದಾಯಕವಾಗಿದ್ದು, ವಿಶ್ವದ ಹೆಮ್ಮೆಯ ನಾಯಕರಾದ ತಮ್ಮ ಅಮೂಲ್ಯ ಮಾರ್ಗದರ್ಶನದಲ್ಲಿ ಜನರ ಸೇವೆ ಮಾಡಲು ಮತ್ತು ಭಾರತವನ್ನು ಮುಂದುವರೆದ ದೇಶಗಳ ಸಾಲಿನಲ್ಲಿ ನೋಡಲು ನಾನು ಉತ್ಸುಕಳಾಗಿದ್ದೇನೆ.

ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಆಸಕ್ತಿ ವಹಿಸಿ, ಉತ್ತಮ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುದಾನವನ್ನು ಒದಗಿಸಿದ್ದಕ್ಕಾಗಿ ನನ್ನ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವಾಭಿಮಾನಿ ಮತದಾರರು, ಕಾರ್ಯಕರ್ತರು, ನನ್ನ ಬೆಂಬಲಿಗರು ಮತ್ತು ಸಮಸ್ತ ಸಾರ್ವಜನಿಕರ ಪರವಾಗಿ, ಭಾರತ ದೇಶದ ಗೌರವಾನ್ವಿತ ಪ್ರಧಾನ ಮಂತ್ರಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ.

TAGGED:bjpkarnatakamandyanarendra modiSumalatha Ambareeshಕರ್ನಾಟಕನರೇಂದ್ರ ಮೋದಿಬಿಜೆಪಿಮಂಡ್ಯಸುಮಲತಾ ಅಂಬರೀಶ್
Share This Article
Facebook Whatsapp Whatsapp Telegram

Cinema News

Dhanush
ಧನುಷ್ ನನ್ನ ಗೆಳೆಯ – ಡೇಟಿಂಗ್ ವದಂತಿಗೆ ತೆರೆ ಎಳೆದ ಮೃಣಾಲ್ ಠಾಕೂರ್
Cinema Latest South cinema Top Stories
Love me like you do forever to go Yash Radhika Pandit Engagement 9th anniversary
ಉಂಗುರಕ್ಕೆ 9ನೇ ವರ್ಷದ ಸಂಭ್ರಮ – ವಿಶೇಷ ನೆನಪು ಹಂಚಿಕೊಂಡ ರಾಧಿಕಾ
Cinema Latest Sandalwood Top Stories
rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories

You Might Also Like

Dharwad House Collapse
Dharwad

ಧಾರವಾಡ | ಎಡೆಬಿಡದೆ ಸುರಿದ ಮಳೆಗೆ ಕುಸಿದ ಮನೆ

Public TV
By Public TV
23 minutes ago
Thief arrested by ASI while stealing from ATM Horrifying scene captured on CCTV camera Ballari
Bellary

ಎಟಿಎಂ ಕಳ್ಳತನ ಮಾಡುವಾಗಲೇ ಎಎಸ್ಐಯಿಂದ ಕಳ್ಳ ಅರೆಸ್ಟ್‌ – ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

Public TV
By Public TV
29 minutes ago
Chamarajanagar
Chamarajanagar

ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳ ಸಾವು – ಹಸಿವಿನಿಂದ ಸಾವನ್ನಪ್ಪಿರುವ ಶಂಕೆ

Public TV
By Public TV
31 minutes ago
k n rajanna
Bengaluru City

ಸಿದ್ದರಾಮಯ್ಯನವರ ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ: ಅಭಿಮಾನಿಗಳಿಗೆ ರಾಜಣ್ಣ ಭಾವುಕ ಪತ್ರ

Public TV
By Public TV
54 minutes ago
bilawal bhutto Modi
Latest

ಸಿಂಧೂ ಜಲ ಒಪ್ಪಂದ ಸ್ಥಗಿತ ಮುಂದುವರಿಸಿದ್ರೆ ಯುದ್ಧದಿಂದ ಹಿಂದೆ ಸರಿಯಲ್ಲ, ಇದು ಮೋದಿ ಸರ್ಕಾರಕ್ಕೆ ಸಂದೇಶ: ಬಿಲಾವಲ್‌ ಭುಟ್ಟೋ

Public TV
By Public TV
55 minutes ago
Pralhad Joshi 1
Karnataka

ಸತ್ಯ ಹೇಳಿದ್ದಕ್ಕೆ ಎಸ್ಟಿ ನಾಯಕನ ಕತ್ತು ಹಿಡಿದು ಹೊರದಬ್ಬಿದೆ ಕಾಂಗ್ರೆಸ್: ಪ್ರಹ್ಲಾದ್ ಜೋಶಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?