ಇನ್ಮುಂದೆ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ

Public TV
1 Min Read
Helmet

ಬೆಂಗಳೂರು: 6 ವರ್ಷ ಮೇಲ್ಪಟ್ಟ ಮಕ್ಕಳನ್ನು ಬೈಕ್‌ನಲ್ಲಿ ಕರೆದೊಯ್ಯುವಾಗ ಕಡ್ಡಾಯವಾಗಿ ಹೆಲ್ಮೆಟ್ (Helmet)  ಧರಿಸಬೇಕು ಎಂದು ಪೊಲೀಸ್ ಇಲಾಖೆ ಸೂಚಿಸಿದೆ.

ಮಕ್ಕಳನ್ನು ಶಾಲೆಗೆ (School) ಕರೆದುಕೊಂಡು ಬರುವ ಪೋಷಕರು ಮಕ್ಕಳಿಗೆ ಅಲ್ಲದೇ ತಾವು ಕೂಡ ಹೆಲ್ಮೆಟ್ ಧರಿಸದೇ ಬರುತ್ತಿದ್ದಾರೆ. ಜೊತೆಗೆ ಶಾಲಾ ಅಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಸಾಕಷ್ಟು ದೂರುಗಳು ಬಂದಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಕಾಂಗ್ರೆಸ್‌ ಶಾಸಕ ಭರತ್‌ ರೆಡ್ಡಿಗೆ ಇಡಿ ಶಾಕ್‌ – ಬಳ್ಳಾರಿ, ಬೆಂಗಳೂರು, ಚೆನ್ನೈನಲ್ಲಿ ದಾಳಿ

ಮಕ್ಕಳನ್ನು ಶಾಲೆಗೆ ಬಿಡಲು ಬರುವ ಪೋಷಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. 6 ವರ್ಷ ಮೇಲ್ಪಟ್ಟ ಮಕ್ಕಳು ಸಹ ಇನ್ಮುಂದೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇಷ್ಟಬಂದಂತೆ ಖಾಸಗಿ ವಾಹನಗಳಲ್ಲಿ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಗುಜುರಿ ಅಂಗಡಿಯಲ್ಲಿ ಅಗ್ನಿ ಅವಘಡ

ಶಾಲಾ ಅಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುವವರು ಮತ್ತು ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದುಕೊಂಡು ಹೋಗುವ ಪೋಷಕರ ವಿರುದ್ಧವೂ ಕ್ರಮಕೈಗೊಳಲಾಗುತ್ತದೆ. ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಸಾರ್ವಜನಿಕರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಎಚ್ಚರಿಸಿದ್ದು, ಶಾಲೆಗಳ ಬಳಿ ಸ್ಪೆಷಲ್ ಡ್ರೈವ್‌  ಮಾಡಲು ಟ್ರಾಫಿಕ್ ಪೊಲೀಸರು ಸಿದ್ದತೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕಾರ್‌ ಟಚ್‌ ಆಗಿದ್ದಕ್ಕೆ ಗಲಾಟೆ- ಪ್ಯಾಂಟ್ ಬಿಚ್ಚಲು ಮುಂದಾದ ಕ್ಯಾಬ್ ಡ್ರೈವರ್!

Share This Article