Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ – ಗೃಹ ಸಚಿವ ಅಮಿತ್ ಶಾ ಭರವಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ – ಗೃಹ ಸಚಿವ ಅಮಿತ್ ಶಾ ಭರವಸೆ

Latest

ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿ – ಗೃಹ ಸಚಿವ ಅಮಿತ್ ಶಾ ಭರವಸೆ

Public TV
Last updated: February 10, 2024 4:46 pm
Public TV
Share
2 Min Read
amit shah 1
SHARE

ನವದೆಹಲಿ: 2019 ರಲ್ಲಿ ಜಾರಿಗೊಳಿಸಲಾದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (CAA) ಲೋಕಸಭೆ ಚುನಾವಣೆಗೆ ಮುನ್ನ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಶನಿವಾರ ಹೇಳಿದ್ದಾರೆ. ಖಾಸಗಿ ವಾಹಿನಿಯ ಜಾಗತಿಕ ವ್ಯಾಪಾರ ಶೃಂಗಸಭೆ 2024 ನಲ್ಲಿ ಮಾತನಾಡಿದ ಅವರು ಸಿಎಎ ಅನುಷ್ಠಾನದ ಸುಳಿವು ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಮುಸ್ಲಿಂ ಸಹೋದರರನ್ನು ದಾರಿತಪ್ಪಿಸಲಾಗುತ್ತಿದೆ ಮತ್ತು ಪ್ರಚೋದಿಸಲಾಗುತ್ತಿದೆ. ಸಿಎಎ ಕೇವಲ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಪೌರತ್ವವನ್ನು ನೀಡಲು ಉದ್ದೇಶಿಸಲಾಗಿದೆ. ಇದರಿಂದ ಯಾರೊಬ್ಬರ ಭಾರತೀಯ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು‌. ಇದನ್ನೂ ಓದಿ: I.N.D.I.A ಮೈತ್ರಿಕೂಟದಿಂದ ಹೊರಬಂದ ಆಪ್‌

CAA protest

ಮುಂಬರುವ ಚುನಾವಣೆಯಲ್ಲಿ ಬಿಜೆಪಿ 370 ಮತ್ತು ಎನ್‌ಡಿಎ 400 ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲಿದೆ ಎಂದು ಇದೇ ವೇಳೆ ಅವರು ವಿಶ್ವಾಸ ವ್ಯಕ್ತಪಡಿಸಿದರು. ಲೋಕಸಭೆ ಚುನಾವಣೆಯ ಫಲಿತಾಂಶದ ಬಗ್ಗೆ ಯಾವುದೇ ಸಸ್ಪೆನ್ಸ್ ಇಲ್ಲ. ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಸಹ ತಾವು ಮತ್ತೆ ವಿರೋಧ ಪಕ್ಷದ ಬೆಂಚ್‌ಗಳಲ್ಲಿ ಕುಳಿತುಕೊಳ್ಳಬೇಕಾಗುತ್ತದೆ ಎಂದು ಅರಿತುಕೊಂಡಿವೆ ಎಂದು ಶಾ ಪ್ರತಿಪಾದಿಸಿದರು. ನಾವು ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಿದ್ದೇವೆ. ಆದ್ದರಿಂದ ದೇಶದ ಜನರು ಬಿಜೆಪಿಗೆ 370 ಸ್ಥಾನಗಳನ್ನು ಮತ್ತು ಎನ್‌ಡಿಎಗೆ 400 ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಆಶೀರ್ವದಿಸುತ್ತಾರೆ ಎಂದು ನಾವು ನಂಬುತ್ತೇವೆ.

ಜಯಂತ್ ಚೌಧರಿ ನೇತೃತ್ವದ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ), ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮತ್ತು ಇತರ ಕೆಲವು ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ಗೆ ಸೇರುವ ಸಾಧ್ಯತೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಹೆಚ್ಚಿನ ಪಕ್ಷಗಳು ಒಕ್ಕೂಟಕ್ಕೆ ಸೇರಬಹುದು. ಮಾತುಕತೆಗಳು ನಡೆಯುತ್ತಿವೆ ಆದರೆ ಯಾವುದನ್ನೂ ಅಂತಿಮಗೊಳಿಸಲಾಗಿಲ್ಲ ಎಂದು ಹೇಳಿದರು. ಇದನ್ನೂ ಓದಿ: ನಾನು ರಾಮನನ್ನು ಗೌರವಿಸ್ತೇನೆ, ಗೋಡ್ಸೆಯನ್ನು ದ್ವೇಷಿಸುತ್ತೇನೆ: ಓವೈಸಿ

AMIT SHAH NARENDRA MODI

2024 ರ ಚುನಾವಣೆಯು ಎನ್‌ಡಿಎ ಮತ್ತು ಭಾರತದ ವಿರೋಧ ಪಕ್ಷದ ನಡುವಿನ ಚುನಾವಣೆಯಾಗಿರುವುದಿಲ್ಲ. ಬದಲಿಗೆ ಅಭಿವೃದ್ಧಿ ಮತ್ತು ಕೇವಲ ಘೋಷಣೆಗಳನ್ನು ನೀಡುವವರ ನಡುವಿನ ಚುನಾವಣೆಯಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಕುರಿತು ಕೇಳಿದ ಪ್ರಶ್ನೆಗೆ ಮಾತನಾಡಿ, 1947 ರಲ್ಲಿ ದೇಶ ವಿಭಜನೆಗೆ ಅವರ ಪಕ್ಷವೇ ಕಾರಣವಾಗಿರುವುದರಿಂದ ನೆಹರೂ-ಗಾಂಧಿ ವಂಶಸ್ಥರಿಗೆ ಇಂತಹ ಮೆರವಣಿಗೆಯನ್ನು ಮುಂದುವರಿಸಲು ಯಾವುದೇ ಹಕ್ಕಿಲ್ಲ ಎಂದು ಹೇಳಿದರು.

ಸಂಸತ್ತಿನಲ್ಲಿ ಸರ್ಕಾರವು ಮಂಡಿಸಿದ ಶ್ವೇತಪತ್ರದ ಕುರಿತು ಮಾತನಾಡಿ, 2014 ರಲ್ಲಿ ಅಧಿಕಾರವನ್ನು ಕಳೆದುಕೊಂಡಾಗ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್ ಮೈತ್ರಿ ಯಾವ ಸಮಸ್ಯೆಯನ್ನು ಬಿಟ್ಟಿದೆ ಎಂಬುದನ್ನು ತಿಳಿದುಕೊಳ್ಳುವ ಸಂಪೂರ್ಣ ಹಕ್ಕು ದೇಶಕ್ಕೆ ಇದೆ. ಆ ಸಮಯದಲ್ಲಿ ಆರ್ಥಿಕತೆಯು ಕೆಟ್ಟ ಸ್ಥಿತಿಯಲ್ಲಿತ್ತು. ಎಲ್ಲೆಡೆ ಹಗರಣಗಳು ನಡೆಯುತ್ತಿದ್ದವು. ವಿದೇಶಿ ಹೂಡಿಕೆ ಬರುತ್ತಿರಲಿಲ್ಲ. ಆ ಸಮಯದಲ್ಲಿ ನಾವು ಶ್ವೇತಪತ್ರವನ್ನು ಹೊರತಂದಿದ್ದರೆ ಅದು ಜಗತ್ತಿಗೆ ತಪ್ಪು ಸಂದೇಶವನ್ನು ನೀಡುತ್ತಿತ್ತು. ಆದರೆ 10 ವರ್ಷಗಳ ನಂತರ ನಮ್ಮ ಸರ್ಕಾರ ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಿದೆ. ವಿದೇಶಿ ಹೂಡಿಕೆಯನ್ನು ತಂದಿದೆ ಮತ್ತು ಯಾವುದೇ ಭ್ರಷ್ಟಾಚಾರವಿಲ್ಲ. ಆದ್ದರಿಂದ ಶ್ವೇತಪತ್ರವನ್ನು ಪ್ರಕಟಿಸಲು ಇದು ಸರಿಯಾದ ಸಮಯ ಎಂದು ಅವರು ಹೇಳಿದರು. ಇದನ್ನೂ ಓದಿ: ಮೋದಿಯವರ 10 ವರ್ಷ ರಾಜ್ಯಕ್ಕೆ ಅನ್ಯಾಯದ ಕಾಲ: ಸಿದ್ದರಾಮಯ್ಯ

TAGGED:Amit ShahCAANew Delhi
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Delhi NCR
Latest

ದೆಹಲಿ-NCR ನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಪಾಕ್‌ ಮೂಲದ ಇಬ್ಬರು ಶಂಕಿತ ಉಗ್ರರ ಬಂಧನ

Public TV
By Public TV
7 minutes ago
Mallikarjun Kharge Narendra Modi
Latest

ಮೋದಿ ಒಬ್ಬ ಭಯೋತ್ಪಾದಕ – ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

Public TV
By Public TV
25 minutes ago
ATS Raid 2 Arrested
Latest

ಗುಜರಾತ್‌ ATS ದಾಳಿ: ಘಜ್ವಾ-ಎ-ಹಿಂದ್ ಸಂಚು ಪ್ರಕರಣದಲ್ಲಿ ಇಬ್ಬರ ಬಂಧನ

Public TV
By Public TV
35 minutes ago
KN RAJANNA
Bengaluru City

ಸಿಎಂಗೆ ಯಾರೋ ಮಾಟ ಮಂತ್ರ ಮಾಡಿಸಿರಬಹುದು, ಜನ್ರೂ ಮಾತಾಡಿಕೊಳ್ತಿದ್ದಾರೆ: ರಾಜಣ್ಣ

Public TV
By Public TV
1 hour ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಗೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ‘ಸಿಂಧೂರ’ ಸಾಂತ್ವನ

Public TV
By Public TV
1 hour ago
g parameshwara 2
Bengaluru City

ಇನ್‌ಸ್ಪೆಕ್ಟರ್‌ಗೆ ಕಿರುಕುಳ ಆರೋಪ – ವರದಿ ನೀಡಲು ಸೂಚಿಸಿದ್ದೇನೆ: ಪರಮೇಶ್ವರ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?