17ನೇ ಲೋಕಸಭೆಯಲ್ಲಿ 221 ಮಸೂದೆ ಅಂಗೀಕಾರ: ಪ್ರಹ್ಲಾದ್ ಜೋಶಿ

Public TV
2 Min Read
Prahlad Joshi

ನವದೆಹಲಿ: 17ನೇ ಲೋಕಸಭೆ (Lok Sabha Election) ಅವಧಿಯಲ್ಲಿ ಉಭಯ ಸದನಗಳಲ್ಲಿ ಐದು ವರ್ಷಗಳ ಕಾಲ ಒಟ್ಟು 221 ಮಸೂದೆಗಳನ್ನು (Bill) ಅಂಗೀಕರಿಸಲಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ತಿಳಿಸಿದ್ದಾರೆ.

17ನೇ ಲೋಕಸಭೆ ಕೊನೆಯ ಅಧಿವೇಶನದ ಕೊನೆಯ ದಿನವಾದ ಶನಿವಾರ ಸಂಸತ್ ಕಲಾಪದಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, 5 ವರ್ಷಗಳಲ್ಲಿ 545 ಸಭೆಗಳಲ್ಲಿ ಸಕ್ರೀಯವಾಗಿ ಭಾಗಿಯಾಗಿದೆ ಹೇಳಿದ್ದಾರೆ. 5 ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಸಮರ್ಥ ನಾಯಕತ್ವದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸುವ ಸುಯೋಗಕ್ಕಾಗಿ ಕೃತಜ್ಞನಾಗಿರುತ್ತೇನೆ ಎಂದರು. ಇದನ್ನೂ ಓದಿ: ಮುಂದಿನ 25 ವರ್ಷಗಳಲ್ಲಿ ‘ವಿಕಸಿತ ಭಾರತ’ ಕನಸು ನನಸಾಗುತ್ತೆ: ಮೋದಿ ಭರವಸೆ

ಕಳೆದ 5 ವರ್ಷಗಳಲ್ಲಿ ಉಭಯ ಸದನಗಳ ವ್ಯವಹಾರಕ್ಕೆ ಕೊಡುಗೆ ನೀಡಿ, 545 ಸಭೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ ಪ್ರತಿಯೊಬ್ಬ ಸದಸ್ಯರು ಮತ್ತು ರಾಜಕೀಯ ಪಕ್ಷಗಳಿಗೆ ಜೋಶಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಉಭಯ ಸದನಗಳಿಂದ ಒಟ್ಟು 221 ಮಸೂದೆಗಳು ಅಂಗೀಕರಿಸಲ್ಪಟ್ಟಿವೆ ಮತ್ತು ಕಾಯ್ದೆಗಳಾಗಿ ಮಾರ್ಪಟ್ಟಿವೆ ಎಂದ ವಿವರಿಸಿದರು. ಇದನ್ನೂ ಓದಿ: ದೇಶಕ್ಕೆ ಒಂದೇ ಸಂವಿಧಾನ ಬೇಕೆಂಬ ಕನಸು ಸಾಕಾರಗೊಂಡಿದೆ – ಮೋದಿ ಬಣ್ಣನೆ

17ನೇ ಲೋಕಸಭೆಯ ಉತ್ಪಾದಕತೆ 97% ಆಗಿದೆ. ಈ ಸಭೆಯನ್ನು ಮುಕ್ತಾಯಗೊಳಿಸುತ್ತಿದ್ದಂತೆ, 100% ಕ್ಕಿಂತ ಹೆಚ್ಚು ಉತ್ಪಾದಕತೆಯನ್ನು ಸಾಧಿಸುವ ಸಂಕಲ್ಪದೊಂದಿಗೆ ನಾವು 18ನೇ ಲೋಕಸಭೆಗೆ ಪ್ರವೇಶಿಸುತ್ತೇವೆ ಎಂಬ ವಿಶ್ವಾಸವನ್ನು ಪ್ರಧಾನಿ ನರೇಂದ್ರ ಮೋದಿ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ರಾಮಮಂದಿರ ಮುಂದಿನ ತಲೆಮಾರಿಗೆ ಹೆಮ್ಮೆಯ ಸಂಕೇತ: ಮೋದಿ

Share This Article