ಶಿವಮೊಗ್ಗ: ಹೋರಿ ತಿವಿದು ಯುವಕ ಸಾವನ್ನಪ್ಪಿದ ಘಟನೆ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದಿದೆ.
ಗಂಭೀರವಾಗಿ ಗಾಯಗೊಂಡಿದ್ದ ಯುವಕ ಪುನೀತ್ ಆಚಾರ್ (19) ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ನಿಖಿಲ್ ಮಂಡ್ಯ ಕಣದಿಂದ ಹಿಂದೆ ಸರಿದಿದ್ದೇಕೆ?
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್ ಶಿಕಾರಿಪುರ ಪಟ್ಟಣದ ಹಾಸ್ಟೆಲ್‌ನಲ್ಲಿದ್ದುಕೊಂಡು ಐಟಿಐ ಓದುತ್ತಿದ್ದ.ಹೋರಿ ತಿವಿದು ಗಂಭೀರವಾಗಿ ಗಾಯಗೊಂಡಿದ್ದ ಪುನೀತ್‌ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಜಿಲ್ಲಾಸ್ಪತ್ರೆಯಲ್ಲಿ ಪುನೀತ್ ಸಾವನ್ನಪ್ಪಿದ್ದಾನೆ.
ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿ ಪರ ಬಹಿರಂಗ ಪ್ರಚಾರಕ್ಕೆ ಇಳಿದ ಎಸ್‌ಟಿ ಸೋಮಶೇಖರ್