ಆಪ್ರೋ ಲುಕ್ ನಲ್ಲಿ ಧ್ರುವ ಸರ್ಜಾ: ಗೋವಾದಲ್ಲಿ ಕಾಣಿಸಿಕೊಂಡ ನಟ

Public TV
1 Min Read
Dhruva Sarja 1

ಮಾರ್ಟಿನ್ ಚಿತ್ರಕ್ಕಾಗಿ ಹೊಸ ಅವತಾರ ಎತ್ತಿದ್ದಾರೆ ನಟ ಧ್ರುವ ಸರ್ಜಾ (Dhruva Sarja). ಮಾರ್ಟಿನ್ ಸಿನಿಮಾದ ಹಾಡಿನ ಚಿತ್ರೀಕರಣ ಗೋವಾದಲ್ಲಿ (Goa) ನಡೆಯುತ್ತಿದ್ದು, ಈ ಹಾಡಿಗಾಗಿ ಧ್ರುವ, ಆಪ್ರೋ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.  ಆ ಫೋಟೋವನ್ನು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆ ವಿಚಿತ್ರ ವೇಷ ಕಂಡು ಅನೇಕರು ಅಚ್ಚರಿ ವ್ಯಕ್ತ ಪಡಿಸಿದ್ದಾರೆ.

Martin 4

ಮಾರ್ಟಿನ್ ಸಿನಿಮಾದ ಶೂಟಿಂಗ್ ಎಲ್ಲಿಗೆ ಬಂತು ಎಂದು ಅವರ ಅಭಿಮಾನಿಗಳು ಅನೇಕ ಸಲ ಕೇಳಿದ್ದಿದೆ. ಅದಕ್ಕೀಗ ಉತ್ತರ ಸಿಕ್ಕಿದೆ. ಕೊನೆಯ ಹಂತದ ಚಿತ್ರೀಕರಣ (Shooting) ಸದ್ಯ ನಡೆಯುತ್ತಿದ್ದು, ಧ್ರುವ ಸರ್ಜಾ ಭಾಗಿಯಾಗಿದ್ದಾರೆ. ಕೆಲ ದಿನಗಳ ಕಾಲ ಚಿತ್ರೀಕರಣ ನಡೆಯಲಿದ್ದು, ಅಲ್ಲಿಗೆ ಕುಂಬಳಕಾಯಿ ಒಡೆಯಲಾಗುತ್ತದೆ.

Martin 1

ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಧ್ರುವ ಸರ್ಜಾ ನಟನೆಯ ಮಾರ್ಟಿನ್ (Martin) ಸಿನಿಮಾ ತೆರೆಗೆ ಬರಬೇಕಿತ್ತು. ಕೆಲ ತಿಂಗಳ ಹಿಂದೆ ಪ್ಯಾನ್ ಇಂಡಿಯಾ ಪ್ರೆಸ್ ಮೀಟ್ ಮಾಡಿ, ಮಾರ್ಟಿನ್ ಚಿತ್ರದ ಕೆಲವು ಅಪ್ ಡೇಟ್ ನೀಡಿತ್ತು ಚಿತ್ರತಂಡ. ಈಗ ಮತ್ತೆ ಅದರ ಅಪ್ ಡೇಟ್ ಕೇಳುತ್ತಿದ್ದರು ಫ್ಯಾನ್ಸ್. ಅದಕ್ಕೀಗ ಉತ್ತರ ಸಿಕ್ಕಿದೆ.

 

ಈ ನಡುವೆ ಧ್ರುವ ಸರ್ಜಾ ನಟನೆಯ ಕೆಡಿ ಸಿನಿಮಾದ ಶೂಟಿಂಗ್ ಕೂಡ ಮುಗಿದಿದೆ. ಇದೇ ವರ್ಷ ರಿಲೀಸ್ ಮಾಡುವುದಾಗಿ ನಿರ್ದೇಶಕ ಪ್ರೇಮ್ ಘೋಷಣೆ ಮಾಡಿದ್ದಾರೆ. ಹೊಸ ವರ್ಷದ ದಿನದಂದು ಕೆಡಿ ಸಿನಿಮಾ ಇದೇ ವರ್ಷ ರಿಲೀಸ್ ಆಗಲಿದೆ ಎಂದು ಘೋಷಣೆ ಮಾಡುತ್ತಿದ್ದಂತೆಯೇ ಮಾರ್ಟಿನ್ ಬಗ್ಗೆ ಸಾಕಷ್ಟು ಅನುಮಾನಗಳು ಮೂಡಿವೆ. ಮಾರ್ಟಿನ್ ಗಿಂತ ಮುಂಚೆ ಕೆಡಿ ಸಿನಿಮಾ ರಿಲೀಸ್ ಆಗಲಿದೆ ಎನ್ನುವ ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಕೆಡಿ ಸಿನಿಮಾದ ಚಿತ್ರೀಕರಣ ಪೂರ್ಣವಾಗಿದೆ.

Share This Article