ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ

Public TV
1 Min Read
Dakshina Kannada Young Woman Suicide

ಮಂಗಳೂರು: ಚಲಿಸುತ್ತಿದ್ದ ರೈಲಿನಿಂದ (Train) ನದಿಗೆ (River) ಹಾರಿ ಯುವತಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ನಲ್ಲಿ ನಡೆದಿದೆ.

ತುಮಕೂರು (Tumakur) ಜಿಲ್ಲೆ ಮಧುಗಿರಿ (Madhugiri) ತಾಲೂಕಿನ ಮಿಡಿಗೇಶಿಯ ಪಡಸಾಕೆಹಟ್ಟಿ ನಿವಾಸಿ ನಯನಾ ಎಂ.ಜಿ (27) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಚಲಿಸುತ್ತಿದ್ದ ಸಂದರ್ಭ ತಾನು ಕುಳಿತಿದ್ದ ಸೀಟ್‌ನಲ್ಲಿ ಬ್ಯಾಗ್ ಬಿಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಪತ್ನಿಯನ್ನು ಕೊಂದ ಕೇಸ್‌ನಲ್ಲಿ ಜಾಮೀನು ಪಡೆದು ಕೇರಳಕ್ಕೆ ಪರಾರಿಯಾಗಿದ್ದ ಆರೋಪಿ ಬಂಧನ

ಮೃತದೇಹವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಕುರಿತು ಬಂಟ್ವಾಳ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೆಲಸದಿಂದ ವಾಪಸ್ಸಾಗ್ತಿದ್ದ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದ!

Share This Article