ರಾಯಚೂರು: ವಸತಿ ಗೃಹದಲ್ಲಿ (Hostel) ನೀಡುತ್ತಿದ್ದ ಕಿರುಕುಳದಿಂದ ಮನನೊಂದು ವಿದ್ಯಾರ್ಥಿ (Student) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿಂಧನೂರು (Sindhanur) ನಗರದ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ಇಂದು ನಡೆದಿದೆ.
ಹಿರೇಹುಸೇನಪ್ಪ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ (Second PUC) ವಿದ್ಯಾರ್ಥಿ ಹಿರೇಹುಸೇನಪ್ಪ ಅಂಬೇಡ್ಕರ್ ವಸತಿ ನಿಲಯದಲ್ಲಿದ್ದುಕೊಂಡು ಓದುತ್ತಿದ್ದ. ಹಿರೇಹುಸೇನಪ್ಪ ವಸತಿ ನಿಲಯದ ಮೂಲಭೂತ ಸೌಕರ್ಯಗಳ ಬಗ್ಗೆ ಪ್ರಶ್ನಿಸಿದ್ದನು. ಅದಕ್ಕೆ ಆತನಿಗೆ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಹೃದಯಾಘಾತ – ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮಲಗಿದಲ್ಲೇ ಸಾವು!
- Advertisement -
- Advertisement -
ವಸತಿ ನಿಲಯದ ವಾರ್ಡನ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಸೇರಿ ಹಿರೇಹುಸೇನಪ್ಪನ ವಿರುದ್ಧ ಉಳಿದ ವಿದ್ಯಾರ್ಥಿಗಳನ್ನು ಎತ್ತಿಕಟ್ಟಿ ಕಿರುಕುಳ ನೀಡಿ, ಜಾತಿನಿಂದನೆ ಮಾಡುತ್ತಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿ ವಸತಿ ನಿಲಯದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಬಣ್ಣದ ಕಾರ್ಖಾನೆಯಲ್ಲಿ ಭೀಕರ ಅಗ್ನಿ ದುರಂತ – 11 ಮಂದಿ ಸಜೀವ ದಹನ
- Advertisement -
- Advertisement -
ಮೃತ ವಿದ್ಯಾರ್ಥಿಯ ತಾಯಿ ಹುಸೆನಮ್ಮ ವಾರ್ಡನ್ ಹಾಗೂ ಸಮಾಜ ಕಲ್ಯಾಣ ಇಲಾಖೆ ತಾಲೂಕು ಅಧಿಕಾರಿ ವಿರುದ್ಧ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಿದ್ಯಾರ್ಥಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇದನ್ನೂ ಓದಿ: Karnataka Budget 2024: ಸರ್ಕಾರಕ್ಕೆ 1 ರೂಪಾಯಿ ಬಂದಿದ್ದು ಎಲ್ಲಿಂದ? 1 ರೂ. ಹೋಗಿದ್ದು ಎಲ್ಲಿಗೆ?