Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ 2,300 ಕೋಟಿ ರೂ. ಹೂಡಿಕೆಗೆ ಟಾಟಾ ಸಮೂಹ ಗ್ರೀನ್‌ ಸಿಗ್ನಲ್‌ – ಸಿಎಂ ಶ್ಲಾಘನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ 2,300 ಕೋಟಿ ರೂ. ಹೂಡಿಕೆಗೆ ಟಾಟಾ ಸಮೂಹ ಗ್ರೀನ್‌ ಸಿಗ್ನಲ್‌ – ಸಿಎಂ ಶ್ಲಾಘನೆ

Bengaluru City

ರಾಜ್ಯದಲ್ಲಿ 2,300 ಕೋಟಿ ರೂ. ಹೂಡಿಕೆಗೆ ಟಾಟಾ ಸಮೂಹ ಗ್ರೀನ್‌ ಸಿಗ್ನಲ್‌ – ಸಿಎಂ ಶ್ಲಾಘನೆ

Public TV
Last updated: February 19, 2024 11:37 pm
Public TV
Share
2 Min Read
Tata group 2
SHARE

ಬೆಂಗಳೂರು: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ (AIR India) ಮತ್ತು ಟಾಟಾ ಅಡ್ವಾನ್ಸ್ಡ್‌ ಸಿಸ್ಟಮ್ಸ್ ಲಿಮಿಟೆಡ್ (TASL) ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಸಮ್ಮುಖದಲ್ಲಿ ರಾಜ್ಯ ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ (MB Patil) ನೇತೃತ್ವದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಏರ್ ಇಂಡಿಯಾದ ಮುಖ್ಯ ವಾಣಿಜ್ಯ ವ್ಯವಹಾರ ಅಧಿಕಾರಿ ನಿಪುಣ್ ಅಗರವಾಲ್ ಹಾಗೂ ಟಿಎಎಸ್ಎಲ್ ಸಿಇಒ ಸುಕರಣ್ ಸಿಂಗ್ ಒಡಂಬಡಿಕೆ ಪತ್ರಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು. ಈ ಮಾಹಿತಿಯನ್ನು ಸಿಎಂ ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Tata group 3

ಸಿಎಂ X ಖಾತೆಯಲ್ಲಿ ಏನಿದೆ?
25,000ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ: ಟಾಟಾ ಸಮೂಹದ ಈ ಹೂಡಿಕೆಯಿಂದ ನೇರವಾಗಿ 1,650 ಉದ್ಯೋಗಗಳು ಸೃಷ್ಟಿಯಾಗಲಿವೆ. ಒಟ್ಟು ಹೂಡಿಕೆಯ ಪೈಕಿ ಏರ್ ಇಂಡಿಯಾ ಕಂಪನಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ವಿಮಾನಗಳ ನಿರ್ವಹಣೆ, ದುರಸ್ತಿ ಮತ್ತು ಓವರ್-ಹಾಲ್ (ಎಂಆರ್ ಒ) ಘಟಕವನ್ನು ಸ್ಥಾಪಿಸಲು 1,300 ಕೋಟಿ ರೂ. ಹೂಡಿಕೆ ಮಾಡುತ್ತಿದೆ. ಇದರಿಂದಾಗಿ 1,200 ಜನರಿಗೆ ನೇರವಾಗಿ ಉದ್ಯೋಗ ಸಿಗಲಿದ್ದು, ಪರೋಕ್ಷವಾಗಿ 25 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿವೆ. ಇಡೀ ಭಾರತದಲ್ಲೇ ಇದು ಮೊಟ್ಟಮೊದಲ ಯೋಜನೆಯಾಗಿದೆ.

Tata group

310 ಕೋಟಿ ರೂ.ವೆಚ್ಚದಲ್ಲಿ ಗನ್ ತಯಾರಿಕೆ ಘಟಕ ಸ್ಥಾಪನೆ: ಟಾಟಾ ಅಡ್ವಾನ್ಸ್ಡ್‌ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕಂಪನಿಯು ಮೂರು ಯೋಜನೆಗಳಿಗೆ 1,030 ಕೋಟಿ ರೂ. ಬಂಡವಾಳ ಹೂಡಲಿದೆ. ಇವುಗಳ ಪೈಕಿ 420 ಕೋಟಿ ರೂ.ಗಳು ನಾಗರಿಕ ವಿಮಾನಗಳನ್ನು ಸರಕು ಸಾಗಣೆ ವಿಮಾನಗಳನ್ನಾಗಿ (ಫ್ರೈಟರ್) ಪರಿವರ್ತಿಸುವ ಘಟಕ ಸ್ಥಾಪನೆಗೆ ವಿನಿಯೋಗಿಸಲಿದೆ. ಜೊತೆಗೆ 310 ಕೋಟಿ ರೂ. ಹೂಡಿಕೆಯೊಂದಿಗೆ ಗನ್ ತಯಾರಿಕೆ ಘಟಕ ಮತ್ತು 300 ಕೋಟಿ ರೂ. ವೆಚ್ಚದಲ್ಲಿ ವಿಮಾನಯಾನ ಮತ್ತು ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಿದೆ. ಇದರಿಂದ 450 ಉದ್ಯೋಗಗಳು ಸೃಷ್ಟಿಯಾಗಲಿವೆ.

ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ಮತ್ತು ಕೋಲಾರದಲ್ಲಿ TASL ಸ್ಥಾಪಿಸಲಿರುವ ಗನ್ ತಯಾರಿಕೆ ಘಟಕದ ಮೂಲಕ ಕಂಪನಿಗೆ ಅಗತ್ಯವಿರುವ 13 ಸಾವಿರ ಬಿಡಿಭಾಗಗಳ ಪೈಕಿ ಶೇ.50ರಷ್ಟನ್ನು ಪೂರೈಸಿಕೊಳ್ಳುವ ಆಲೋಚನೆ ಹೊಂದಿದೆ. ಇದರಿಂದಾಗಿ 300ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ 2-3 ಸಾವಿರ ಜನರಿಗೆ ಉದ್ಯೋಗಗಳು ಸಿಗಲಿವೆ. 1939ರಷ್ಟು ಹಿಂದೆಯೇ ಬೆಂಗಳೂರಿನಲ್ಲಿ ಎಚ್ಎಎಲ್ ಸ್ಥಾಪನೆಯಾಗುವುದರೊಂದಿಗೆ ರಾಜ್ಯವು ವೈಮಾನಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ.

ರಕ್ಷಣಾ ಇಲಾಖೆಗೆ ಬೇಕಾಗುವ ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳ ಪೈಕಿ ಶೇ.67ರಷ್ಟು ಕರ್ನಾಟಕದಲ್ಲೇ ತಯಾರಾಗುತ್ತಿದೆ. ಜೊತೆಗೆ ದೇಶದ ರಕ್ಷಣಾ ವಲಯದ ರಫ್ತು ವಹಿವಾಟಿಗೆ ರಾಜ್ಯವು ಶೇ.65ರಷ್ಟು ಕೊಡುಗೆ ನೀಡುತ್ತಿದೆ. ದೇಶದಲ್ಲಿ ಈ ವಲಯದಲ್ಲಿರುವ ಕಂಪನಿಗಳ ಪೈಕಿ ಶೇ.70ರಷ್ಟು ಕಂಪನಿಗಳು ಕರ್ನಾಟಕದಲ್ಲೇ ನೆಲೆ ಹೊಂದಿವೆ ಎಂದು ಸಿಎಂ ಶ್ಲಾಘಿಸಿದ್ದಾರೆ.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್, ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ವಿವಿಧ ಕಂಪನಿಗಳ ಪ್ರತಿನಿಧಿಗಳು ಹಾಜರಿದ್ದರು.

Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
6 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
6 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
6 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
7 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
7 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?