ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಜೈಲಿನಲ್ಲಿ ಗಲಾಟೆ- ಮಾರಾಕಾಸ್ತ್ರ, ಮೊಬೈಲ್, ನಗದು ವಶಕ್ಕೆ

Public TV
1 Min Read
HARSHA

ಕಲಬುರಗಿ: ಶಿವಮೊಗ್ಗದ ಹರ್ಷ (Harsha, Shivamogga) ಕೊಲೆ ಪ್ರಕರಣದ ಆರೋಪಿಗಳು ಜೈಲಿನಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ.

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ಶಿವಮೊಗ್ಗ ಹರ್ಷ ಕೊಲೆಯ ಪ್ರಕರಣದ ಆರೋಪಿಗಳು ಮತ್ತು ಇತರೆ ಆರೋಪಿಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಟ ನಡೆದಿದೆ.

HARSHA

ಈ ಗಲಾಟೆಯಲ್ಲಿ ಎರಡು ಗುಂಪಿನ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಘಟನೆಯ ಬಳಿಕ ಡಿಸಿಪಿ ಕ್ರೈಂ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ನಡೆದಿದೆ. ದಾಳಿ ವೇಳೆ ಮಾರಾಕಾಸ್ತ್ರ 10 ಸಾವಿರ ನಗದು ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಖಾಸಗಿ ಬಸ್ ಹರಿದು ಬೈಕ್ ಸವಾರ ದಾರುಣ ಸಾವು

ಹರ್ಷ ಕೊಲೆ: ಫೆಬ್ರವರಿ 20ರಂದು ರಾತ್ರಿ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿತ್ತು. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿತ್ತು. ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಹತ್ಯೆಗೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳು ಜೈಲಿನಲ್ಲಿದ್ದಾರೆ.

Share This Article