ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನದ ಸುದ್ದಿ ಕೇಳಿ ಹೃದಯಾಘಾತದಿಂದ ಅಭಿಮಾನಿ ಸಾವು

Public TV
1 Min Read
Raja Venkatappa Naik 2

ಯಾದಗಿರಿ: ಶಾಸಕ ರಾಜಾ ವೆಂಕಟಪ್ಪ ನಾಯಕ (Raja Venkatappa Naik) ಅವರ ನಿಧನದ ಸುದ್ದಿ ಕೇಳುತ್ತಲೇ ಅವರ ಅಭಿಮಾನಿಯೊಬ್ಬರು ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ ಘಟನೆ ಸುರಪುರದ ಮಂಗಳೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಹಣಮಂತ, ರಾಜಾ ವೆಂಕಟಪ್ಪ ಅವರ ಅಭಿಮಾನಿಯಾಗಿದ್ದರು. ಮೃತ ಹಣಮಂತ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕರ ಅಪ್ಪಟ ಅಭಿಮಾನಿಯಾಗಿದ್ದರು. ಇನ್ನೂ ಶಾಸಕರ ಸಾವಿನ ಸುದ್ದಿ ಕೇಳುತ್ತಲೇ ಅವರಿಗೆ ಹೃದಯಾಘಾತವಾಗಿದೆ. ಇದರಿಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಬಾಲಿವುಡ್ ನಿರ್ಮಾಪಕ ಕುಮಾರ್ ಶಹಾನಿ ನಿಧನ

ಶಾಸಕ ರಾಜಾ ವೆಂಕಟಪ್ಪ ನಾಯಕ (67) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣದಿಂದ ಕಳೆದ 15 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಫೆಬ್ರವರಿ 1 ರಂದು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದ ಅವರು, ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದರು. ಎಸ್‍ಟಿ ಮೀಸಲು ವಿಧಾನಸಭಾ ಕ್ಷೇತ್ರವಾದ ಸುರಪುರದಿಂದ ಒಟ್ಟು 7 ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿ, 4 ಬಾರಿ ಗೆದ್ದಿದ್ದರು. ಇದನ್ನೂ ಓದಿ: ನಂಬಿ ಬಂದವಳ ಬಿಟ್ಟು ಮತ್ತೊಬ್ಬಳ ಕೈಹಿಡಿದ ಪತಿ – ಅಂತರ್ಜಾತಿ ವಿವಾಹವಾಗಿದ್ದ ಮಹಿಳೆ ‌ನೇಣಿಗೆ ಶರಣು

Share This Article