ಚಿಕ್ಕಬಳ್ಳಾಪುರ: ಬೆಂಗಳೂರಿನ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, 1 ಕೆಜಿಗೂ ಅಧಿಕ ಪ್ರಮಾಣದ ಚಿನ್ನವನ್ನು ಸೀಜ್ ಮಾಡಿದ್ದಾರೆ.
ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಬರೋಬ್ಬರಿ 72.76 ಲಕ್ಷ ರೂ. ಮೌಲ್ಯದ 1 ಕೆಜಿ 166 ಗ್ರಾಂ ಚಿನ್ನವನ್ನ (Gold) ವಶಪಡಿಸಿಕೊಂಡಿದ್ದಾರೆ.
ಪ್ರಕರಣಗಳಲ್ಲಿ ಶ್ರೀಲಂಕಾದ ಓರ್ವ ಹಾಗೂ ಮೂವರು ದೇಶಿಯ ಪ್ರಯಾಣಿಕರನ್ನ ಬಂಧಿಸಲಾಗಿದೆ. ಕೊಲಂಬೋದಿಂದ ಆಗಮಿಸಿ ಏರ್‌ಪೋರ್ಟ್‌ನಲ್ಲಿ ಬೇರೊಬ್ಬ ವ್ಯಕ್ತಿಗೆ ಚಿನ್ನ ಹಸ್ತಾಂತರಿಸುತ್ತಿದ್ದ ವೇಳೆ ಅಸಾಮಿ ಅರೆಸ್ಟ್ ಆಗಿದ್ದಾನೆ. ಇದನ್ನೂ ಓದಿ: ಜಾರ್ಖಂಡ್‌ನ ಮಾಜಿ ಸಿಎಂ ಮಧು ಕೋಡ ಪತ್ನಿ, ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ
ಉಳಿದ ಎರಡು ಪ್ರಕರಣಗಳಲ್ಲಿ ಚೈನ್ ಹಾಗೂ ಬಿಸ್ಕೆಟ್ ರೂಪದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುವಾಗ ಪ್ರಯಾಣಿಕರು ಸಿಕ್ಕಿಬಿದ್ದಿದ್ದಾರೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಿಂದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕಡೆಗಣನೆ: ಕೋಟ ಶ್ರೀನಿವಾಸ ಪೂಜಾರಿ