ಕರ್ನಾಟಕ ಚಲನಚಿತ್ರ ಅಕಾಡೆಮಿಗೆ (Chalanachitra Academy) ಅಧ್ಯಕ್ಷರಾಗಿ (President) ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾರನ್ನು (Sadhu Kokila) ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ನಿಗಮ ಮಂಡಳಿಗೆ 44 ಜನರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿದ್ದು, ಅದರಲ್ಲಿ ಚಲನಚಿತ್ರ ಅಕಾಡೆಮಿಯು ಸೇರಿದೆ.
ಹಲವು ದಿನಗಳಿಂದ ಅಧ್ಯಕ್ಷ ಗಾದೆಗೆ ಹಲವಾರು ಹೆಸರುಗಳು ಕೇಳಿ ಬಂದಿದ್ದವು, ಅದರಲ್ಲಿ ಸಾಧು ಕೋಕಿಲಾ ಹೆಸರೂ ಇತ್ತು. ಸಿದ್ದರಾಮಯ್ಯನವರಿಗೆ ಆಪ್ತರಾಗಿರುವ ಮತ್ತು ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿರುವ ಸಾಧು ಕೋಕಿಲಾ ಅವರನ್ನೇ ಅಧ್ಯಕ್ಷರನ್ನಾಗಿ ಮಾಡುತ್ತಾರೆ ಎನ್ನುವ ಮಾತೂ ಕೇಳಿ ಬಂದಿತ್ತು. ಅದೇ ನಿಜವಾಗಿದೆ.
ಹಾಸ್ಯ ನಟರಾಗಿ, ಸಂಗೀತ ನಿರ್ದೇಶಕರಾಗಿ ಸಾಕಷ್ಟು ಸಿನಿಮಾಗಳಿಗೆ ಕೆಲಸ ಮಾಡಿರುವ ಸಾಧು ಕೋಕಿಲಾ, ನಿರ್ಮಾಪಕರಾಗಿ, ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ. ಕಿರುತೆರೆ, ಹಿರಿತೆರೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಈ ಆಯ್ಕೆ ಸೂಕ್ತ ಎನ್ನುವುದು ಹಲವರ ಅಭಿಪ್ರಾಯ. ಇಂದು ಅಕಾಡೆಮಿಯ ವತಿಯಿಂದ ಚಿತ್ರೋತ್ಸವ ನಡೆಯಲಿದೆ. ಇಂದು ಅವರು ಅಧಿಕಾರ ವಹಿಸುತ್ತಾರಾ ಕಾದು ನೋಡಬೇಕು.