ಕಾಶಿ ವಿಶ್ವನಾಥನ ದರ್ಶನ ಪಡೆದ ತಮನ್ನಾ ಭಾಟಿಯಾ

Public TV
1 Min Read
Tamannaah Bhatia

ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ (Tamannaah Bhatia) ವಾರಣಾಸಿಯ ಕಾಶಿ ವಿಶ್ವನಾಥನ ದರ್ಶನ ಪಡೆದಿದ್ದಾರೆ. ಶಿವರಾತ್ರಿಗೂ ಮುನ್ನ ಶಿವನ ದರ್ಶನ ಪಡೆದು ನಟಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಶಿಗೆ ಭೇಟಿ ಕೊಟ್ಟಿರುವ ಫೋಟೋಗಳನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Tamannaah Bhatia

ಸಿನಿಮಾ ಶೂಟಿಂಗ್‌ಗೆ ಬ್ರೇಕ್ ಹಾಕಿ ತಮನ್ನಾ ಟೆಂಪಲ್ ರನ್ ಮಾಡಿದ್ದಾರೆ. ಜ್ಯೋತಿರ್ಲಿಂಗಕ್ಕೆ ನಟಿ ಪೂಜೆ ಸಲ್ಲಿಸಿದ್ದಾರೆ. ಸದ್ಯದಲ್ಲೇ ವಿಜಯ್ ವರ್ಮಾ (Vijay Varma) ಜೊತೆ ತಮನ್ನಾ ಮದುವೆಯಾಗಲು ನಿರ್ಧರಿಸಿದ್ದಾರೆ. ಶುಭಕಾರ್ಯಕ್ಕೆ ಚಾಲನೆ ನೀಡುವ ಮುನ್ನ ದೇವರ ಸನ್ನಿಧಿಗೆ ನಟಿ ಭೇಟಿ ನೀಡಿದ್ದಾರೆ.

Tamannaah Bhatia 1

ಕಳೆದ 2 ವರ್ಷಗಳಿಂದ ಬಾಲಿವುಡ್ ನಟ ವಿಜಯ್ ವರ್ಮಾ ಜೊತೆ ತಮನ್ನಾ ಭಾಟಿಯಾ ಎಂಗೇಜ್ ಆಗಿದ್ದಾರೆ. ಇತ್ತೀಚಿನ ಸಂದರ್ಶನಗಳಲ್ಲಿ ಡೇಟಿಂಗ್ ಬಗ್ಗೆ ತಮನ್ನಾ ರಿವೀಲ್ ಮಾಡಿದ್ದರು. ಮದುವೆ ಪ್ಲ್ಯಾನಿಂಗ್ ಬಗ್ಗೆ ಇಬ್ಬರು ಮುಕ್ತವಾಗಿ ಸಂದರ್ಶನಗಳಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದರು.

‘ಲಸ್ಟ್ ಸ್ಟೋರಿಸ್ 2’ನಲ್ಲಿ ತಮನ್ನಾ- ವಿಜಯ್ ವರ್ಮಾ ಬೋಲ್ಡ್ ಆಗಿ ನಟಿಸಿದ್ದರು. ವೆಬ್ ಸಿರೀಸ್‌ನಲ್ಲಿ ವಿಜಯ್ ಜೊತೆ ಹಸಿಬಿಸಿ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದರು. ಚಿತ್ರೀಕರಣದ ವೇಳೆ ಪರಿಚಯವಾದ ಸ್ನೇಹ, ಪ್ರೀತಿಗೆ ತಿರುಗಿತ್ತು. ಇನ್ನೂ ಮದುವೆ ಯಾವಾಗ ಎಂದು ಈ ಜೋಡಿ ಅಧಿಕೃತ ಡೇಟ್ ಅನೌನ್ಸ್ ಮಾಡುವವರೆಗೂ ಕಾಯಬೇಕಿದೆ. ಇದನ್ನೂ ಓದಿ:ಕಿರುತೆರೆಗೆ ಕಾಲಿಟ್ಟ ಹಾಸ್ಯ ನಟ ಟೆನ್ನಿಸ್ ಕೃಷ್ಣ

tamannaah and vijay varma

‘ಜೈಲರ್’ (Jailer) ಚಿತ್ರದ ಹಾಡಿಗೆ ತಮನ್ನಾ ಹೆಜ್ಜೆ ಹಾಕಿದ ಮೇಲೆ ಅವರಿಗೆ ಬೇಡಿಕೆ ಹೆಚ್ಚಾಗಿದೆ. ತೆಲುಗಿನ ಜೊತೆಗೆ ಹೆಚ್ಚೆಚ್ಚು ಬಾಲಿವುಡ್ ಸಿನಿಮಾಗಳಲ್ಲಿ ಕಾಣಿಸಿಕೊಳ್ತಿದ್ದಾರೆ. ಉತ್ತಮ ಕಥೆಗೆ ಗ್ರೀನ್ ಸಿಗ್ನಲ್ ಕೊಡುತ್ತಿದ್ದಾರೆ.

ಸದ್ಯ ಬಾಲಿವುಡ್‌ನ ಬಿಗ್ ಬಜೆಟ್ ಸಿನಿಮಾ ಸ್ತ್ರೀ ಚಿತ್ರದ ಪಾರ್ಟ್ 2ನಲ್ಲಿ ತಮನ್ನಾ ಭಾಟಿಯಾ ಅವರು ಸ್ಪೆಷಲ್ ಸಾಂಗ್‌ಗೆ ಹೆಜ್ಜೆ ಹಾಕ್ತಿದ್ದಾರೆ. ಈ ಚಿತ್ರದಲ್ಲಿ ರಾಜ್‌ಕುಮಾರ್ ರಾವ್- ಶ್ರದ್ಧಾ ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

Share This Article