ಸ್ಯಾಂಡಲ್‌ವುಡ್ ನಟಿ ಕಮ್ ಸಂಸದೆ ಸುಮಲತಾ (Sumalatha) ಇದೀಗ ಟಿಕೆಟ್ ಘೋಷಣೆಗೂ ಮುನ್ನ ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದಿದ್ದಾರೆ. ಲೋಕಸಭಾ ಚುನಾವಣೆ ಅಖಾಡ ಕಾವೇರುತ್ತಿದ್ದಂತೆ, ಸುಮಲತಾ ಅವರು ಮಂಡ್ಯ ಕ್ಷೇತ್ರದ ವಿವಿಧ ಕಾರ್ಯಕ್ರಮಗಳಿಗೆ ಭಾಗಿಯಾಗಿದ್ದಾರೆ. ಇದನ್ನೂ ಓದಿ:ಕರಿಮಣಿ ಮಾಲೀಕನನ್ನು ಪರಿಚಯಿಸಿದ ದೀಪಿಕಾ ದಾಸ್

ಲೋಕಸಭಾ ಚುನಾವಣೆಗೆ ಅಖಾಡ ಸಜ್ಜಾಗಿದೆ. ಮೈತ್ರಿ ಟಿಕೆಟ್ ಜಟಾಪಟಿ ನಡುವೆ ಸುಮಲತಾ ಮತ್ತಷ್ಟು ಆ್ಯಕ್ಟೀವ್ ಆಗಿದ್ದಾರೆ. ಈ ಮೂಲಕ ಜೆಡಿಎಸ್ ನಾಯಕರಿಗೆ ಠಕ್ಕರ್ ಕೊಡಲು ಸುಮಲತಾ ಮುಂದಾಗಿದ್ದಾರೆ. ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
