ಅಭಿವ್ಯಕ್ತಿ ಸ್ವಾತಂತ್ರ್ಯ ದುರುಪಯೋಗ – ಉದಯನಿಧಿ ಸ್ಟಾಲಿನ್‍ಗೆ ಸುಪ್ರೀಂ ಛೀಮಾರಿ

Public TV
1 Min Read
Udhayanidhi Stalin 3

ನವದೆಹಲಿ: ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರ `ಸನಾತನ ಧರ್ಮ ನಿರ್ಮೂಲನೆ’ (Sanatana Dharma) ಹೇಳಿಕೆಗೆ ಸುಪ್ರೀಂ ಕೋರ್ಟ್ (Supreme Court) ಛೀಮಾರಿ ಹಾಕಿದೆ.

ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ದುರುಪಯೋಗಪಡಿಸಿಕೊಂಡ ಬಳಿಕ ಸುಪ್ರೀಂ ಕೋರ್ಟ್‍ಗೆ ಏಕೆ ಅರ್ಜಿ ಸಲ್ಲಿಸಿದ್ದೀರಿ ಎಂದು ಸ್ಟಾಲಿನ್ ಅವರಿಗೆ ಕೋರ್ಟ್ ಪ್ರಶ್ನೆ ಮಾಡಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರಿದ್ದ ದ್ವಿಸದಸ್ಯ ಪೀಠವು, ಸ್ಟಾಲಿನ್ ಅವರು ಸಚಿವರಾಗಿದ್ದು, ಅವರ ಹೇಳಿಕೆಯ ಪರಿಣಾಮಗಳನ್ನು ತಿಳಿದುಕೊಳ್ಳಬೇಕು ಎಂದು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಪ್ರತಿ ತಿಂಗಳು 1,000 ರೂ. – ಆಪ್‌ ಸರ್ಕಾರದಿಂದ ಬಂಪರ್‌ ಕೊಡುಗೆ

ಸಂವಿಧಾನದ ಅನುಚ್ಛೇದ 19(1)(ಎ) ಅಡಿಯಲ್ಲಿ ಮತ್ತು ಆರ್ಟಿಕಲ್ 25ರ ಅಡಿಯಲ್ಲಿ ನಿಮ್ಮ ಹಕ್ಕನ್ನು ದುರುಪಯೋಗಪಡಿಸಿಕೊಂಡಿದ್ದೀರಿ. ಈಗ ನೀವು ಆರ್ಟಿಕಲ್ 32ರ ಅಡಿಯಲ್ಲಿ (ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲು) ನಿಮ್ಮ ಹಕ್ಕನ್ನು ಚಲಾಯಿಸುತ್ತಿದ್ದೀರಾ? ನೀವು ಹೇಳಿದ್ದರ ಪರಿಣಾಮ ಎಷ್ಟರ ಮಟ್ಟಿಗಿದೆ ಎಂದು ಯೋಚಿಸಿದ್ದೀರಾ? ರಾಜ್ಯದ ಮಂತ್ರಿಯಾಗಿದ್ದೀರಿ, ಅದರ ಪರಿಣಾಮಗಳನ್ನು ನೀವೇ ತಿಳಿದುಕೊಳ್ಳಬೇಕು ಎಂದು ನ್ಯಾಯಾಲಯ ಛೀಮಾರಿ ಹಾಕಿದೆ.

ಉದಯನಿಧಿ ಸ್ಟಾಲಿನ್ ತಮಿಳುನಾಡು ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರ ಪುತ್ರ. ಅವರು ಸೆ.2023ರಲ್ಲಿ ನಡೆದ ಸಮಾವೇಶವೊಂದರಲ್ಲಿ, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದ್ದು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಅದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ಸುಪ್ರೀಂ ಕೋರ್ಟ್‍ನಲ್ಲಿ ಸ್ಟಾಲಿನ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ತಮ್ಮ ಕಕ್ಷಿದಾರರ ವಿರುದ್ಧ ಹಲವಾರು ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ಅವೆಲ್ಲವನ್ನೂ ಒಂದೇ ಕಡೆ ವಿಚಾರಣೆ ನಡೆಸುವಂತೆ ಆದೇಶಿಸಬೇಕೆಂದು ಮನವಿ ಮಾಡಿದ್ದಾರೆ. ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಮಾರ್ಚ್ 15ಕ್ಕೆ ಮುಂದೂಡಿದೆ. ಇದನ್ನೂ ಓದಿ: ಮೋದಿ ಕುಟುಂಬದ ಬಗ್ಗೆ ಹೇಳಿಕೆ ನೀಡಿರುವ ಲಾಲು ವಿರುದ್ಧ ಬಿಜೆಪಿ ವಾಗ್ದಾಳಿ

Share This Article