ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮೋದಿ ನರ ಕಟ್- ತಲ್ವಾರ್ ಹಿಡಿದು ಅವಾಜ್ ಹಾಕಿದವನಿಗಾಗಿ ಶೋಧ

Public TV
1 Min Read
Crime

ಯಾದಗಿರಿ: ದುಷ್ಕರ್ಮಿಯೊಬ್ಬ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿ ಫೇಸ್‍ಬುಕ್‍ನಲ್ಲಿ ವೀಡಿಯೋ ಹರಿಬಿಟ್ಟಿದ್ದಾನೆ.

ಸುರಪುರದ ರಂಗಂಪೇಟೆ ನಿವಾಸಿ ಮಹಮದ್ ರಸೂಲ್ ಕಡ್ದಾರೆ ಎಂಬಾತ ಕೈಯಲ್ಲಿ ತಲವಾರ ಹಿಡಿದು ಮೋದಿ ಹಾಗೂ ಯೋಗಿ ವಿರುದ್ಧ ಪೇಸ್‍ಬುಕ್ ಪೇಜ್‍ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಮಾಡೋದಾಗಿ ಬೆದರಿಕೆಯ ವೀಡಿಯೋ ಹರಿಬಿಟ್ಟಿದ್ದಾನೆ. ಹೈದ್ರಾಬಾದ್‍ನಲ್ಲಿ ಕೂಲಿ ಕೆಲಸ ಮಾಡುವ ಮಹಮದ್ ರಸೂಲ್ ಅಲ್ಲಿಂದಲೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ವೀಡಿಯೋ ಅಪ್ಲೋಡ್ ಮಾಡಿದ್ದಾನೆ. ಇದನ್ನೂ ಓದಿ: ಬಿಜೆಪಿಯಲ್ಲಿ ಎಲ್ಲರೂ ಜೇಬಿನಲ್ಲಿ ಟಿಕೆಟ್‌ ಇಟ್ಕೊಂಡು ಓಡಾಡ್ತಿದ್ದಾರೆ: ಅನಂತ್‌ ಕುಮಾರ್‌ ಹೆಗಡೆ

ಕಾಂಗ್ರೆಸ್ ಆಡಳಿತದಲ್ಲಿ ಹೀಗೆಲ್ಲ ಅಧಿಕಾರ ಮಾಡಿಲ್ಲ. ಮೋದಿ ಪಿಎಂ ಆಗದ್ದೀನಿ ಎಂದು ನಾಟಕ ಮಾಡುತ್ತಿದ್ದಿಯಾ. ಮೋದಿ ಆಡಳಿತ ಸರಿಯಾಗಿ ಮಾಡುತ್ತಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ನಿಮ್ಮತರಹ ಕೆಟ್ಟ ಆಡಳಿತ ಮಾಡಿಲ್ಲ. ನೀನು ಟೀ ಮಾರಾಟ ಮಾಡುತ್ತಿದ್ದೆ. ಪಾರ್ಟಿ ಬಿಟ್ಟು ನನ್ನ ಜೊತೆ ಜಗಳಕ್ಕೆ ಬಾ ಎಂದು ವೀಡಿಯೋದಲ್ಲಿ ಹೇಳಿದ್ದಾನೆ.

ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ್ರೆ ಪಿಎಂ ಮೋದಿ ದೇಹದ ನರಗಳನ್ನು ಕಟ್ ಮಾಡುತ್ತೇನೆ. ಕಾಂಗ್ರೆಸ್ (Congress) ಜಿಂದಾಬಾದ್ ಎಂದು ವೀಡಿಯೋದಲ್ಲಿ ಹೇಳಿಕೊಂಡಿದ್ದಾನೆ.

ಈ ಸಂಬಂಧ ಸುರಪುರ ಪೊಲೀಸ್ (Police) ಠಾಣೆಯಲ್ಲಿ ಮಹಮದ್ ರಸೂಲ್ ವಿರುದ್ಧ ಕೊಲೆ ಬೆದರಿಕೆ, ನಿಂದನೆ ಹಾಗೂ ಸಶಸ್ತ್ರ ಕಾಯ್ದೆಯಡಿ ಕೇಸ್ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶದ ರಾಜ್ಯಸಭಾ ಸಂಸದ ಸ್ಥಾನಕ್ಕೆ ಜೆಪಿ ನಡ್ಡಾ ರಾಜೀನಾಮೆ

Share This Article