ನಟಿ ವೈಜಯಂತಿ ಮಾಲಾರನ್ನು ಭೇಟಿಯಾಗಿ ನಮಿಸಿದ ನರೇಂದ್ರ ಮೋದಿ

Public TV
1 Min Read
vyjayanthimala 1

ದ್ಮವಿಭೂಷಣ ಪುರಸ್ಕೃತೆ ಹಾಗೂ ಖ್ಯಾತ ನಟಿ ವೈಜಯಂತಿ ಮಾಲಾ (Vyjayanthimala) ಅವರನ್ನು ಪಿಎಂ ನರೇಂದ್ರ ಮೋದಿ (Narendra Modi) ಅವರು ಭೇಟಿಯಾಗಿದ್ದಾರೆ. ತಮಿಳುನಾಡಿನ ಚೆನ್ನೈನಲ್ಲಿ ಭೇಟಿಯಾಗಿದ್ದು, ಹಿರಿಯ ನಟಿಯನ್ನು ನಮಿಸಿರುವ ಫೋಟೋವನ್ನು ಮೋದಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Vyjayanthimalaಚೆನ್ನೈನಲ್ಲಿ ವೈಜಯಂತಿ ಮಾಲಾ (Vyjayanthimala) ಅವರನ್ನು ಭೇಟಿ ಮಾಡಿದ್ದು, ಖುಷಿ ನೀಡಿದೆ. ಅವರು ಪದ್ಮ ವಿಭೂಷಣ ಪ್ರಶಸ್ತಿ ಪಡೆದಿದ್ದಾರೆ ಮತ್ತು ಭಾರತೀಯ ಸಿನಿಮಾ ಜಗತ್ತಿಗೆ ನೀಡಿದ ಕೊಡುಗೆಗಾಗಿ ಭಾರತದಾದ್ಯಂತ ಮೆಚ್ಚುಗೆ ಪಡೆದಿದ್ದಾರೆ ಎಂದು ಮೋದಿ ಬರೆದಿದ್ದಾರೆ. ಇದನ್ನೂ ಓದಿ:ಕನ್ನಡತಿಯರ ಜಡೆ ಜಗಳದ ಮಧ್ಯೆ ಮೀನಾಕ್ಷಿಗೆ ಸಿಕ್ತು ಬಂಪರ್‌ ಆಫರ್‌`

ಅಂದಹಾಗೆ, ಜನವರಿಯಲ್ಲಿ ಪದ್ಮ ಪ್ರಶಸ್ತಿ ಪಡೆದವರ ಹೆಸರನ್ನು ಅನೌನ್ಸ್ ಮಾಡಿದ್ದರು. ಅದರಲ್ಲಿ ಹಿರಿಯ ನಟಿ ವೈಜಯಂತಿ ಮಾಲಾ ಹೆಸರಿತ್ತು. ತೆಲುಗಿನ ಸ್ಟಾರ್ ನಟ ಮೆಗಾಸ್ಟಾರ್ ಚಿರಂಜೀವಿ ಸೇರಿದಂತೆ ಅನೇಕರಿಗೆ ಈ ಪ್ರಶಸ್ತಿ ಸಿಕ್ಕಿದೆ.

ವೈಜಯಂತಿ ಮಾಲಾ ಅವರು ಬಹುಭಾಷಾ ನಟಿಯಾಗಿ ಗುರುತಿಸಿಕೊಂಡವರು. 1949ರಲ್ಲಿ ವಾಳ್ಕೈ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.

Share This Article