ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಅಶೋಕ್, ಅಶ್ವಥ್ ನಾರಾಯಣ್ ಸಮರ್ಥರು – ಸಿಪಿವೈ ಅಚ್ಚರಿ ಹೇಳಿಕೆ

Public TV
1 Min Read
CP Yogeshwara

ನವದೆಹಲಿ: ಬೆಂಗಳೂರು ಗ್ರಾಮಾಂತರ (Bengaluru Rural) ಕ್ಷೇತ್ರಕ್ಕೆ ಅಭ್ಯರ್ಥಿಗಳ ಕೊರತೆ ಇಲ್ಲ. ಪಕ್ಷದಲ್ಲಿ ಸಾಕಷ್ಟು ಪ್ರಬಲ ನಾಯಕರಿದ್ದಾರೆ ಮಾಜಿ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕೂಡ ಸ್ಪರ್ಧೆ ಮಾಡಬಹುದು ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ (CP Yogeshwara) ಹೇಳಿದ್ದಾರೆ.

R Ashoka 2

ಕ್ಷೇತ್ರದಲ್ಲಿ ನಡೆದ ಮೈತ್ರಿ ಮಾತುಕತೆ ಸಂಬಂಧ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸಂಬಂಧ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಡಾ.ಮಂಜುನಾಥ್ (Dr. CN Manjunath) ಅವರ ಹೆಸರು ಪ್ರಸ್ತಾಪಿಸಿದ್ದೇನೆ, ಅವರನ್ನು ಒಪ್ಪಿಸುವ ಜವಬ್ದಾರಿ ನನ್ನದು ಎಂದು ಹೇಳಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಸಂಸ್ಕರಣೆ ಮಾಡಿದ ನೀರು ಮರುಬಳಕೆಗೆ ಶೀಘ್ರವೇ ಆದೇಶ: ಈಶ್ವರ್ ಖಂಡ್ರೆ

R.Ashoka Vijayendra

ಈ ಚುನಾವಣೆಯನ್ನು (Elections) ಸವಾಲಾಗಿ ಸ್ವೀಕರಿಸಿದ್ದೇವೆ, ನಾನು ರಾಜ್ಯ ರಾಜಕಾರಣದಲ್ಲಿ ಇರಬೇಕು ಅಂತ ಅಂದುಕೊಂಡಿದ್ದೇನೆ. ಹೀಗಾಗೀ ನಾನು ಸ್ಪರ್ಧಿಸುವ ಆಸಕ್ತಿ ಇಲ್ಲ. ನಾನು ಮಂಜುನಾಥ್ ಹೆಸರು ಪ್ರಸ್ತಾಪಿಸಿದ್ದೇನೆ, ಕೆಲವು ನಾಯಕರು ನಾನು ಸ್ಪರ್ಧಿಸಿದರೆ ಕಠಿಣ ಪೈಪೊಟಿ ಇರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ದೇಶದ್ರೋಹಿಗಳಿಗೂ, ಕೈ ನಾಯಕರಿಗೂ ಅಪ್ಪುಗೆಯ ನಂಟಿನ ಕಾರಣ FSL ವರದಿ ವಿಳಂಬ: ಸಿ.ಟಿ.ರವಿ

ಮಂಜುನಾಥ್ ಅವರನ್ನು ಹೊರತುಪಿಡಿಸದರೂ ಅಶ್ವಥ್ ನಾರಾಯಣ್ ಡಿಸಿಎಂ ಆಗಿದ್ದವರು, ಉಸ್ತುವಾರಿ ಸಚಿವರಾಗಿದರು, ಆರ್.ಅಶೋಕ್ ವಿರೋಧ ಪಕ್ಷದ ನಾಯಕರು ಸ್ಪರ್ಧಿಸಲು ಸಮರ್ಥರಿದ್ದಾರೆ. ಅಂತಿಮವಾಗಿ ಪಕ್ಷದ ವರಿಷ್ಠರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಭ್ರೂಣಹತ್ಯೆ ಮತ್ತೆ ಬೆಳಕಿಗೆ- ನೆಲಮಂಗಲ ಖಾಸಗಿ ಆಸ್ಪತ್ರೆಯಲ್ಲಿ 74 ಗರ್ಭಪಾತ

Share This Article