Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೀಪಕ್‌ರನ್ನು ಮೊದಲು ಭೇಟಿಯಾಗಿದ್ದು ಎಲ್ಲಿ? ಲವ್ ಸ್ಟೋರಿ ಬಿಚ್ಚಿಟ್ಟ ದೀಪಿಕಾ ದಾಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದೀಪಕ್‌ರನ್ನು ಮೊದಲು ಭೇಟಿಯಾಗಿದ್ದು ಎಲ್ಲಿ? ಲವ್ ಸ್ಟೋರಿ ಬಿಚ್ಚಿಟ್ಟ ದೀಪಿಕಾ ದಾಸ್

Cinema

ದೀಪಕ್‌ರನ್ನು ಮೊದಲು ಭೇಟಿಯಾಗಿದ್ದು ಎಲ್ಲಿ? ಲವ್ ಸ್ಟೋರಿ ಬಿಚ್ಚಿಟ್ಟ ದೀಪಿಕಾ ದಾಸ್

Public TV
Last updated: March 10, 2024 6:52 pm
Public TV
Share
3 Min Read
deepika das 1 2
SHARE

‘ಬಿಗ್ ಬಾಸ್’ (Bigg Boss Kannada 7) ಬೆಡಗಿ ದೀಪಿಕಾ ದಾಸ್ (Deepika Das) ಸೀಕ್ರೆಟ್ ಆಗಿ ಮದುವೆಯಾಗುವ ಮೂಲಕ ಪಡ್ಡೆಹುಡುಗರಿಗೆ ಶಾಕ್ ಕೊಟ್ಟಿದ್ದರು. ಇದೀಗ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಆರತಕ್ಷತೆ ಮತ್ತು ಬೀಗರೂಟ ಕಾರ್ಯಕ್ರಮ ಜರುಗಿದೆ. ಈ ವೇಳೆ, ಪತಿ ದೀಪಕ್‌ರನ್ನು ಮೊದಲು ಭೇಟಿಯಾಗಿದ್ದು ಎಲ್ಲಿ? ಲವ್ ಸ್ಟೋರಿ ಹೇಗೆ ಶುರುವಾಯ್ತು ಎಂದು ನಟಿ ಸುದ್ದಿಗೋಷ್ಠಿಯಲ್ಲಿ ರಿವೀಲ್ ಮಾಡಿದ್ದಾರೆ.

deepika das 1 3

ದೀಪಿಕಾ ದಾಸ್‌ಗೆ ಗೋವಾದಲ್ಲೇ ಮದುವೆಯಾಗುವ ಕನಸು ಇತ್ತಂತೆ. ಹೀಗಾಗಿ ಕೇವಲ ಕುಟುಂಬಸ್ಥರ ಸಮ್ಮುಖದಲ್ಲಿ ನಟಿ ದೀಪಿಕಾ ದಾಸ್ ಉದ್ಯಮಿ ದೀಪಕ್ ಎಂಬುವವರ ಜೊತೆ ಮಾರ್ಚ್ 1ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದನ್ನೂ ಓದಿ:ಅದ್ಧೂರಿಯಾಗಿ ನಡೆಯಿತು ದೀಪಿಕಾ ದಾಸ್ ಆರತಕ್ಷತೆ- ಶುಭಹಾರೈಸಿದ ಸೆಲೆಬ್ರಿಟಿಗಳು

deepika das 1 4

ದೀಪಕ್ ಅವರ ಮೇಲೆ ನಿಮಗೆ ಲವ್ ಆಗಿದ್ದು ಹೇಗೆ ಎಂಬ ಪ್ರಶ್ನೆಗೆ ನಟಿ ದೀಪಿಕಾ ದಾಸ್ ಮನಬಿಚ್ಚಿ ಮಾತನಾಡಿದ್ದಾರೆ. ದೀಪಕ್ ಮತ್ತು ನಾನು ನಾಲ್ಕು ವರ್ಷದ ಸ್ನೇಹಿತರು. 4 ವರ್ಷಗಳ ಕಾರ್ಯಕ್ರಮವೊಂದರಲ್ಲಿ ಭೇಟಿಯಾದೆವು. ಕಳೆದ ಒಂದು ವರ್ಷದಿಂದ ರಿಲೇಷನ್‌ಶಿಪ್‌ನಲ್ಲಿ ಇದ್ವಿ. ಕುಟುಂಬಸ್ಥರು ಕೂಡ ನಮ್ಮ ಪ್ರೀತಿಗೆ ಓಕೆ ಎಂದರು.

deepika das 5

ದೀಪಕ್ (Deepika Das) ಅವರಿಗೆ ಚಿತ್ರರಂಗಕ್ಕೂ ನಂಟಿಲ್ಲ. ಅವರು ಉದ್ಯಮಿ. ಮುಂದಿನ ದಿನಗಳಲ್ಲಿ ಪ್ರೊಡಕ್ಷನ್ ಹೌಸ್ ಮಾಡುವ ಮೂಲಕ ಚಿತ್ರರಂಗಕ್ಕೆ ಕರೆತರುವ ಯೋಜನೆ ಇದೆ. ಅವರು ಜಾಸ್ತಿ ಮಾತಾಡೋದಿಲ್ಲ. ನಾನೇ ಕಮ್ಮಿ ಮಾತಾಡುತ್ತೇನೆ ಅಂದುಕೊಂಡಿದ್ದೆ, ಆದರೆ ನನಗಿಂತ ಕಮ್ಮಿ ಮಾತಾಡುವ ಹುಡುಗ ನನಗೆ ಸಿಕ್ಕಿದ್ದಾರೆ. ನಾನು ಮದುವೆಯಾಗುವ ಹುಡುಗ ಹೀಗೆ ಇರಬೇಕು, ಹಾಗೇ ಇರಬೇಕು ಅಂತಾ ಅಂದುಕೊಂಡಿರಲಿಲ್ಲ. ಆದರೆ ನಾನು ಪ್ರೀತಿ ಅಂತಾ ಹುಡುಕಿಕೊಂಡು ಹೋಗಿಲ್ಲ. ನನ್ನ ಮದುವೆಯಾಗುವ ಹುಡುಗ ಮನಸ್ಸು ಚೆನ್ನಾಗಿರಬೇಕು, ನನ್ನ ಚೆನ್ನಾಗಿ ನೋಡಿಕೊಳ್ಳುವವನಾಗಿರಬೇಕು, ನನಗೆ ಟೈಮ್ ಕೊಡುವವನಾಗಿರಬೇಕು ಜೊತೆಗೆ ದೇಶ ಸುತ್ತುವವನಾಗಿರಬೇಕು ಅಂತಾ ಈ ಹಿಂದೆ ಹೇಳಿದ್ದೆ. ಅದೇ ರೀತಿ ನಾನು ಅಂದುಕೊಂಡ ಹಾಗೇ ನನಗೆ ನನ್ನ ಸಂಗಾತಿ ಸಿಕ್ಕಿದ್ದಾರೆ ಅಂತಾ ಹೇಳಿಕೊಂಡಿದ್ದಾರೆ.

deepika das 6ಬಳಿಕ ದೀಪಿಕಾ ದಾಸ್ ಪತಿ ದೀಪಕ್ ಮಾತನಾಡಿ, ನಾನು ದುಬೈ ಮೂಲದವನು ಅಲ್ಲ. ಇದೆ ಬೆಂಗಳೂರಿನ ಆರ್‌ಆರ್ ನಗರದವನು. ರಿಯಲ್ ಎಸ್ಟೇಟ್ ಜೊತೆ ದುಬೈನಲ್ಲಿ ಒಂದು ಐಟಿ ಕಂಪನಿ ಇದೆ. ದೀಪಿಕಾ ನನಗೆ ನಾಲ್ಕು ವರ್ಷಗಳಿಂದ ಗೊತ್ತು. ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದೆವು. ಇಷ್ಟು ದಿನ ಹೇಗೆಲ್ಲಾ ದೀಪಿಕಾಗೆ ಬೆಂಬಲಿಸಿದ್ರೋ ಮುಂದಿನ ದಿನಗಳಲ್ಲಿ ಕೂಡ ಅವಳಿಗೆ ಸಪೋರ್ಟ್ ಮಾಡಿ ಎಂದು ದೀಪಕ್ ಮನವಿ ಮಾಡಿದ್ದಾರೆ.

deepika das 3 1ಮಾರ್ಚ್ 10ರಂದು ಮಧ್ಯಾಹ್ನ 12.30ಕ್ಕೆ ಆರತಕ್ಷತೆ ಕಾರ್ಯಕ್ರಮ ಜರುಗಿದ್ದು, ಬಿಗ್ ಬಾಸ್ ಖ್ಯಾತಿ ದಿವ್ಯಾ ಉರುಡುಗ, ಪ್ರಶಾಂತ್ ಸಂಬರಗಿ, ನೀತು ವನಜಾಕ್ಷಿ, ಅನುಪಮಾ ಗೌಡ, ಚಂದನಾ ಅನಂತಕೃಷ್ಣ, ಪ್ರಿಯಾಂಕಾ, ಪನ್ನಗ ಭರಣ, ಕಿಶನ್, ಸಿಂಗರ್ ವಾಸುಕಿ ವೈಭವ್ ಸೇರಿದಂತೆ ಅನೇಕರು ಮದುವೆ ಆರತಕ್ಷತೆಯಲ್ಲಿ ಭಾಗಿಯಾಗಿ ವಿಶ್ ಮಾಡಿದ್ದಾರೆ.

deepika das 2 1ಅದಷ್ಟೇ ಅಲ್ಲ, ಸ್ನೇಹಿತೆ ದೀಪಿಕಾ ದಾಸ್ ‘ಇನ್ನೂನು ಬೇಕಾಗಿದೆ ಒಲವು’ ಎಂಬ ಸಾಂಗ್ ಹಾಡಿ ನವ ಜೋಡಿಗೆ ವಿಶೇಷವಾಗಿ ಶುಭಕೋರಿದ್ದಾರೆ ವಾಸುಕಿ ವೈಭವ್. ವಾಸುಕಿ-ದೀಪಿಕಾ ಸ್ನೇಹ ಇದೀಗ ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗಿದೆ.

deepika das 1 1

ಮಾರ್ಚ್ 1ರಂದು ದೀಪಿಕಾ ಮದುವೆಯ ಸುಂದರ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಫ್ಯಾನ್ಸ್‌ಗೆ ಅಚ್ಚರಿ ಮೂಡಿಸಿದ್ದರು. ಜೊತೆಗೆ ಹುಡುಗನ ಬಗ್ಗೆ ಯಾವುದೇ ಮಾಹಿತಿಯನ್ನೂ ಅವರು ಹಂಚಿಕೊಂಡಿರಲಿಲ್ಲ. ಮೊನ್ನೆಯಷ್ಟೇ ತನ್ನ ಕರಿಮಣಿ ಮಾಲೀಕನನ್ನು ನಟಿ ಪರಿಚಯಿಸಿದ್ದರು. ಪತಿಯ ಹೆಸರು ದೀಪಕ್ ಎಂದು ರಿವೀಲ್ ಮಾಡಿ ತಮ್ಮ ಮದುವೆಯ ಬಗ್ಗೆ ನಟಿ ಸಂತಸ ವ್ಯಕ್ತಪಡಿಸಿದ್ದರು.

deepika das

ಪದ್ಧತಿಯ ಬದ್ಧವಾಗಿ, ಡೆಸ್ಟಿನೇಷನ್ ವೆಡ್ಡಿಂಗ್ ಪ್ಲ್ಯಾನ್ ನನ್ನ ಕನಸಾಗಿತ್ತು. ಇದೀಗ ಅದು ಈಡೇರಿದೆ ಎಂದು ನಟಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದರು. ದಿಢೀರ್ ಅಂತ ಆಗಿದ ಮದುವೆ ಅಲ್ಲ. ಈ ಮದುವೆಗೆ ಹಲವು ದಿನಗಳಿಂದ ಪ್ಲ್ಯಾನ್ ಮಾಡಲಾಗಿತ್ತು. ಸರ್ಪ್ರೈಸ್ ಕೂಡ ಸ್ವೀಟ್ ಆಗಿದೆ. ನನಗೆ ನನ್ನ ಬಾಳ ಸಂಗಾತಿ ಸಿಕ್ಕಿದ್ದು, ಪಕ್ಕಾ ದೇಸಿ. ದಯವಿಟ್ಟು ನಮ್ಮ ಗೌಪ್ಯತೆಯನ್ನು ಗೌರವಿಸಿ ಎಂದು ದೀಪಿಕಾ ದಾಸ್ ಮನವಿ ಮಾಡಿದ್ದರು.

ನಾಗಿಣಿ ಸೀರಿಯಲ್ ಬಿಗ್ ಬಾಸ್ ಸೀಸನ್ 7ರ ಮೂಲಕ ಮೋಡಿ ಮಾಡಿರುವ ನಟಿ ದೀಪಿಕಾ ದಾಸ್ ಅವರು ಗೋವಾದಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ಆಗಿದ್ದಾರೆ. ಗೋವಾದ ಕಡಲ ತೀರದಲ್ಲಿ ಬೆಂಗಳೂರಿನ ಉದ್ಯಮಿ ದೀಪಕ್‌ರನ್ನು ನಟಿ ಮದುವೆ ಆಗಿದ್ದಾರೆ. ಮಾರ್ಚ್ 1ರಂದು ನಡೆದ ದೀಪಿಕಾ ಮದುವೆಯಲ್ಲಿ ಎರಡು ಕುಟುಂಬದ ಸದಸ್ಯರು, ಆಪ್ತರಷ್ಟೇ ಭಾಗಿಯಾಗಿದ್ದಾರೆ.

TAGGED:Bigg Boss Kannada 7Deepika dasdoddanna Sandalwoodದೀಪಕ್ದೀಪಿಕಾ ದಾಸ್ಬಿಗ್‌ ಬಾಸ್‌ ಕನ್ನಡ 7
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
4 minutes ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
22 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
33 minutes ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
38 minutes ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
1 hour ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?