ಡಿಕೆಸು Vs ಡಾ.ಮಂಜುನಾಥ್‌ ಸ್ಪರ್ಧೆ ಫಿಕ್ಸ್‌, ಅಧಿಕೃತ ಘೋಷಣೆ ಮಾತ್ರ ಬಾಕಿ – ಜೆಡಿಎಸ್‌ ಸಭೆಯಲ್ಲಿ ಏನು ಚರ್ಚೆ ನಡೆದಿದೆ?

Public TV
2 Min Read
Lok Saba Election Bengaluru Rural DK Suresh vs Dr C. N manjunath JDS Meeting HD Kumaraswamy 2

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ (Bengaluru Rural) ಡಿಸಿಎಂ ಡಿಕೆ ಶಿವಕುಮಾರ್‌ ಸಹೋದರ ಡಿಕೆ ಸುರೇಶ್‌ (DK Suresh) ವಿರುದ್ಧ ಮೈತ್ರಿ ಅಭ್ಯರ್ಥಿಯಾಗಿ ಡಾ.ಮಂಜುನಾಥ್‌ (Dr Manjunath) ಕಣಕ್ಕೆ ಇಳಿಯುವುದು ಬಹುತೇಕ ಪಕ್ಕಾ ಆಗಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಸ್ಪರ್ಧೆ ಸಂಬಂಧ ಇಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರ ಜೆಪಿ ನಗರ ನಿವಾಸದಲ್ಲಿ ಬೆಂಗಳೂರು ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಮನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪ್ರಮುಖ ಮುಖಂಡರ ಸಭೆ ನಡೆಯಿತು. ಈ ಸಭೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರಾಮನಗರ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಮಾಗಡಿ ಮಂಜುನಾಥ್ ಸೇರಿ ಕ್ಷೇತ್ರದ ಅನೇಕ ಮುಖಂಡರು ಭಾಗಿಯಾಗಿದ್ದರು.  ಇದನ್ನೂ ಓದಿ: ನಾಯಿಗಳು ಎಷ್ಟೇ ಬೊಗಳಿದರೂ ಏನು ಮಾಡಲು ಆಗಲ್ಲ, ಆನೆ ನಡೆದಿದ್ದೇ ಹಾದಿ : ಹೆಗಡೆ ಕಿಡಿ

DR MANJUNATH

ಈ ವೇಳೆ ಮಾತನಾಡಿದ ಹೆಚ್‌ಡಿಕೆ, ಇವತ್ತು ಕಾಂಗ್ರೆಸ್‌ನವರು ಯಾವ ರೀತಿ ನಡೆದುಕೊಳ್ಕುತ್ತಿದ್ದಾರೆ. ನಾನು ಯಾವ ರೀತಿ ನಡೆದುಕೊಂಡಿದ್ದೇನೆ. ಸಿ.ಎನ್.ಮಂಜುನಾಥ್ ಅವರನ್ನೇ ನಿಲ್ಲಿಸಬೇಕು ಎಂದು ನನ್ನ ಮೇಲೆ ಬಿಜೆಪಿ ಹೈಕಮಾಂಡ್ (BJP High Command) ಒತ್ತಾಸೆ ಇದೆ. ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ಬಿಜೆಪಿ ನಾಯಕರು ಎಲ್ಲರೂ ಮಂಜುನಾಥ್ ಅವರನ್ನೇ ಒಮ್ಮತ ಅಭ್ಯರ್ಥಿ ಮಾಡಬೇಕು ಎಂದು ಬಯಸಿದ್ದಾರೆ. ಅವರು ನಿಲ್ಲಬೇಕೋ ಬೇಡವೋ ಎನ್ನುವ ತೀರ್ಮಾನವನ್ನು ಮುಖಂಡರಾದ ನಿಮಗೆ ಬಿಡುತ್ತೇನೆ ಎಂದು ಹೇಳಿದರು.

ಡಾ. ಸಿ.ಎನ್.ಮಂಜುನಾಥ್ ಅವರೇ ಎನ್‌ಡಿಎ (NDA) ಅಭ್ಯರ್ಥಿ ಆಗಬೇಕು ಎನ್ನುವುದು ಬಿಜೆಪಿ ಒತ್ತಾಸೆ. ಆದರೆ ನಾನು ಸಿ.ಪಿ.ಯೋಗೇಶ್ವರ್ (CP Yogeshwar) ಅವರ ಹೆಸರನ್ನು ಸೂಚಿಸಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿ ಎಂದಿದ್ದೆ. ಸಿ.ಪಿ.ಯೋಗೇಶ್ವರ್ ಅವರು ಕೂಡ ಮಂಜುನಾಥ್ ಅವರೇ ನಿಲ್ಲಬೇಕು ಎಂದು ಒತ್ತಡ ಹಾಕುತ್ತಿದ್ದಾರೆ. ಮಿತ್ರ ಪಕ್ಷದ ವರಿಷ್ಠರು, ರಾಜ್ಯದ ಬಿಜೆಪಿ ನಾಯಕರ ಭಾವನೆಗಳನ್ನು ನಾವು ಗೌರವಿಸಬೇಕಿದೆ. ಭಾನುವಾರ ನಾನು ನಮ್ಮ ತಂದೆಯವರ ಜತೆ ಎರಡು ಗಂಟೆ ಕಾಲ ಚರ್ಚೆ ಮಾಡಿದೆ. ಮಂಜುನಾಥ್ ಅವರ ಸ್ಪರ್ಧೆ ವಿಚಾರವನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ವೃದ್ಧಮಾವನಿಗೆ ಮನಸೋ ಇಚ್ಛೆ ಥಳಿಸಿದ KEB ಅಧಿಕಾರಿ ಸೊಸೆ

 

ನಮ್ಮನ್ನು ಯಾಕೆ ರಾಜಕೀಯಕ್ಕೆ ಎಳೆಯುತ್ತೀರಿ. ನೆಮ್ಮದಿಯಿಂದ ಇದ್ದೇವೆ, ನಮಗೆ ರಾಜಕೀಯ ಬೇಡ ಅಂತ ನನ್ನ ತಂಗಿ ಮನೆಯಲ್ಲಿ ಕಣ್ಣೀರು ಹಾಕುತ್ತಿದ್ದಾಳೆ. ಇದು ನಮ್ಮ ಮನೆಯ ಪರಿಸ್ಥಿತಿ. ನನ್ನ ನೋವು ನನಗೇ ಗೊತ್ತು. ಆದರೆ ಆ ಕಿರಾತಕರನ್ನು ಮಣಿಸಲೇಬೇಕು. ಇದು ನನ್ನ ಗುರಿ. ಈ ಚುನಾವಣೆಯನ್ನು ಸವಾಲಾಗಿ ಸ್ವೀಕಾರ ಮಾಡಿ ಎಂದು ನಾನು ನಿಮ್ಮಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ಕಾರ್ಯಕರ್ತರಲ್ಲಿ ಹೆಚ್‌ಡಿಕೆ ವಿನಂರಿಸಿದರು.

 

Share This Article