Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಣ್ಣಾಮಲೈ ನಟನೆಯ ‘ಅರಬ್ಬೀ’ ಚಿತ್ರದ ಟ್ರೈಲರ್ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಣ್ಣಾಮಲೈ ನಟನೆಯ ‘ಅರಬ್ಬೀ’ ಚಿತ್ರದ ಟ್ರೈಲರ್ ರಿಲೀಸ್

Cinema

ಅಣ್ಣಾಮಲೈ ನಟನೆಯ ‘ಅರಬ್ಬೀ’ ಚಿತ್ರದ ಟ್ರೈಲರ್ ರಿಲೀಸ್

Public TV
Last updated: March 14, 2024 4:33 pm
Public TV
Share
2 Min Read
ARABBIE 1
SHARE

ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ, ಅಂಗವಿಕಲತೆಯೂ ಸಹ  ಅಡ್ಡಿಯಾಗಲಾರದು ಎಂದು ವಿಶ್ವಾಸ್ ಎಂಬ ವಿಶೇಷಚೇತನ ಯುವಕನೊಬ್ಬ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ಕಥೆಯನ್ನು ನಿರ್ದೇಶಕ ರಾಜ್‌ಕುಮಾರ್ ‘ಅರಬ್ಬೀ’ ಎಂಬ  ಚಿತ್ರದ ಮೂಲಕ  ಹೇಳಹೊರಟಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ತಂದೆ-ತಾಯಿಯ ಜೊತೆಗೆ ತನ್ನ ಎರಡೂ ಕೈಗಳನ್ನು ಕಳೆದುಕೊಳ್ಳುವ ವಿಶ್ವಾಸ್ (Vishwas), ತನ್ನ ಅಂಗವಿಕಲತೆಯ ಕಾರಣದಿಂದಲೇ  ಸಮಾಜದಲ್ಲಿ ಸಾಕಷ್ಟು ಅವಮಾನ ಅನುಭವಿಸುತ್ತಾನೆ. ನಂತರ ತನ್ನನ್ನು ಅವಮಾನಿಸಿದವರೆದುರೇ ಸಾಧನೆಮಾಡಿ ತೋರಿಸಬೇಕೆಂದು ನಿರ್ಧರಿಸಿ, ಹಠ, ಆತ್ಮವಿಶ್ವಾಸದಿಂದಲೇ ಗೆಲುವು ಸಾಧಿಸುತ್ತಾನೆ. ಸ್ವಿಮ್ಮಿಂಗ್ ಕೋಚ್  ಆಗಿ ನಾಯಕನಿಗೆ ಸ್ಪೂರ್ತಿ ತುಂಬುವ ಪಾತ್ರವನ್ನು ಅಣ್ಣಾಮಲೈ ಅವರು ನಿರ್ವಹಿಸಿದ್ದಾರೆ. ನಾಯಕನ ಗೆಳತಿಯೂ ಬೆನ್ನೆಲುಬಾಗಿ ನಿಲ್ಲುತ್ತಾಳೆ. ವಿಶ್ವಾಸ್ ಕೊನೆಗೂ ಅಂದುಕೊಂಡದ್ದನ್ನು ಸಾಧಿಸಿ ತೋರಿಸಿದನೇ ಇಲ್ಲವೇ ಎನ್ನುವುದೇ ಅರಬ್ಬೀ (Arabbe) ಚಿತ್ರದ ಕಾನ್ಸೆಪ್ಟ್.  ಶ್ರೀ ವಿಜಯ ರಾಘವೇಂದ್ರ ಪ್ರೊಡಕ್ಷನ್ಸ್ ಮೂಲಕ ಚೇತನ್ ಸಿ.ಎಸ್. ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೈಲರ್‌ (Trailer) ಅನ್ನು  ಫಿಲಂ ಚೇಂಬರ್ ಅಧ್ಯಕ್ಷ ಎನ್.ಎಂ. ಸುರೇಶ್ ಬಿಡುಗಡೆಗೊಳಿಸಿದರು. ಸರಿಗಮಪ ಖ್ಯಾತಿಯ ಕಂಬದ ರಂಗಯ್ಯ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದು, ಆನಂದ್ ದಿಂಡವಾರ ಕ್ಯಾಮೆರಾ ವರ್ಕ್ ನಿಭಾಯಿಸಿದ್ದಾರೆ.

ARABBIE 2

ವೇದಿಕೆಯಲ್ಲಿ ನಿರ್ಮಾಪಕ ಚೇತನ್ ಸಿ.ಎಸ್. ಮಾತನಾಡಿ ಈ ಹಿಂದೆ ಮಾಚಿದೇವ ಎಂಬ ಚಿತ್ರ ಮಾಡಿದ್ದೆ. ನಿರ್ದೇಶಕ ರಾಜ್‌ಕುಮಾರ್  ಬಂದು ಈ ಕಾನ್ಸೆಪ್ಟ್ ಹೇಳಿದಾಗ  ಇಷ್ಟವಾಯಿತು.  ಛಲವಿದ್ದರೆ ಏನನ್ನಾದರೂ ಮಾಡಿ ತೋರಿಸಬಹುದು ಎಂದು ಈ ಚಿತ್ರದಲ್ಲಿ ತೋರಿಸಿದ್ದೇವೆ.  ಉಡುಪಿ, ಅರಬ್ಬೀ ಸಮುದ್ರದಲ್ಲಿ 32 ದಿನಗಳವರೆಗೆ ಚಿತ್ರೀಕರಿಸಿದ್ದೇವೆ ಎಂದರು.

ARABBIE 4

ನಿರ್ದೇಶಕ ರಾಜಕುಮಾರ್ ಮಾತನಾಡಿ ಕಳೆದ 18 ವರ್ಷಗಳಿಂದ ಸಹ ನಿರ್ದೇಶಕನಾಗಿ ಕೆಲಸ ಮಾಡಿದ್ದೇನೆ.  ಕಾರ್ಯಕ್ರಮವೊಂದರಲ್ಲಿ  ವಿಶ್ವಾಸ್‌ರನ್ನು ನೋಡಿ, ಅವರ ಮೇಲೇ ಒಂದು ಸಿನಿಮಾ ಮಾಡಬಾರದೇಕೆ ಅನಿಸಿತು, ವಿಶ್ವಾಸ್ ಅವರನ್ನು  ಒಪ್ಪಿಸಿ, ನಂತರ ಕೋಚ್ ಪಾತ್ರಕ್ಕೆ ಅಣ್ಣಾ ಮಲೈ ಅವರನ್ನು ಕರೆತಂದೆವು. ಅವರು ಯಾವುದೇ ಸಂಭಾವನೆ ಪಡೆಯದೆ ಅಭಿನಯಿಸಿದರು. ಚಿತ್ರವೀಗ ಬಿಡುಗಡೆಗೆ ಸಿದ್ದವಿದೆ ಎಂದು ಹೇಳಿದರು.

ARABBIE 3

ನಂತರ ನಾಯಕ ವಿಶ್ವಾಸ್ ಮಾತನಾಡಿ ಮೊದಲಬಾರಿಗೆ ಸಿನಿಮಾದಲ್ಲಿ ಆಕ್ಟ್ ಮಾಡಿದ್ದೇನೆ. ಅಣ್ಣಾಮಲೈ (Annamalai) ಅವರೂ ನನ್ನ ಬಗ್ಗೆ ಕೇಳಿ ಒಪ್ಪಿದರು. ಚಿತ್ರದಲ್ಲಿ ನಾನೊಬ್ಬ ಈಜುಗಾರನಾಗಿ ಕಾಣಿಸಿಕೊಂಡಿದ್ದೇನೆ. ದೇವರ ಮೇಲಿನ ಕೋಪವನ್ನು ಹೇಗೆ ವ್ಯಕ್ತಪಡಿಸುವೆ, ದಿನನಿತ್ಯದ ಕೆಲಸಗಳನ್ನು ಹೇಗೆ ಮಾಡಿಕೊಳ್ಳುವೆ. ಸೊಸೈಟಿ ನನ್ನನ್ನು ಯಾವರೀತಿ ನೋಡುತ್ತದೆ ಎಂಬುದನ್ನೂ ಚಿತ್ರದಲ್ಲಿ ತೋರಿಸಿದ್ದಾರೆ. ಈವರೆಗೆ ನಾನು ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಗಳಿಸಿದ್ದೇನೆ ಎಂದು ಹೇಳಿದರು.

 

ನಂತರ ಸಂಗೀತ ನಿರ್ದೇಶಕ ಕಂಬದ ರಂಗಯ್ಯ ಮಾತನಾಡಿ ಹಂಸಲೇಖ ಅವೇ ನನಗೆ ಸ್ಪೂರ್ತಿ. ವೇದಿಕೆಯಲ್ಲಿ ಹಾಡ್ತಿದ್ದ ನನ್ನನ್ನು ಕರೆದು ಈ ಅವಕಾಶ ನೀಡಿದರು. ಚಿತ್ರದಲ್ಲಿ 2 ಹಾಡುಗಳಿದ್ದು, ಚಂದನ್ ಶೆಟ್ಟಿ, ರಾಜೇಶ್ ಕೃಷ್ಣನ್ ಹಾಡಿದ್ದಾರೆ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿದ್ದು ಫಿಲಂ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್, ಉಪಾಧ್ಯಕ್ಷ ವೆಂಕಟೇಶ್, ಯಶವಂತಪುರ ಸರ್ಕಲ್ ಇನ್ಸ್ಪೆಕ್ಟರ್ ಅಜಯ್ ಸಾರಥಿ, ನಾಗೇಂದ್ರ ಅರಸ್, ವಿಜಯ್ ಚೆಂಡೂರ್ ಮುಂತಾದವರು ಚಿತ್ರದ ಬಗ್ಗೆ ಮಾತನಾಡಿದರು. ವಿಶ್ವಾಸ್‌ರಂಥ ವಿಶೇಷಚೇತನರಿಗೆ ನಮ್ಮ ಸಮಾಜ ಬರೀ ಅನುಕಂಪ ತೋರಿಸದೆ, ಅವರ ಪ್ರತಿಭೆಗೆ ತಕ್ಕಂತೆ ಅವಕಾಶಗಳನ್ನು ಕೊಟ್ಟರೆ,  ದೊಡ್ಡ ಸಾಧನೆ ಮಾಡುವರು ಎನ್ನುವುದೇ ಈ ಚಿತ್ರದ ಸಂದೇಶ.

TAGGED:ಅಣ್ಣಾಮಲೈಅರಬ್ಬೀಟ್ರೈಲರ್ವಿಶ್ವಾಸ್
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

North Western Road Transport Corporation
Bagalkot

ಉಪಚುನಾವಣೆ | ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಲಿಖಿತ ಪರೀಕ್ಷೆ ಏ.10ಕ್ಕೆ ಮುಂದೂಡಿಕೆ

Public TV
By Public TV
6 minutes ago
dk shivakumar
Bengaluru City

ಶಿವಶಂಕರಪ್ಪಗಿಂತ ಹೆಚ್ಚು ಮತಗಳ ಅಂತರದಿಂದ ಸಮರ್ಥ್ ಗೆಲುವು – ಡಿಕೆಶಿ

Public TV
By Public TV
12 minutes ago
RCB 3
Cricket

ನಾಳಿನ ಆರ್‌ಸಿಬಿ ಪಂದ್ಯಕ್ಕೆ ಶಾಸಕರಿಗೆ ಸಿಗಲಿದೆ 1+1 ಟಿಕೆಟ್‌

Public TV
By Public TV
29 minutes ago
S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
1 hour ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
2 hours ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?