ನಾಳೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ

Public TV
0 Min Read
lok sabha elections 2024 1

ನವದೆಹಲಿ: 2024ರ ಲೋಕಸಭಾ ಚುನಾವಣೆ (Lok Sabha Elections 2024) ದಿನಾಂಕ ಶನಿವಾರ ಘೋಷಣೆಯಾಗಲಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ (Election Commission) ಸುದ್ದಿಗೋಷ್ಠಿ ಕರೆದಿದೆ.

lok sabha elections 2024 2

2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯಗಳ ಅಸೆಂಬ್ಲಿಗಳ ವೇಳಾಪಟ್ಟಿಯನ್ನು ಪ್ರಕಟಿಸಲು ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗದ ಪತ್ರಿಕಾಗೋಷ್ಠಿ ಕರೆದಿದೆ. ಇದನ್ನೂ ಓದಿ: ರಷ್ಯಾ ಅಧ್ಯಕ್ಷೀಯ ಚುನಾವಣೆ – ಕೇರಳದಲ್ಲಿ ಮತದಾನ

ಏಪ್ರಿಲ್/ಮೇ ತಿಂಗಳಲ್ಲಿ ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳಿಗೆ ಮತದಾನ ನಡೆಯಲಿದೆ. ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ ಈ ವರ್ಷದ ಕೊನೆಯಲ್ಲಿ ಮತದಾನ ಮಾಡಲು ನಿರ್ಧರಿಸಲಾಗಿದೆ.

Share This Article